Manipur ಪರಿಸ್ಥಿತಿ ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಸರಕಾರ ಸಿದ್ಧವಿದೆ: ಪ್ರಹ್ಲಾದ್ ಜೋಶಿ
Team Udayavani, Jul 19, 2023, 4:06 PM IST
ಹೊಸದಿಲ್ಲಿ: ಜುಲೈ 20 ರಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ನಿಯಮಗಳ ಅಡಿಯಲ್ಲಿ ಅನುಮತಿಸಲಾದ ಮತ್ತು ಅಧ್ಯಕ್ಷರು ಅನುಮೋದಿಸಿದ ಪ್ರತಿಯೊಂದು ವಿಷಯವನ್ನು ಚರ್ಚಿಸಲು ಸಿದ್ಧ ಎಂದು ಕೇಂದ್ರ ಸರಕಾರ ಬುಧವಾರ ನಡೆದ ಸರ್ವಪಕ್ಷ ಸಭೆಯಲ್ಲಿ ತಿಳಿಸಿದೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಕರೆದಿದ್ದ ವ್ಯವಹಾರ ಸಲಹಾ ಸಮಿತಿಯ ಸಭೆಯಲ್ಲಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಅಧಿವೇಶನಕ್ಕೆ 32 ಶಾಸಕಾಂಗ ಅಂಶಗಳಿವೆ. ಮಣಿಪುರದಲ್ಲಿನ ಹಿಂಸಾಚಾರದ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಾಗಿದೆ ಎಂದು ಹೇಳಿರುವುದಾಗಿ ಮೂಲಗಳು ತಿಳಿಸಿವೆ.
ಬೆಲೆ ಏರಿಕೆ ಮತ್ತು ಮಣಿಪುರ ಹಿಂಸಾಚಾರದಂತಹ ವಿಷಯಗಳ ಬಗ್ಗೆ ಚರ್ಚೆ ವಿಚಾರ ಸಂಧಾನಕ್ಕೆ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಹಿಂದೆ ಹೇಳಿದೆ. ಮೇ 3 ರಂದು ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಪ್ರಾರಂಭವಾದಾಗಿನಿಂದ ಕಾಂಗ್ರೆಸ್ ಸೇರಿ ಹಲವು ವಿಪಕ್ಷಗಳು ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರತಿಕ್ರಿಯೆಯನ್ನು ಕೇಳುತ್ತಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.