ಗುಜರಾತ್ ವಿವಿಯಲ್ಲಿ ವ್ಯಾಪಂ ಮಾದರಿ ಹಗರಣ?
Team Udayavani, Mar 11, 2017, 3:45 AM IST
ಅಹಮದಾಬಾದ್: ಗುಜರಾತಿನ ವೈದ್ಯ ಕಾಲೇಜುಗಳಲ್ಲಿ ವ್ಯಾಪಂ ಮಾದರಿ ಹಗರಣ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಗುಜರಾತ್ ವಿವಿ ಮತ್ತು ಭಾರತೀಯ ವೈದ್ಯ ಮಂಡಳಿ (ಎಂಸಿಐ) ಪಡೆದ ಮಾಹಿತಿಯಲ್ಲಿ ಈ ಅನುಮಾನಕ್ಕೆ ಎಡೆಮಾಡಿಕೊಡುವ ಅಂಶಗಳಿವೆ ಎನ್ನಲಾಗಿದೆ. ಸರ್ಕಾರಿ ವೈದ್ಯ ಕಾಲೇಜುಗಳು ಪರೀಕ್ಷೆಯಲ್ಲಿ ಫೇಲಾಗಿರುವ 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪದವಿ ನೀಡಿರುವ ಮಾಹಿತಿ ಲಭ್ಯವಾಗಿದ್ದು, ಈ ಸಂಬಂಧ ಪ್ರಧಾನಿ ಕಚೇರಿ ಹಾಗೂ ಗುಜರಾತ್ ಸಿಎಂ ವಿಜಯ್ ರುಪಾನಿ ಅವರ ಕಚೇರಿಗೆ ದೂರು ಸಲ್ಲಿಕೆಯಾಗಿದೆ.
2015ರ ಜನವರಿಯಲ್ಲಿ ವಿವಿಯು ಸ್ನಾತಕೋತ್ತರ ವೈದ್ಯ ಕಾಲೇಜುಗಳ ಪ್ರವೇಶಕ್ಕೆ ಪ್ರವೇಶ ಪರೀಕ್ಷೆ ನಡೆಸಿತ್ತು. ಲಭ್ಯವಿದ್ದ 300 ಸೀಟುಗಳಿಗೆ 900 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇವರಲ್ಲಿ 200 ಮಂದಿ ಮಾತ್ರ ಉತ್ತೀರ್ಣರಾಗಿದ್ದರು. ಖಾಲಿ ಇದ್ದ 100 ಸೀಟುಗಳನ್ನು ಆರೋಗ್ಯ ಇಲಾಖೆ ವೈದ್ಯರು, ಅಧಿಕಾರಿಗಳು ತಮ್ಮ ಪರಿಚಯದವರ ಮಕ್ಕಳಿಗೆ ನೀಡಿದ್ದಾರೆ ಎಂಬ ಮಾಹಿತಿ ಆರ್‌ಟಿಐ ಮೂಲಕ ಬಹಿರಂಗವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.