ಸದ್ಯ ಬಟ್ಟೆ ದುಬಾರಿ ಇಲ್ಲ: ನಿರ್ಧಾರ ಮುಂದೂಡಿದ ಜಿಎಸ್ಟಿ ಮಂಡಳಿ
Team Udayavani, Jan 1, 2021, 6:52 AM IST
ಹೊಸದಿಲ್ಲಿ: ಬಟ್ಟೆ ಮತ್ತು ಚಪ್ಪಲಿ ಮೇಲಿನ ಜಿಎಸ್ಟಿಯನ್ನು ಹೆಚ್ಚಿಸುವ ಪ್ರಸ್ತಾವವನ್ನು ಕೈಬಿಟ್ಟಿರುವ
ಜಿಎಸ್ಟಿ ಮಂಡಳಿ, ಗ್ರಾಹಕರಿಗೆ ಕೊಂಚ ನೆಮ್ಮದಿ ನೀಡಿದೆ. ಈ ಹಿಂದೆ ಬಟ್ಟೆ ಮೇಲಿನ ಜಿಎಸ್ಟಿಯನ್ನು ಶೇ.5ರಿಂದ 12ಕ್ಕೆ ಹೆಚ್ಚಿಸುವುದು ಮತ್ತು ಒಂದು ಸಾವಿರ ರೂ. ಒಳಗಿನ ಚಪ್ಪಲಿಗಳ ಮೇಲಿನ ತೆರಿಗೆ ಯನ್ನು ಹೆಚ್ಚಿಸುವ ಸಂಬಂಧ ಜಿಎಸ್ಟಿ ಮಂಡಳಿಗೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು.
ಶುಕ್ರವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆದ ಜಿಎಸ್ಟಿ ಮಂಡಳಿಯ 46ನೇ ಸಭೆಯಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗೆದು ಕೊಳ್ಳಬೇಕಾಗಿತ್ತು. ಆದರೆ, ಎಲ್ಲ ರಾಜ್ಯಗಳು ಮತ್ತು ಮಾರುಕಟ್ಟೆಯಿಂದ ತೀವ್ರ ಆಕ್ಷೇಪ ಬಂದ ಹಿನ್ನೆಲೆಯಲ್ಲಿ ಬೆಲೆ ಹೆಚ್ಚಳ ನಿರ್ಧಾರವನ್ನು ಮುಂದೂಡುವ ಬಗ್ಗೆ ಸರ್ವಾನುಮತದಿಂದ ತೀರ್ಮಾನ ತೆಗೆದುಕೊಳ್ಳಲಾಯಿತು. ಫೆಬ್ರವರಿ ಅಂತ್ಯದಲ್ಲಿ ಮತ್ತೂಮ್ಮೆ ಜಿಎಸ್ಟಿ ಮಂಡಳಿ ಸಭೆ ನಡೆಯಲಿದ್ದು, ಆಗ ಈ ಬಗ್ಗೆ ತೀರ್ಮಾನ ತೆಗೆದು ಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಗುಜರಾತ್, ಕೇರಳ, ಪಶ್ಚಿಮ ಬಂಗಾಲ, ದಿಲ್ಲಿ, ರಾಜಸ್ಥಾನ ಮತ್ತು ತಮಿಳುನಾಡು ರಾಜ್ಯಗಳು ಯಾವುದೇ ಕಾರಣಕ್ಕೂ ಬಟ್ಟೆ ಮತ್ತು ಚಪ್ಪಲಿ ಮೇಲಿನ ಜಿಎಸ್ಟಿ ಏರಿಕೆ ಮಾಡಬಾರದು ಎಂದು ಒತ್ತಾಯಿಸಿದ್ದವು. ಅಲ್ಲದೆ ಮಾರುಕಟ್ಟೆ ಕಡೆಯಿಂದಲೂ ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಒಂದೊಮ್ಮೆ ಜ.1ರಿಂದ ಬೆಲೆ ಹೆಚ್ಚಳ ನಿರ್ಧಾರ ಜಾರಿಯಾದರೆ, ಭಾರೀ ಕಷ್ಟವಾಗುತ್ತದೆ ಎಂದು ಹೇಳಿದ್ದರು.
ಈಗ ಬೆಲೆ ಹೆಚ್ಚಳದ ಬಗ್ಗೆ ನಿರ್ಧಾರ ತೆಗೆದುಕೊಳ್ಳದೆ ಇರುವುದರಿಂದ, ಸದ್ಯದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಮಿತಿಯು ಮತ್ತೂಮ್ಮೆ ಸಭೆ ಸೇರಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.