ಕರ್ನಾಟಕವು ಅಭಿವೃದ್ಧಿಯ ಶಕ್ತಿ ಕೇಂದ್ರ: ಪ್ರಧಾನಿ ಮೋದಿ
Team Udayavani, Mar 14, 2023, 6:50 AM IST
ನವದೆಹಲಿ: ಕರ್ನಾಟಕವು ಅಭಿವೃದ್ಧಿಯ ಶಕ್ತಿ ಕೇಂದ್ರ ಆಗಿದೆ. ಅನೇಕ ವಲಯಗಳಲ್ಲಿ ರಾಜ್ಯವು ದೇಶಕ್ಕೆ ಕೊಡುಗೆ ನೀಡುತ್ತಿದೆ. ಈ ಅದ್ಭುತ ರಾಜ್ಯದ ಜನರ ಸೇವೆ ಸಲ್ಲಿಸುವುದು ಒಂದು ಗೌರವವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶ್ಲಾಘಿಸಿದ್ದಾರೆ.
ಭಾನುವಾರ ಕರ್ನಾಟಕದ ಮಂಡ್ಯ ಮತ್ತು ಧಾರವಾಡಕ್ಕೆ ಭೇಟಿ ನೀಡಿ ಅನೇಕ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಅವರು ಇದನ್ನು ಸ್ಮರಿಸುತ್ತಾ ಟ್ವೀಟ್ ಮಾಡಿದ್ದು, “ಮಂಡ್ಯ ಭೇಟಿಯು ಅದ್ಭುತವಾಗಿತ್ತು. ಅಲ್ಲಿಯ ಜನರ ಪ್ರೀತಿ, ವಾತ್ಸಲ್ಯವು ಸದಾ ನೆನೆಯುವಂಥದ್ದು,’ ಎಂದು ಬರೆದುಕೊಂಡಿದ್ದಾರೆ.
ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಕರ್ನಾಟಕಕ್ಕೆ ಭೇಟಿ ನೀಡಿದ್ದ ಅವರು, ಸುಮಾರು 16,000 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಉದ್ಘಾಟಿಸಿದ್ದರು.
ಧಾರವಾಡದಲ್ಲಿ ಭಾರತೀಯ ತಂತ್ರಜ್ಞಾನ ಸಂಸ್ಥೆಯ(ಐಐಟಿ) ನೂತನ ಕಟ್ಟಡ ಉದ್ಘಾಟಿದ್ದರು. ಇದೇ ವೇಳೆ ಈ ಎರಡು ನಗರಗಳಲ್ಲಿ ಬೃಹತ್ ರ‍್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದ್ದರು.
Highlights from a special Karnataka visit…grateful to the people of Mandya and Dharwad for the warmth and affection. pic.twitter.com/VCDadOdLNc
— Narendra Modi (@narendramodi) March 12, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.