ನೂತನ ಸಂಸತ್ ಭವನಕ್ಕೆ ಇಂದು ಪ್ರಧಾನಿ ಮೋದಿ ಶಂಕು ಸ್ಥಾಪನೆ
Team Udayavani, Dec 10, 2020, 8:24 AM IST
ಹೊಸದಿಲ್ಲಿ: ನೂತನ ಸಂಸತ್ ಭವನ ಕಟ್ಟಡಕ್ಕೆ ಇಂದು ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಶಂಕು ಸ್ಥಾಪನೆ ಮಾಡಲಿದ್ದಾರೆ.
ಮಧ್ಯಾಹ್ನ 12:55 ಕ್ಕೆ ಸಮಾರಂಭವು ಪ್ರಾರಂಭವಾಗಲಿದೆ. ಭೂಮಿ ಪೂಜೆ ಮತ್ತು ಅಡಿಗಲ್ಲು ಹಾಕುವ ಕಾರ್ಯಕ್ರಮ ಮಧ್ಯಾಹ್ನ 1 ಗಂಟೆಗೆ ನಡೆಯಲಿದೆ. ಮಧ್ಯಾಹ್ನ 2.15 ಕ್ಕೆ ಪ್ರಧಾನಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಯೋಜನೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗದ್ದು, ಇದರ ಇತ್ಯರ್ಥ ಇನ್ನೂ ಆಗಿಲ್ಲವಾದ ಕಾರಣ ಭವನದ ನಿರ್ಮಾಣವನ್ನು ತಕ್ಷಣ ಪ್ರಾರಂಭಿಸಲು ಸಾಧ್ಯವಿಲ್ಲ.
ಇದನ್ನೂ ಓದಿ:ಶಾಲಾ ಬ್ಯಾಗ್ ತೂಕ ಇಳಿಕೆ: “ಸ್ಕೂಲ್ ಬ್ಯಾಗ್ ಪಾಲಿಸಿ-2020′ ಸಿದ್ಧಪಡಿಸಿದ ಕೇಂದ್ರ
ನೂತನ ಭವನ ನಾಲ್ಕು ಮಹಡಿಯ ಕಟ್ಟಡವಾಗಿರಲಿದ್ದು, 64,500 ಚದರ ಮೀಟರ್ ವಿಸ್ತೀರ್ಣದಲ್ಲಿರಲಿದೆ. ಅಂದಾಜು 971 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಭವನ 2022ರ ಆಗಸ್ಟ್ ನಲ್ಲಿ ಪೂರ್ಣವಾಗಿ ಉದ್ಘಾಟನೆಯಾಗಲಿದೆ.
ಭೂಕಂಪನ ನಿರೋಧಕ ವ್ಯವಸ್ಥೆಯಡಿ ನೂತನ ಭವನವನ್ನು ನಿರ್ಮಿಸಲಾಗುತ್ತಿದೆ. ಲೋಕಸಭಾ ಹಾಗೂ ರಾಜ್ಯಸಭಾ ಸದನಗಳಲ್ಲಿ ಕ್ರಮವಾಗಿ 888 ಮತ್ತು 384 ಆಸನ ಸಾಮರ್ಥ್ಯ ಹೊಂದಿರಲಿವೆ. ಮುಂದಿನ ದಿನಗಳಲ್ಲಿ ಉಭಯ ಸದನಗಳ ಸದಸ್ಯರ ಸಂಖ್ಯೆಯಲ್ಲಿ ಏರಿಕೆಯಾಗುವ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಆಸನ ಸಾಮರ್ಥ್ಯ ಹೆಚ್ಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ
Maharashtra polls; ಫಲಿತಾಂಶದ ಬಳಿಕವೇ ಸಿಎಂ ಯಾರೆಂದು ನಿರ್ಧಾರ: ಕಾಂಗ್ರೆಸ್
Andhra; ಮಿತ್ರ ಪಕ್ಷ ಟಿಡಿಪಿಯ ಗೃಹ ಸಚಿವೆಗೇ ವಾರ್ನಿಂಗ್ ನೀಡಿದ ಡಿಸಿಎಂ ಪವನ್ ಕಲ್ಯಾಣ್!
Agra: ಭಾರತೀಯ ವಾಯುಪಡೆ ಮಿಗ್ 29 ಯುದ್ಧ ವಿಮಾನ ಪತನ, ಪೈಲಟ್ ಪಾರು
Jammu Kashmir: ಕಲಂ-370- ವಿಧಾನಸಭೆ ಮೊದಲ ಕಲಾಪದಲ್ಲೇ ಪಿಡಿಪಿ-ಬಿಜೆಪಿ ಕೋಲಾಹಲ
MUST WATCH
ಹೊಸ ಸೇರ್ಪಡೆ
Pro Kabaddi;ಬೆಂಗಳೂರು ಬುಲ್ಸ್ ಜಯಭೇರಿ: ತಮಿಳ್ ತಲೈವಾಸ್‌ಗೆ 32-36 ಅಂಕಗಳ ಸೋಲು
Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡರ್ ಸ್ಫೋ*ಟ: ಅಪಾರ ಹಾನಿ
Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ
By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ
Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.