ಅಸಮಾಧಾನದ ಬೇಗೆಯಲ್ಲಿ ಗುಜರಾತ್‌ ಡಿಸಿಎಂ ನಿತಿನ್‌


Team Udayavani, Dec 31, 2017, 2:54 PM IST

6.jpg

ಅಹ್ಮದಾಬಾದ್‌: ಗುಜರಾತ್‌ನಲ್ಲಿ ನೂತನ ವಾಗಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರಕಾರದ ಉಪಮುಖ್ಯಮಂತ್ರಿ ನಿತಿನ್‌ ಪಟೇಲ್‌ ನೂತನ ಖಾತೆ ಹಂಚಿಕೆಯಿಂದ ಅಸಮಾಧಾನಗೊಂಡಿ ದ್ದಾರೆ. ಕಳೆದ ಸರಕಾರ ದಲ್ಲಿ ಅವರು ಹೊಂದಿದ್ದ ಹಣಕಾಸು, ಗ್ರಾಮೀಣಾಭಿವೃದ್ಧಿಯಂಥ ಮಹತ್ವದ ಖಾತೆ ಗಳನ್ನು ಈ ಬಾರಿ ಅವರಿಂದ ಕಿತ್ತುಕೊಂಡಿರುವುದು ಅವರ ಬೇಸರಕ್ಕೆ ಕಾರಣ. 

ಗುರುವಾರ ನೂತನ ಸಚಿವರಿಗೆ ಖಾತೆ ಹಂಚಿಕೆಯಾಗಿದ್ದು, ಪಟೇಲ್‌ ಅವರಿಗೆ ಸಾರಿಗೆ ಹಾಗೂ ನಿರ್ಮಾಣ, ಆರೋಗ್ಯ, ವೈದ್ಯಕೀಯ ಶಿಕ್ಷಣ ಖಾತೆಗಳನ್ನು ವಹಿಸಲಾಗಿದ್ದು, ಇವಕ್ಕೆ ಹೆಚ್ಚುವರಿಯಾಗಿ ನರ್ಮದಾ, ಕಲ್ಪಸರ್‌ ಹಾಗೂ ಇನ್ನಿತರ ಮಹತ್ವದ ಯೋಜನೆಗಳ ಉಸ್ತುವಾರಿಯನ್ನೂ ನೀಡಲಾಗಿದೆ. 

ಕಳೆದ ಬಾರಿ ಇವರು ಹೊಂದಿದ್ದ ಹಣಕಾಸು ಖಾತೆ ಈ ಬಾರಿ, ಸೌರಭ್‌ ಪಟೇಲ್‌ ಪಾಲಾಗಿದ್ದರೆ, ಗ್ರಾಮೀಣಾಭಿವೃದ್ಧಿ ಖಾತೆಯನ್ನು ಸಿಎಂ ರುಪಾಣಿ ಅವರಿಗೆ ನೀಡ ಲಾಗಿದೆ. ಈ ಬೆಳವಣಿಗೆಯಿಂದ ಮುನಿಸಿ ಕೊಂಡಿ ರುವ ನಿತಿನ್‌, ಖಾತೆ ಹಂಚಿಕೆಯಾಗಿ ಎರಡು ದಿನಗಳೇ ಕಳೆದಿದ್ದರೂ ಅಧಿಕಾರ ವಹಿಸಿಕೊಂಡಿಲ್ಲ. ಏತನ್ಮಧ್ಯೆ, ತಮ್ಮ ಅಸಮಾಧಾನವನ್ನು ಪಕ್ಷದ ವರಿಷ್ಠರಿಗೆ ತಲುಪಿಸಿರುವ ಅವರು, ಮೂರು ದಿನಗಳಲ್ಲಿ ಖಾತೆಗಳ ಮರು ಹಂಚಿಕೆಯಾಗಬೇಕೆಂದು ಗಡುವು ನೀಡಿದ್ದಾರೆನ್ನಲಾಗಿದೆ.

