ಬಿಜೆಪಿ ಆಡಳಿತ ರಾಜ್ಯಗಳಲ್ಲಿ ವ್ಯಾಟ್ ಕಡಿತ?
Team Udayavani, Oct 6, 2017, 6:00 AM IST
ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಲು ಬಿಜೆಪಿ ಆಡಳಿತವಿರುವ ರಾಜ್ಯಗಳು ಚಿಂತನೆ ನಡೆಸಿವೆ.
ಮೂಲಗಳ ಪ್ರಕಾರ ಗುಜರಾತ್ ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಅಧಿಕೃತವಾಗಿ ಘೋಷಣೆ ಹೊರಡಿಸಲಿದೆ. ಬಳಿಕ ಮಧ್ಯಪ್ರದೇಶ ಕೂಡ ಇದೇ ಚಿಂತನೆಯಲ್ಲಿದೆ. ಎರಡು ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 2 ರೂ.ನಷ್ಟು ಅಬಕಾರಿ ಸುಂಕ ಇಳಿಸಿತ್ತು. ಇದರಿಂದ ತೈಲ ಬೆಲೆ 2.5 ರೂ. ವರೆಗೆ ಇಳಿಕೆಯಾಗಿತ್ತು. ಅಲ್ಲದೇ ಆ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರಗಳೂ ಶೇ.5 ರಷ್ಟು ವ್ಯಾಟ್ ಕಡಿತ ಮಾಡಲಿ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಮತ್ತು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಸೂಚಿಸಿದ್ದರು.
ಇದರನ್ವಯ ಬಿಜೆಪಿ ಆಡಳಿತವಿರುವ ರಾಜ್ಯಗಳೇ ಮೊದಲು ವ್ಯಾಟ್ ಕಡಿತಗೊಳಿಸಲಿವೆ. ಅದರಲ್ಲೂ ಸದ್ಯದಲ್ಲೇ ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್ನಲ್ಲೇ ಮೊದಲು ವ್ಯಾಟ್ ಕಡಿತವಾಗಲಿದೆ. ಇದರ ಬಳಿಕ ಇತರೆ ರಾಜ್ಯಗಳೂ ಕಡಿತ ಮಾಡಲಿವೆ ಎಂದು ಹೇಳಲಾಗುತ್ತಿದೆ. ಆದರೆ ಕೇರಳ ಮಾತ್ರ ವ್ಯಾಟ್ ಕಡಿತ ಮಾಡಲು ಸಾಧ್ಯವೇ ಇಲ್ಲ ಎಂದಿದೆ.
ಒಂದು ವೇಳೆ ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಶೇ.5 ರಷ್ಟು ವ್ಯಾಟ್ ಕಡಿತ ಮಾಡಿದರೆ ಪೆಟ್ರೋಲ್ ದರ ಈಗಿನ 69.44 ರೂ. ನಿಂದ 66.77 ರೂ.ಗೆ ಬಂದು ನಿಲ್ಲಲಿದೆ. ಹಾಗೆಯೇ ಡಿಸೇಲ್ ದರ ಈಗಿನ 56.96 ರೂ.ನಿಂದ 54.57ಕ್ಕೆ ಇಳಿಕೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
India: ಹಿರಿಯ ನಾಗರಿಕರ ಭದ್ರತೆಗೆ ಶೀಘ್ರ ಹೊಸ ನೀತಿ: ಕೇಂದ್ರ
Madras HC: ಆಲಿಂಗನ, ಚುಂಬನ ಹರೆಯದ ಪ್ರೇಮಿಗಳಲ್ಲಿ ಸಾಮಾನ್ಯ
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.