ಡಿ.ಸಿ.ಗಳ ಮೂಲಕ ಮಾರ್ಗಸೂಚಿ ಅನುಷ್ಠಾನ
ಕೇಂದ್ರ ಸರ್ಕಾರದ ವಿನೂತನ ಕ್ರಮ
Team Udayavani, Apr 19, 2020, 7:13 AM IST
ಹೊಸದಿಲ್ಲಿ: ಇತ್ತೀಚೆಗೆ ಬಿಡುಗಡೆ ಮಾಡಲಾಗಿರುವ “ಲಾಕ್‌ಡೌನ್ ಮಾರ್ಗಸೂಚಿಗಳ’ನ್ನು ನೇರವಾಗಿ ಜಿಲ್ಲಾಧಿಕಾರಿಗಳ ಮೂಲಕ ಸಮರ್ಪಕ ವಾಗಿ ಜಾರಿ ಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.
ಪ್ರಧಾನಿ ಕಚೇರಿ ಹಾಗೂ ಕೇಂದ್ರ ಸಂಪುಟದ ಕಾರ್ಯದರ್ಶಿ ಕಚೇರಿಯ ಅಧಿಕಾರಿಗಳ ತಂಡ ಈಗಾಗಲೇ ದೇಶದ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಇತ್ತೀಚೆಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಈ ಬಗ್ಗೆ ಸೂಚನೆ ನೀಡಿದ್ದಾರೆ.
ತಮ್ಮ ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸಾಮಾಜಿಕ ಅಂತರ ಇತ್ಯಾದಿ ನಿಯಮಗಳು ಉಲ್ಲಂಘನೆ ಆಗದಂತೆ ಮಾರ್ಗ ಸೂಚಿಗಳನ್ನು ಹೇಗೆ ಸಮರ್ಪಕವಾಗಿ ಅನುಷ್ಠಾನ ಗೊಳಿಸಬಹುದು ಎಂಬುದರ ಬಗ್ಗೆ ನೀಲನಕ್ಷೆ ಯೊಂದನ್ನು ತಯಾರಿ ಸುವಂತೆ ಜಿಲ್ಲಾಧಿಕಾರಿ ಗಳಿಗೆ ಸೂಚಿಸಲಾಗಿದೆ.
“ಲಾಕ್‌ಡೌನ್ ಇನ್ನೂ ಜಾರಿ ಯಲ್ಲಿದೆ. ಅದರ ನಡುವೆಯೇ ಗ್ರಾಮೀಣ ಆರ್ಥಿಕತೆಯ ಪುನ ಶ್ಚೇತನಕ್ಕೆ ಮಾರ್ಗಸೂಚಿಗಳನ್ನು ಅನು ಷ್ಠಾನಗೊಳಿಸಲಾಗಿದೆ. ಇದೆಲ್ಲದರ ಜೊತೆಗೆ ವೈರಸ್ ಹರಡದಂತೆ ಎಚ್ಚರಿಕೆ ವಹಿಸ ಲಾಗಿದೆ’ ಎಂಬ 3 ಅಂಶಗಳನ್ನು ಕೇಂದ್ರಕ್ಕೆ ಜಿಲ್ಲಾ ಧಿಕಾರಿಗಳು ಮನವರಿಕೆ ಮಾಡಿಕೊಡಬೇಕಿದೆ.
ವಿಪತ್ತು ನಿರ್ವಹಣಾ ಕಾಯ್ದೆ ಜಾರಿಗೂ ಸಿದ್ಧ
ಮಾರ್ಗಸೂಚಿಗಳನ್ನು ಎ. 20ರಿಂದ ಜಾರಿಗೊಳಿ ಸುವ ನಿರ್ಧಾರದ ಹಿಂದೆಯೂ ಒಂದು ತಂತ್ರಗಾರಿಕೆ ಅಡಗಿದೆ. ಮಾರ್ಗಸೂಚಿಗಳ ಅನುಷ್ಠಾನ ಕುರಿತ ನೀಲನಕ್ಷೆ ತಯಾರಿಸಲು ನೀಲನಕ್ಷೆ ಸಿದ್ಧಪಡಿಸಲು ಜಿಲ್ಲಾಧಿಕಾರಿಗಳಿಗೆ ಕನಿಷ್ಠ 6-7 ದಿನಗಳ ಅವಕಾಶ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.