ಯುವತಿ ಹತ್ಯೆ ಪ್ರಕರಣ: 70 ದಿನಗಳಲ್ಲೇ ಅಪರಾಧಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ಕೋರ್ಟ್
Team Udayavani, May 6, 2022, 7:30 AM IST
ಸೂರತ್: ಕಳೆದ ಫೆಬ್ರವರಿಯಲ್ಲಿ 21 ವರ್ಷದ ಕಾಲೇಜು ವಿದ್ಯಾರ್ಥಿನಿ ಗ್ರೀಷ್ಮಾ ವೆಕಾರಿಯಾಳನ್ನು ಕುಟುಂಬ ಸದಸ್ಯರೆದುರೇ ಕತ್ತು ಸೀಳಿ ಕೊಲೆಗೈದಿದ್ದ ಫೆನಿಲ್ ಗೊಯಾನಿಗೆ ಸೂರತ್‌ನ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಇದನ್ನು ಅಪರೂಪದಲ್ಲಿ ಅಪರೂಪದ ಪ್ರಕರಣ ಎಂದು ಪರಿಗಣಿಸಿರುವ ನ್ಯಾಯಾಲಯ, ಘಟನೆ ನಡೆದ ಕೇವಲ 70 ದಿನಗಳಲ್ಲಿ ಅಪರಾಧಿಗೆ ಶಿಕ್ಷೆ ಘೋಷಿಸಿದೆ.
ತೀರ್ಪು ನೀಡುವ ವೇಳೆ, ನಿರ್ಭಯಾ ಪ್ರಕರಣವನ್ನು ಉಲ್ಲೇಖೀಸಿದ ಸೂರತ್‌ನ ಪ್ರಿನ್ಸಿಪಲ್ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಧೀಶ ಕೆ.ಕೆ.ವ್ಯಾಸ್, ಮಹಿಳೆಯರ ವಿರುದ್ಧದ ಇಂಥ ಘೋರ ಅಪರಾಧಗಳನ್ನು ತಡೆಯಬೇಕೆಂದರೆ ಕಠಿನ ಶಿಕ್ಷೆ ವಿಧಿಸಬೇಕಾದ ಅಗತ್ಯವಿದೆ’ ಎಂದಿದ್ದಾರೆ.
ತನ್ನನ್ನು ಪ್ರೀತಿಸುವಂತೆ ಗ್ರೀಷ್ಮಾಳಿಗೆ ಪೀಡಿಸುತ್ತಿದ್ದ ಫೆನಿಲ್, ಆಕೆ ಒಪ್ಪದ ಕಾರಣ ಫೆ.16ರ ಹಾಡಹಗಲೇ ರಸ್ತೆ ಮಧ್ಯೆ ಕತ್ತುಸೀಳಿ ಕೊಲೆಗೈದಿದ್ದ. ರಕ್ಷಿಸಲು ಬಂದ ಆಕೆಯ ಅಣ್ಣ ಮತ್ತು ಚಿಕ್ಕಪ್ಪನಿಗೂ ಇರಿದಿದ್ದ ಆತ ಸ್ವಯಂ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಒಂದೇ ವಾರದಲ್ಲಿ 2,500 ಪುಟಗಳ ಆರೋಪಪಟ್ಟಿ ಸಲ್ಲಿಸಿದ ಪೊಲೀಸರು, 25 ಪ್ರತ್ಯಕ್ಷ ಸಾಕ್ಷ್ಯಗಳು, 120 ದಾಖಲೆಗಳನ್ನು ಪುರಾವೆಯಾಗಿ ಒದಗಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.