ಗಾಳಿಪಟದ ಮಾಂಜಾಗೆ ಎನ್‌ಜಿಟಿ ನಿಷೇಧ
Team Udayavani, Jul 12, 2017, 4:00 AM IST
ಹೊಸದಿಲ್ಲಿ: ಹಲವು ವ್ಯಕ್ತಿಗಳು ಹಾಗೂ ಪ್ರಾಣಿಗಳ ಜೀವಕ್ಕೇ ಕಂಟಕವಾಗಿದ್ದ ಮಾಂಜಾಗೆ (ಗಾಳಿಪಟ ಹಾರಿಸಲು ಬಳಸುವ ನೂಲು) ಸಂಪೂರ್ಣ ನಿಷೇಧ ಹೇರಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಮಂಗಳವಾರ ಮಹತ್ವದ ಆದೇಶ ಹೊರಡಿಸಿದೆ.
ನೈಲಾನ್ ಅಥವಾ ಇತರ ಜೈವಿಕವಾಗಿ ವಿಭಜಿಸಲಾಗದ ವಸ್ತುಗಳಿಂದ ತಯಾರಾದ ಮಾಂಜಾವು ಪ್ರಾಣಿ, ಪಕ್ಷಿ ಸಂಕುಲ ಮತ್ತು ಮನುಷ್ಯರ ಜೀವಕ್ಕೆ ಎರವಾಗಿರುವ ಕಾರಣ ಅದಕ್ಕೆ ನಿಷೇಧ ಹೇರುತ್ತಿದ್ದೇವೆ ಎಂದು ಎನ್‌ಜಿಟಿ ಹೇಳಿದೆ. ಜತೆಗೆ, ‘ಮಾಂಜಾ’ದ ತಯಾರಿಕೆ, ಮಾರಾಟ, ಕೊಳ್ಳುವಿಕೆ ಮತ್ತು ಬಳಕೆಯನ್ನು ನಿಲ್ಲಿಸುವಂತೆ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿದೆ.
ಇದೇ ಸಂದರ್ಭದಲ್ಲಿ ನಿಷೇಧವು ಗಾಜು ಲೇಪಿತ ನೈಲಾನ್, ಚೀನೀ ಮಾಂಜಾ ಮತ್ತು ಕಾಟನ್ ಮಾಂಜಾಗೆ ಮಾತ್ರ ಅನ್ವಯವಾಗುತ್ತದೆ ಎಂದು ಎನ್‌ಜಿಟಿ ಮುಖ್ಯಸ್ಥ ನ್ಯಾ| ಸ್ವತಂತ್ರಕುಮಾರ್ ನೇತೃತ್ವದ ಪೀಠ ಸ್ಪಷ್ಟಪಡಿಸಿದೆ. ಪ್ರಾಣಿ ಹಕ್ಕುಗಳ ಸಂಸ್ಥೆ ಪೇಟಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಬಳಿಕ ಎನ್‌ಜಿಟಿ ಈ ತೀರ್ಪು ನೀಡಿದೆ. ಕರ್ನಾಟಕದಲ್ಲಿ ಕಳೆದ ವರ್ಷದ ಜುಲೈಯಲ್ಲೇ ಚೀನೀ ಮಾಂಜಾಗಳಿಗೆ ನಿಷೇಧ ಹೇರಿ ಆದೇಶ ಹೊರಡಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Galaxy: ಹೊಸ ಗ್ಯಾಲಕ್ಸಿ ಸೃಷ್ಟಿಯನ್ನು ಕಂಡುಹಿಡಿದ ಭಾರತದ ಖಗೋಳ ವಿಜ್ಞಾನಿಗಳು!
AI: ಶಾರುಖ್ ಪತ್ನಿ ಗೌರಿ ಮತಾಂತರ?: ಡೀಪ್ ಫೇಕ್ ಫೋಟೋ ವೈರಲ್
BJP Leader; ಇಂಡಿಯಾ ಗೇಟ್‌ಗೆ “ಭಾರತ್ ಮಾತಾ ದ್ವಾರ’ ಹೆಸರಿಡಿ: ಮೋದಿಗೆ ಪತ್ರ
Thalassery: ಸಿಪಿಎಂ ನಾಯಕನ ಹತ್ಯೆ ಪ್ರಕರಣ: ಆರೆಸ್ಸೆಸ್‌ನ 9 ಸದಸ್ಯರಿಗೆ ಜೀವಾವಧಿ ಶಿಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sullia: ಬಸ್ಸಿನಿಂದ ವಿದ್ಯಾರ್ಥಿ ರಸ್ತೆಗೆಸೆಯಲ್ಪಟ್ಟ ಪ್ರಕರಣ; ಚಾಲಕ-ನಿರ್ವಾಹಕರಿಗೆ ಶಿಕ್ಷೆ
Jasprit Bumrah: ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ರೇಸ್‌ನಲ್ಲಿ ಬುಮ್ರಾ
Kerala: 20 ವರ್ಷದಿಂದ ಪಾಳು ಬಿದಿದ್ದ ಮನೆಯ ಫ್ರಿಡ್ಜಲ್ಲಿ ತಲೆಬುರುಡೆ ಪತ್ತೆ!
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Bus Fare Hike: ಕರ್ನಾಟಕಕ್ಕೆ ಕೇರಳ ಸರಕಾರಿ ಬಸ್ ಟಿಕೆಟ್ ದರ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.