![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jul 14, 2021, 5:58 PM IST
ನವ ದೆಹಲಿ : ಭಾರತಕ್ಕೆ ಎಂದೂ ಈ ರೀತಿಯ ಅಭದ್ರತೆಯ ಸ್ಥಿತಿ ಒದಗಿರಲಿಲ್ಲ. ಕೇಂದ್ರ ಸರ್ಕಾರವು ದೇಶವನ್ನು ದುಸ್ಥಿತಿಗೆ ಕೊಂಡೊಯ್ದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ತಮ್ಮ, ಅಧಿಕೃತ ಟ್ವೀಟರ್ ಖಾತೆಯ ಮೂಲಕ ಟ್ವೀಟ್ ಮಾಡಿರುವ ಗಾಂಧಿ, ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್ ಎ) ಪೂರ್ವ ಲಡಾಖ್‌ನ ವಾಸ್ತವ ನಿಯಂತ್ರಣ ರೇಖೆಯನ್ನು (ಎಲ್ ಎಸಿ) ಮತ್ತೆ ದಾಟಿದ್ದು, ಭಾರತ ಹಾಗೂ ಚೀನಾ ದೇಶಗಳ ನಡುವೆ ಘರ್ಷಣೆ ನಡೆದಿದೆ ಎಂಬ ಮಾಧ್ಯಮ ವರದಿಯ ತುಣುಕನ್ನು ಉಲ್ಲೇಖಿಸಿ ಕೇಂದ್ರದ ವಿರುದ್ಧ ಟ್ವೀಟ್ ದಾಳಿ ಮಾಡಿದ್ದಾರೆ.
ಇದನ್ನೂ ಓದಿ : ಪೋಸ್ಟ್ ಆಫೀಸ್ ತೆರೆಯಲು ಲಕ್ಷಾಂತರ ರೂ ಹೂಡಿಕೆ ಮಾಡಬೇಕೆಂದೇನಿಲ್ಲ : ಇಲ್ಲಿದೆ ಮಾಹಿತಿ
‘ವಿದೇಶ ಹಾಗೂ ರಕ್ಷಣಾ ನೀತಿಯನ್ನು ಭಾರತ ಸರ್ಕಾರವು ದೇಶೀಯ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದೆ, ನಮ್ಮ ದೇಶವನ್ನು ದುರ್ಬಲಗೊಳಿಸಿದೆ. ಭಾರತ ಎಂದಿಗೂ ಇಷ್ಟೊಂದು ಅಭದ್ರ ಸ್ಥಿತಿ ಎದುರಿಸಿರಲಿಲ್ಲ’ ಎಂದು ಅವರು ಕಿಡಿ ಕಾರಿದ್ದಾರೆ.
GOI’s use of foreign and defence policy as a domestic political tool has weakened our country.
India has never been this vulnerable. pic.twitter.com/1QLCbANYqC
— Rahul Gandhi (@RahulGandhi) July 14, 2021
ಏತನನ್ಮಧ್ಯೆ, ಪೂರ್ವ ಲಡಾಖ್ ನಲ್ಲಿ ಚೀನಾ ಪಡೆ ಭಾರತ ಸೇನೆ ಜತೆ ಮತ್ತೆ ಘರ್ಷಣೆ ನಡೆಸಿದೆ ಎಂಬ ಮಾಧ್ಯಮಗಳ ವರದಿಯನ್ನು ಭಾರತೀಯ ಸೇನಾ ಪಡೆ ಬುಧವಾರ(ಜುಲೈ14) ನಿರಾಕರಿಸಿದೆ.
ನೈಜತೆಯನ್ನು ತಿಳಿಯದೇ ಈ ಸುದ್ದಿಯನ್ನು ಪ್ರಕಟಿಸಲಾಗಿದೆ ಎಂದು ಸೇನೆ ತಿಳಿಸಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದೆ. ಇದೊಂದು ಸುಳ್ಳು ಮಾಹಿತಿಯಾಗಿದೆ ಎಂದು ವಿವರಿಸಿದೆ. ಘರ್ಷಣೆಯ ಮೂಲಕ ಚೀನಾದೊಂದಿಗಿನ ಒಪ್ಪಂದ ಮುರಿದು ಬಿದ್ದಿರುವುದಾಗಿ ಉಲ್ಲೇಖಿಸಿರುವ ಸುದ್ದಿ ಸುಳ್ಳು ಮತ್ತು ಆಧಾರರಹಿತವಾದದ್ದು ಎಂದು ಸೇನೆ ಹೇಳಿದೆ.
ಈ ವರ್ಷದ ಫೆಬ್ರವರಿಯಿಂದ ಸೇನೆಯನ್ನು ಹಿಂಪಡೆಯುವ ಒಪ್ಪಂದದ ನಂತರ ಕೈಗೊಂಡ ನಿರ್ಧಾರದ ಬಳಿಕ ಯಾವುದೇ ಪ್ರದೇಶಗಳಲ್ಲಿ ಉಭಯ ಸೇನೆಗಳು ಅತಿಕ್ರಮಿಸುವ ಪ್ರಯತ್ನ ನಡೆಸಿಲ್ಲ ಎಂದು ತಿಳಿಸಿದೆ. ವರದಿಯಲ್ಲಿ ತಿಳಿಸಿರುವಂತೆ ಗಾಲ್ವಾನ್ ಅಥವಾ ಬೇರೆ ಯಾವುದೇ ಪ್ರದೇಶದಲ್ಲಿ ಘರ್ಷಣೆಗಳು ನಡೆದಿಲ್ಲ ಎಂದು ಸ್ಪಷ್ಟ ಪಡಿಸಿದೆ.
ಇದನ್ನೂ ಓದಿ : ಕೇಂದ್ರ ಸರ್ಕಾರಿ ನೌಕರರಿಗೆ,ಪಿಂಚಣಿದಾರರಿಗೆ ಗುಡ್ ನ್ಯೂಸ್:ತುಟ್ಟಿಭತ್ಯೆ ಶೇ.28ರಷ್ಟು ಹೆಚ್ಚಳ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.