ನವೀಕರಣಗೊಂಡ ನಾಲ್ಕೇ ದಿನಕ್ಕೆ ಕುಸಿದು ಬಿದ್ದ ಸೇತುವೆ :132 ಮಂದಿ ಸಾವು, 177 ಮಂದಿಯ ರಕ್ಷಣೆ
ಗುಜರಾತ್ ನ ಮೊರ್ಬಿ ನಗರದಲ್ಲಿ ಕೇಬಲ್ ಸೇತುವೆ ದುರಂತ
Team Udayavani, Oct 31, 2022, 8:01 AM IST
ಗುಜರಾತ್ : ಗುಜರಾತ್‌ನ ಮೊರ್ಬಿಯಲ್ಲಿ ಬ್ರಿಟಿಷರ ಕಾಲದ ಸೇತುವೆಯೊಂದು ಭಾನುವಾರ ಸಂಜೆ ಕುಸಿದು ಬಿದ್ದು ಸುಮಾರು 132 ಮಂದಿ ಸಾವನ್ನಪ್ಪಿದ್ದಾರೆ. ಇದುವರೆಗೆ 177 ಮಂದಿಯನ್ನು ರಕ್ಷಿಸಲಾಗಿದ್ದು, ಹಲವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ.
ರಾಜ್ಯದ ರಾಜಧಾನಿ ಅಹಮದಾಬಾದ್‌ನಿಂದ ಸುಮಾರು 300 ಕಿಮೀ ದೂರದಲ್ಲಿರುವ ತೂಗು ಸೇತುವೆಯು ಭಾನುವಾರ ಸಂಜೆ 6.42 ಕ್ಕೆ ಕುಸಿದು ಬಿದ್ದಿದೆ, ಸುಮಾರು 500 ಜನರು ಛತ್ ಪೂಜೆಯ ಕೆಲವು ಆಚರಣೆಗಳನ್ನು ಮಾಡಲು ಸೇತುವೆಯ ಮೇಲೆ ಜಮಾಯಿಸಿದರು ಎನ್ನಲಾಗಿದೆ.
ಜನರ ಭಾರ ಹೆಚ್ಚಾಗಿ ಸೇತುವೆ ಕುಸಿದು ಬಿದ್ದಿದೆ ಎನ್ನಲಾಗಿದ್ದು ಸೇತುವೆ ಕುಸಿತದ ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು, ಎನ್‌ಡಿಆರ್‌ಎಫ್‌ನ ಐದು ತಂಡಗಳು ಸ್ಥಳಕ್ಕೆ ತಲುಪಿವೆ. ನಂತರ, ಸೇನೆ, ನೌಕಾಪಡೆ ಮತ್ತು ವಾಯುಸೇನೆಯಿಂದಲೂ ಕೂಡ ಕಾರ್ಯಾಚರಣೆ ನಡೆಸುತ್ತಿದೆ.
ಸುಮಾರು 19 ಮಂದಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ದೋಣಿಗಳನ್ನು ಬಳಸಿ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 150 ವರ್ಷಗಳಷ್ಟು ಹಳೆಯದಾದ ಸೇತುವೆಯಾಗಿದ್ದರಿಂದ ಸೇತುವೆಯ ಮೇಲೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾವಣೆಗೊಂಡಿದ್ದೆ ಸೇತುವೆ ಕುಸಿದು ಬೀಳಲು ಕಾರಣ ಎಂದು ಅಲ್ಲಿನ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಕೇವಲ ನಾಲ್ಕು ದಿನಗಳ ಹಿಂದಷ್ಟೇ ಬ್ರಿಟೀಷರ ಕಾಲದಲ್ಲಿ ನಿರ್ಮಿಸಲಾಗಿದ್ದ ಕೇಬಲ್ ಬ್ರಿಡ್ಜ್ ಅನ್ನು ದುರಸ್ತಿಗೊಳಿಸಿ ಸಾರ್ವಜನಿಕರ ಬಳಕೆಗಾಗಿ ಮುಕ್ತಗೊಳಿಸಲಾಗಿತ್ತು. “ಕಳೆದ ವಾರವಷ್ಟೇ ಅದನ್ನು ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿತ್ತು. ಅದು ಕುಸಿದು ಬಿದ್ದಿರುವುದರಿಂದ ಆಘಾತ ಉಂಟಾಗಿದೆ. ಅದರ ಸಂಪೂರ್ಣ ಹೊಣೆಯನ್ನು ರಾಜ್ಯ ಸರ್ಕಾರವೇ ಹೊರಲಿದೆ’ ಗುಜರಾತ್‌ನ ಉದ್ಯೋಗ ಮತ್ತು ಕಾರ್ಮಿಕ ಸಚಿವ ಬೃಜೇಶ್ ಮೆರ್ಜಾ ಹೇಳಿದ್ದಾರೆ.
ಇದನ್ನೂ ಓದಿ : ಆಸ್ತಿ ವರ್ಗಾವಣೆ ವಿಚಾರದಲ್ಲಿ ತಕರಾರು: ಮಗನ ಮೇಲೆಯೇ ತಂದೆಯಿಂದ ಮಾರಣಾಂತಿಕ ಹಲ್ಲೆ
Heavy traffic before crashing machhu hanging bridge many of this people try to damage this bridge. pic.twitter.com/pmfdh5QDGl
— vijay patel (@vijaypatelMorbi) October 30, 2022
#BREAKING
गुजरात के मोरबी में बड़ा हादसाकेबल ब्रिज पुल टूटने से कई लोग पानी में गिरे,मच्चु नदी पर बना केबल पुल टूटा,
कई लोग नदी में गिरे, राहत और बचाव का काम जारी #Gujarat #morbi #bridge pic.twitter.com/Gj4Fm8lAzM
— Kaushik Kanthecha (@Kaushikdd) October 30, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.