ಸಾಮಾಜಿಕ ಅಂತರದ ಮೂಲ ಮಂತ್ರದೊಂದಿಗೆ ಚೇತರಿಸಿಕೊಳ್ಳುತ್ತಿದೆ ದೇಶದ ಅರ್ಥ ವ್ಯವಸ್ಥೆ: ಪ್ರಧಾನಿ
Team Udayavani, Jun 16, 2020, 6:10 PM IST
ನವದೆಹಲಿ: ಕೋವಿಡ್ 19 ವೈರಸ್ ಕಾಟದ ಕಾರಣದಿಂದ ಸರಿ ಸುಮಾರು ಎರಡು ತಿಂಗಳ ಲಾಕ್ ಡೌನ್ ಪರಿಸ್ಥಿತಿಯನ್ನು ಸಡಿಲಿಸಿ ದೇಶದ ಹಲವು ಭಾಗಗಳಲ್ಲಿ ಆರ್ಥಿಕ ಚಟುವಟಿಕೆಗಳಿಗೆ ಷರತ್ತಬದ್ಧ ಅನುಮತಿಯನ್ನು ನೀಡಿದ ಬಳಿಕ ದೇಶದ ಅರ್ಥ ವ್ಯವಸ್ಥೆಯಲ್ಲಿ ಚೇತರಿಕೆಯ ಸ್ಥಿತಿ ಕಂಡುಬರುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಹೇಳಿದ್ದಾರೆ.
ಕೋವಿಡ್ 19 ವೈರಸ್ ವಿರುದ್ಧದ ಭಾರತದ ಹೋರಾಟವು ‘ಒಕ್ಕೂಟ ವ್ಯವಸ್ಥೆಯ ಸಹಭಾಗಿತ್ವದ’ ಸೊಬಗು ಹಾಗೂ ಶಕ್ತಿಯನ್ನು ಅನಾವರಣಗೊಳಿಸಿದೆ ಎಂದು ಪ್ರದಾನಿ ಮೋದಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.
ಕೋವಿಡ್ 19 ಪಸರಿಸುತ್ತಿರುವ ಈ ಸಂದರ್ಭದಲ್ಲಿ ಆರೋಗ್ಯ ವ್ಯವಸ್ಥೆಯನ್ನು ಇನ್ನಷ್ಟು ಬಲಗೊಳಿಸುವುದು ಹೇಗೆ ಎಂಬುದರ ಕುರಿತಾಗಿ ಪ್ರಧಾನಿ ಮೋದಿ ಅವರು ಇಂದು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ನಡೆದ ಸಭೆಯ ಸಂದರ್ಭದಲ್ಲಿ ಈ ವಿಚಾರಗಳ ಮೇಲೆ ಬೆಳಕು ಚೆಲ್ಲಿದ್ದಾರೆ.
ಕಂಟೈನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ದೆಶದ ಉಳಿದ ಭಾಗಗಳಲ್ಲಿ ಅನ್ ಲಾಕ್ 1 ನ್ನು ಜಾರಿಗೊಳಿಸಿದ ಬಳಿಕ ಜನಜೀವನ ಸಹಜ ಸ್ಥಿತಿಯತ್ತ ಮರಳುತ್ತಿದೆ. ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ನಾವೆಲ್ಲಾ ನಮ್ಮ ಕೆಲಸ ಕಾರ್ಯಗಳನ್ನು ನಿರ್ವಹಿಸಿತೊಡಗಿದಲ್ಲಿ ಈ ಮಾರಕ ವೈರಸ್ ವಿರುದ್ಧ ನಾವು ಸಶಕ್ತವಾಗಿ ಹೋರಾಡಬಹುದಾಗಿದೆ ಎಂದು ಪ್ರಧಾನಿ ಮೋದಿ ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ಮೂರು ಹಂತಗಳ ಯೋಜನೆಯಲ್ಲಿ ನಾವು ದೇಶದ ಆರ್ಥಿಕತೆಯನ್ನು ಮರಳಿ ಹಳಿಗೆ ತರುವ ಪ್ರಯತ್ನದಲ್ಲಿದ್ದೇವೆ. ಅದರ ಒಂದನೇ ಹಂತ ಅನ್ ಲಾಕ್ 1ರ ರೂಪದಲ್ಲಿ ಈಗಾಗಲೇ ಜಾರಿಯಲ್ಲಿದೆ. ದೇಶೀ ವಿಮಾನ ಸೇವೆಗಳ ಪುನರಾರಂಭಗೊಂಡಿವೆ. ಶಾಪಿಂಗ್ ಮಾಲ್ ಗಳು, ರೆಸ್ಟೋರೆಂಟ್ ಗಳು, ಧಾರ್ಮಿಕ ಕೇಂದ್ರಗಳನ್ನು ಈಗಾಗಲೇ ತೆರೆಯಲಾಗಿದೆ ಮತ್ತು ಹೊಸ ಮಾರ್ಗದರ್ಶಿ ಸೂತ್ರಗಳನ್ವಯ ಸಾರ್ವಜನಿಕ ಸಾರಿಗೆ, ಟ್ಯಾಕ್ಸಿ ಮತ್ತು ಕ್ಯಾಬ್ ಗಳು ಕಾರ್ಯಾರಂಭ ಮಾಡಿವೆ. ಆದರೆ ಕಂಟೈನ್ಮೆಂಟ್ ಪ್ರದೇಶಗಳಲ್ಲಿ ಈ ತಿಂಗಳ ಅಂತ್ಯದವರೆಗೆ ಲಾಕ್ ಡೌನ್ ಪರಿಸ್ಥಿತಿ ಇರಲಿದೆ ಎಂದು ಪ್ರಧಾನಿಯವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಇನ್ನು ಕೆಲವೇ ದಿನಗಳಲ್ಲಿ ವಿವಿಧ ರಾಜ್ಯಗಳಿಂದ ಆರ್ಥಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಧನಾತ್ಮಕ ವಿಷಯಗಳು ಕೇಳಿಬರಲಿವೆ ಎಂಬ ವಿಶ್ವಾಸ ನನಗೆ ಇದೆ ಎಂದು ಪ್ರಧಾನಿ ಮೋದಿ ಹೇಳಿದರು ಮಾತ್ರವಲ್ಲದೇ, ಆರ್ಥಿಕ ಕ್ಷೇತ್ರದಲ್ಲಿ ಈಗಾಗಲೇ ಧನಾತ್ಮಕ ಬೆಳವಣಿಗೆಗಳು ದಾಖಲಾಗುತ್ತಿದೆ. ಉದಾಹರಣೆಗೆ, ವಿದ್ಯುಚ್ಛಕ್ತಿ ಬಳಕೆಯಲ್ಲಿ ಏರಿಕೆಯಾಗಿದೆ, ಲಾಕ್ ಡೌನ್ ಮೊದಲಿನ ಅವಧಿಗಿಂತ ದ್ವಿಚಕ್ರ ವಾಹನಗಳ ಮಾರಾಟದಲ್ಲಿ 70% ಹೆಚ್ಚಳವಾಗಿದೆ ಇನ್ನು ಕೃಷಿ ಕ್ಷೇತ್ರದಲ್ಲೂ ಉತ್ತಮ ಬೆಳವಣಿಗೆಗಳು ದಾಖಲಾಗುತ್ತಿವೆ ಎಂಬ ಸಂತಸದ ವಿಚಾರವನ್ನು ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿಗಳ ಸಭೆಯಲ್ಲಿ ಹಂಚಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
Supreme Court: ಮಸೀದಿ ಆವರಣದೊಳಗೆ ಜೈ ಶ್ರೀರಾಮ್ ಎಂದರೆ ಅಪರಾಧವೇ: ಸುಪ್ರೀಂ
MUST WATCH
ಹೊಸ ಸೇರ್ಪಡೆ
Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ
ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ
Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ
Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!
ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.