GST; ಜೀವ, ಆರೋಗ್ಯ ವಿಮೆಗೆ ಜಿಎಸ್‌ಟಿ ವಿನಾಯಿತಿ?
ಜಿಎಸ್‌ಟಿ ದರ ಪರಾಮರ್ಶೆ ಸಚಿವರ ಸಮಿತಿಯಿಂದ ಮಂಡಳಿಗೆ ಪ್ರಸ್ತಾವನೆ
Team Udayavani, Oct 20, 2024, 7:50 AM IST
ಹೊಸದಿಲ್ಲಿ: ಜೀವ ವಿಮೆ, ಹಿರಿಯ ನಾಗರಿಕರ ಆರೋಗ್ಯ ವಿಮೆ ಗಳನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಬೇಕು ಎಂಬ ಆಗ್ರಹಕ್ಕೆ ಜಿಎಸ್‌ಟಿ ದರ ಪರಾಮರ್ಶೆಗೆ ಸಂಬಂಧಿಸಿದ ಸಚಿವರ ಸಮಿತಿ ಮಣಿದಿದ್ದು, ಈ ಕುರಿತ ಪ್ರಸ್ತಾವವನ್ನು ಜಿಎಸ್‌ಟಿ ಮಂಡಳಿಯ ಮುಂದಿಡಲು ನಿರ್ಧರಿಸಿದೆ.
ಶನಿವಾರ ಸಚಿವರ ಸಮಿತಿಯ ಸಭೆ ನಡೆದಿದ್ದು, ಜೀವ ವಿಮೆ ಹಾಗೂ ಹಿರಿಯ ನಾಗರಿಕರ ಆರೋಗ್ಯ ವಿಮೆಗಳನ್ನು ಜಿಎಸ್‌ಟಿಯಿಂದ ಹೊರಗಿಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಇಷ್ಟಾಗಿಯೂ 5 ಲಕ್ಷ ರೂ.ಗಳಿಗಿಂತ ಹೆಚ್ಚಿರುವ ಆರೋಗ್ಯ ವಿಮೆಯ ಕಂತಿನ ಮೇಲೆ ವಿಧಿಸಲಾಗುವ ಶೇ. 18 ಜಿಎಸ್‌ಟಿಯನ್ನು ಮುಂದುವರಿಸುವ ಸಾಧ್ಯತೆ ಇದೆ.
ಜಿಎಸ್‌ಟಿ ಪರಿಷ್ಕರಣೆಯಿಂದ ಸುಮಾರು 22,000 ಕೋ.ರೂ. ಆದಾಯವನ್ನು ನಿರೀಕ್ಷಿಸಲಾಗಿದ್ದು, ಜೀವ ವಿಮೆಗಳ ಮೇಲಿನ ಜಿಎಸ್‌ಟಿ ಇಳಿಕೆಯಿಂದ ರಾಜ್ಯಗಳಿಗೆ ಉಂಟಾಗುವ ನಷ್ಟವನ್ನು ಇದು ಸರಿದೂಗಿಸಲಿದೆ ಎನ್ನಲಾಗಿದೆ. ಮುಂದಿನ ತಿಂಗಳು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ನಡೆಯಲಿರುವ ಜಿಎಸ್‌ಟಿ ಮಂಡಳಿಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ.
ಯಾವುದು ಅಗ್ಗ?
20 ಲೀ. ಮತ್ತು ಅದಕ್ಕೂ ಹೆಚ್ಚಿನ ಪ್ಯಾಕೇಜ್x ಕುಡಿಯುವ ನೀರನ್ನು ಶೇ. 18ರ ಬದಲಿಗೆ ಶೇ. 5ರ ಜಿಎಸ್‌ಟಿ ಸೇರಿಸುವ ಪ್ರಸ್ತಾವವಿದೆ. ಹಾಗೆಯೇ 10 ಸಾವಿರ ರೂ.ಗಳಿಗಿಂತ ಕಡಿಮೆ ಬೆಲೆಯ ಬೈಸಿಕಲ್ ಹಾಗೂ ನೋಟ್‌ಬುಕ್‌ಗಳನ್ನು ಕೂಡ ಶೇ. 12ರಿಂದ ಶೇ. 5 ಜಿಎಸ್‌ಟಿ ವರ್ಗಕ್ಕೆ ಸೇರಿಸುವ ಪ್ರಸ್ತಾವವಿದೆ.
ಯಾವುದು ತುಟ್ಟಿ?
15 ಸಾವಿರ ರೂ. ಹಾಗೂ ಅದಕ್ಕಿಂತ ಮೇಲ್ಪಟ್ಟ ಜೋಡಿ ಶೂ, 25 ಸಾವಿರ ರೂ. ಹಾಗೂ ಅದಕ್ಕಿಂತ ಮೇಲ್ಪಟ್ಟ ಕೈಗಡಿಯಾರಗಳನ್ನು ಶೇ. 18ರಿಂದ ಶೇ. 28 ಜಿಎಸ್‌ಟಿಗೆ ವರ್ಗಕ್ಕೆ ಸೇರಿಸುವ ಪ್ರಸ್ತಾವವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Divorce: 29 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಎ.ಆರ್.ರೆಹಮಾನ್
ಮಣಿಪುರವನ್ನು ರಕ್ಷಿಸಿ: ರಾಷ್ಟ್ರಪತಿಗೆ ಖರ್ಗೆ ಪತ್ರ
Chennai: ಕೃಷ್ಣಗೆ ಎಂ.ಎಸ್.ಸುಬ್ಬುಲಕ್ಷ್ಮಿಪ್ರಶಸ್ತಿ ನೀಡಿಕೆಗೆ ಮದ್ರಾಸ್ ಹೈಕೋರ್ಟ್ ತಡೆ
Savarkar defamation case:: ಡಿ.2ರಂದು ಖುದ್ದು ಹಾಜರಾಗಲು ರಾಹುಲ್‌ಗೆ ಆದೇಶ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.