ತಾಂತ್ರಿಕ ದೋಷದಿಂದ ವಿಫಲವಾಯ್ತು ಜಿಎಸ್ಎಲ್ವಿ-ಎಫ್ 10 ಮಿಷನ್ !
Team Udayavani, Aug 12, 2021, 9:22 AM IST
ಬೆಂಗಳೂರು: ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆಗೊಂಡ ಜಿಎಸ್ಎಲ್ವಿ- ಎಫ್ 10 ರಾಕೆಟ್ ತಾಂತ್ರಿಕ ಕಾರಣದಿಂದ ತನ್ನೊಳಗಿದ್ದ ಉಪಗ್ರಹವನ್ನು ನಿಗದಿತ ಜಾಗಕ್ಕೆ ಸೇರಿಸಲು ವಿಫಲವಾಗಿದೆ. EOS-3 ಎಂಬ ಭೂ ವೀಕ್ಷಣಾ ಸೆಟಲೈಟನ್ನು ಹೊತ್ತೊಯ್ದಿದ್ದ ರಾಕೆಟ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ.
EOS-3 ಸೆಟಲೈಟ್ ನ್ನು ಜಿಯೋಸಿಂಕ್ರೋನಸ್ ಟ್ರಾನ್ಸ್‌ಫರ್ ಆರ್ಬಿಟ್‌ನಲ್ಲಿ ಇರಿಸಲು 51.70 ಮೀಟರ್ ಎತ್ತರದ ಜಿಎಸ್ಎಲ್ವಿ-ಎಫ್10 ರಾಕೆಟ್ನಲ್ಲಿ ಯಶಸ್ವಿಯಾಗಿ ಮುಂಜಾನೆ 5.43ಕ್ಕೆ ಉಡಾವಣೆ ಮಾಡಲಾಗಿತ್ತು. ಲಿಫ್ಟ್-ಆಫ್‌ಗೆ ಮುಂಚಿತವಾಗಿ, ಲಾಂಚ್ ಆಥರೈಸೇಶನ್ ಬೋರ್ಡ್ ಯೋಜಿಸಿದಂತೆ ಸಾಮಾನ್ಯ ಲಿಫ್ಟ್-ಆಫ್‌ಗಾಗಿ ಡೆಕ್‌ಗಳನ್ನು ತೆರವುಗೊಳಿಸಿತು. ಮೊದಲ ಮತ್ತು ಎರಡನೇ ಹಂತಗಳಲ್ಲಿ ರಾಕೆಟ್ನ ಕಾರ್ಯಕ್ಷಮತೆ ಸಾಮಾನ್ಯವಾಗಿತ್ತು. ಆದರೆ ಕೆಲವು ನಿಮಿಷಗಳ ನಂತರ ರಾಕೆಟ್ನಲ್ಲಿ ತಾಂತ್ರಿಕ ಅಡಚಣೆ ಉಂಟಾಗಿದ್ದು ಕಂಡು ಬಂದಿತು ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: ಶಾಸಕ ಸತೀಶ್ ರೆಡ್ಡಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಕ್ರಯೋಜೆನಿಕ್ ಹಂತದ ವೇಳೆ ಉಂಟಾದ ತಾಂತ್ರಿಕ ಅಡಚಣೆಯಿಂದಾಗಿ ಮಿಷನ್ ಅಪೂರ್ಣವಾಗಿದೆ ಎಂದು ಇಸ್ರೋ ತಿಳಿಸಿದೆ.
ನೈಸರ್ಗಿಕ ವಿಕೋಪ ದುರಂತಗಳು ಸಂಭವಿಸಿದಾಗ ಬಹಳ ತ್ವರಿತವಾಗಿ ಪರಿಸ್ಥಿತಿಯನ್ನು ಅವಲೋಕಿಸಲು ನೆರವಾಗಬಲ್ಲ ಸೆಟಲೈಟ್ ಇದಾಗಿತ್ತು. ದುರಂತದ ಪ್ರದೇಶಗಳ ಚಿತ್ರಗಳನ್ನ ಇದು ಆಗಾಗ್ಗೆ ಒದಗಿಸುವ ಕಾರ್ಯಕ್ಕೆ ಸಿದ್ದ ಮಾಡಲಾಗಿತ್ತು. ಪ್ರಕೃತಿ ವಿಕೋಪ ಘಟನೆಗಳ ಮುನ್ಸೂಚನೆ, ಚಂಡಮಾರುತದ ಪರಿಶೀಲನೆ, ಮೇಘ ಸ್ಫೋಟ, ಸಿಡಿಲು ಇತ್ಯಾದಿ ದುರಂತಗಳನ್ನ ಸಮರ್ಕಪವಾಗಿ ಪರಿಶೀಲನೆ ನಡೆಸಲು ಇದು ನೆರವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
Rajasthan:ಪೊಲೀಸ್ ಭದ್ರತೆಗೆ ಆದ 9 ಲಕ್ಷ ರೂ.ಬಿಲ್ ಪಾವತಿಸಿ: ರಾಜಸ್ಥಾನ ರೈತನಿಗೆ ನೋಟಿಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Women’s ODI: ಹರ್ಲೀನ್ ಶತಕ; ವಿಂಡೀಸ್ ವಿರುದ್ಧ ಭಾರತಕ್ಕೆ 2-0 ಸರಣಿ ಜಯ
Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ
BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್
ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ
New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.