ಪ್ರಧಾನಿ ಮೋದಿಗೆ ಕ್ಲೀನ್ಚಿಟ್ ಕೊಟ್ಟಿರುವುದು ಸರಿ
Team Udayavani, Oct 6, 2017, 6:30 AM IST
ಅಹಮದಾಬಾದ್: ಗೋಧೊÅàತ್ತರ ಗಲಭೆಯ ಪ್ರಮುಖ ಪ್ರಕರಣಗಳಲ್ಲಿ ಒಂದಾದ ಗುಲ್ಬರ್ಗ್ ಸೊಸೈಟಿ ಹತ್ಯಾಕಾಂಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ 61 ಮಂದಿಗೆ ನೀಡಲಾಗಿದ್ದ ಕ್ಲೀನ್ಚಿಟ್ ಅನ್ನು ಗುಜರಾತ್ ಹೈಕೋರ್ಟ್ ಎತ್ತಿ ಹಿಡಿದಿದೆ.
ಕೆಳಹಂತದ ಕೋರ್ಟ್ನ ಆದೇಶ ಪ್ರಶ್ನಿಸಿ ಹತ್ಯಾಕಾಂಡದಲ್ಲಿ ಅಸುನೀಗಿದ್ದ ಕಾಂಗ್ರೆಸ್ ನಾಯಕ ಎಹಸಾನ್ ಜಾಫ್ರಿ ಪತ್ನಿ ಝಾಕಿಯಾ ಜಾಫ್ರಿ ಹೈಕೋರ್ಟಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸತಾಗಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದ ಬಗ್ಗೆ ಹೈಕೋರ್ಟ್ ಅದಕ್ಕಾಗಿ ಮತ್ತೆ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಲು ಅವಕಾಶ ಉಂಟು ಎಂದು ಹೇಳಿದ್ದಾರೆ.
ಘಟನೆಯಲ್ಲಿ ಆಳವಾದ ಸಂಚು ರೂಪಿಸಲಾಗಿದೆ ಎಂದು ಅರ್ಜಿದಾರರಾಗಿರುವ ಎಹಸಾನ್ ಜಾಫ್ರಿ ವಾದಿಸಿದ್ದರು. ಆದರೆ ನ್ಯಾ.ಸೋನಿಯಾ ಗೋಕನಿ ನೇತೃತ್ವದ ನ್ಯಾಯಪೀಠ “ಆಳವಾದ ಸಂಚು ರೂಪಿಸಲಾಗಿದೆ ಎಂಬ ಅರ್ಜಿದಾರರ ಆರೋಪವನ್ನು ಸಂಜೀವ ಭಟ್ ಪ್ರಕರಣದಲ್ಲಿ ಸುಪ್ರೀಂ ವಿವರವಾಗಿಯೇ ಚರ್ಚೆ ನಡೆಸಿ, ಆ ವಾದವನ್ನು ವಜಾಗೊಳಿಸಿದೆ. ಹೀಗಾಗಿ ಮತ್ತೆ ಹೈಕೋರ್ಟ್ ಅದರ ಬಗ್ಗೆ ಚರ್ಚೆ ನಡೆಸುವುದಿಲ್ಲ. ಆದರೆ ಪ್ರಕರಣದ ಬಗ್ಗೆ ತನಿಖೆ ನಡೆಯಬೇಕು ಎಂಬ ಬಗ್ಗೆ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಲು ಅವಕಾಶ ಇದೆ’ ಎಂದಿದ್ದಾರೆ. ಮುಂದಿನ ತನಿಖೆಯ ಬಗ್ಗೆ ನಿರ್ಧರಿಸಲು ಮ್ಯಾಜಿಸ್ಟ್ರೇಟ್ ಕೋರ್ಟ್ಗೆ ಸೀಮಿತ ಅವಕಾಶ ಇದೆ ಎಂದು ಅವರು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜು.3ರಂದು ವಿಚಾರಣೆ ಮುಕ್ತಾಯವಾಗಿತ್ತು. ಹತ್ಯಾ ಕಾಂಡದ ಬಗ್ಗೆ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ ಗುಜರಾತ್ನ ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರ 61 ಮಂದಿ ವಿರುದ್ಧ ಕ್ಲೀನ್ಚಿಟ್ ನೀಡಿತ್ತು. ಅದನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ಎತ್ತಿಹಿಡಿದಿತ್ತು.
2002ರ ಫೆ.28ರಂದು ಕಾಂಗ್ರೆಸ್ ನಾಯಕ ಎಹಸಾನ್ ಜಾಫ್ರಿ ಮತ್ತು ಇತರ 68 ಮಂದಿಯನ್ನು ಗುಂಪೊಂದು ಬೆಂಕಿ ಹಚ್ಚಿ ಕೊಂದು ಹಾಕಿತ್ತು. 2013ರಲ್ಲಿ ಮ್ಯಾಜಿಸ್ಟ್ರೇಟ್ ಕೋರ್ಟ್ ಮೋದಿ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ತಿರಸ್ಕರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.