ಮುಷ್ಕರ, ಬಂದ್‌ ಬೆದರಿಕೆ: ಖಾತೆ ಹಂಚಿಕೆ ಯ ಲ್ಲಿ ನಿತಿನ್‌ ಅವರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿರುವ ಪಟೇಲ್‌ ಸಮು ದಾ ಯದ ನಾಯಕ ಲಾಲ್‌ಜೀ ಪಟೇಲ್‌, ಒಂದು ದಿನದ ಸಾಂಕೇತಿಕ ಮುಷ್ಕರಕ್ಕೆ ಕರೆ ನೀಡಿದ್ದಾರೆ. ನಿತಿನ್‌ ಅವರಿಗೆ ಉಪಮುಖ್ಯ ಮಂತ್ರಿ ಹುದ್ದೆ ನೀಡಲೇಬೇಕೆಂದೂ ಪಟ್ಟು ಹಿಡಿದಿರುವ ಅವರು, ತಮ್ಮ ಬೇಡಿಕೆ ಈಡೇರದಿದ್ದರೆ ರಾಜ್ಯ ಬಂದ್‌ಗೆ ಕರೆ ನೀಡುವ ಎಚ್ಚರಿಕೆ ನೀಡಿದ್ದಾರೆ. 

ಹಣಕಾಸು ಖಾತೆ ಕೈತಪ್ಪಿರುವ ಕಾರಣಕ್ಕೆ ನಿತಿನ್‌ ಅವರು ಕ್ಯಾಬಿನೆಟ್‌ನಲ್ಲಿ 2ನೇ ಮಹತ್ವದ ಸ್ಥಾನ ಕಳೆದುಕೊಂಡಿದ್ದಾ ರೆಂದು ಭಾವಿಸಬೇಕಿಲ್ಲ. ಅವರು ನಮ್ಮ ಪಕ್ಷದ ಹಿರಿಯರು. ಅವರೆಂದಿಗೂ ಕ್ಯಾಬಿನೆಟ್‌ನಲ್ಲಿ 2ನೇ ಮಹತ್ವದ ಸಚಿವರೇ ಆಗಿರುತ್ತಾರೆ. 
ವಿಜಯ್‌ ರುಪಾಣಿ, ಗುಜರಾತ್‌  ಸಿಎಂ

ನಿತಿನ್‌ ಪಟೇಲ್‌ಗೆ ಹಾರ್ದಿಕ್‌ ಆಹ್ವಾನ 
ನಿತಿನ್‌ ಅಸಮಾಧಾನ ಕುರಿತ ವರದಿಗಳಿಗೆ ಪ್ರತಿಕ್ರಿಯಿಸಿರುವ ಪಟೇಲ್‌ ಮೀಸಲು ಹೋರಾಟಗಾರ ಹಾರ್ದಿಕ್‌ ಪಟೇಲ್‌, “”ಬಿಜೆಪಿಗೆ ನಿತಿನ್‌ ತೋರಿರುವ 27 ವರ್ಷದ ಸೇವೆಗೆ ಆ ಪಕ್ಷ ಅಗೌರವ ತೋರಿದೆ. ಇದಕ್ಕೆ ಪ್ರತೀಕಾರವಾಗಿ, ಬಿಜೆಪಿ ಬಿಡಲು ನಿತಿನ್‌ ಭಾಯ್‌ ಮನಸ್ಸು ಮಾಡಿದರೆ, ಕನಿಷ್ಠ 10 ಬಿಜೆಪಿ ಶಾಸಕರೊಂದಿಗೆ   ಕಾಂಗ್ರೆಸ್‌ ಸೇರ್ಪಡೆಯಾಗಲಿ. ಆಗ ಅವರಿಗೆ ಸೂಕ್ತ ಹುದ್ದೆ ದೊರಕಿಸಿಕೊಡಲು ಯತ್ನಿಸುತ್ತೇನೆ” ಎಂದಿದ್ದಾರೆ. 

ಟಾಪ್ ನ್ಯೂಸ್

Hospital

Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ

1-yash

Mangaluru: ದಿಢೀರ್‌ ಆಗಿ ಕಾಣಿಸಿಕೊಂಡ ನಟ ಯಶ್‌

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hospital

Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ

1-yash

Mangaluru: ದಿಢೀರ್‌ ಆಗಿ ಕಾಣಿಸಿಕೊಂಡ ನಟ ಯಶ್‌

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.