ಗುಜರಾತ್ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಮಾಧವ ಸಿಂಗ್ ಸೋಲಂಕಿ ನಿಧನ
Team Udayavani, Jan 9, 2021, 9:42 AM IST
ಗಾಂಧಿನಗರ: ಗುಜರಾತ್ ರಾಜ್ಯದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಮಾಧವ ಸಿಂಗ್ ಸೋಲಂಕಿ ಅವರು ಇಂದು ಬೆಳಗ್ಗೆ ನಿಧನ ಹೊಂದಿದರು.
ಗ94 ವರ್ಷದ ಮಾಧವ ಸಿಂಗ್ ಸೋಲಂಕಿ ಅವರು ಗಾಂಧಿನಗರದ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು.
ವೃತ್ತಿಯಲ್ಲಿ ವಕೀಲನಾಗಿದ್ದ ಸೋಲಂಕಿ ಅವರು 1980ಕ್ಕೂ ಮೊದಲು ಖಾಮ್ ಹೋರಾಟ (ಕ್ಷತ್ರಿಯ, ಹರಿಜನ, ಆದಿವಾಸಿ, ಮುಸ್ಲಿಂ)ದ ಮೂಲಕ ರಾಜಕೀಯ ಆರಂಭಿಸಿ ಗುಜರಾತ್ ಪ್ರಭಾವಿ ರಾಜಕಾರಣಿ ಎನಿಸಿಕೊಂಡಿದ್ದರು.
ಇದನ್ನೂ ಓದಿ:ಆಸ್ಪತ್ರೆಯ ಮಕ್ಕಳ ಘಟಕದಲ್ಲಿ ಬೆಂಕಿ ಅವಘಡ: ಹತ್ತು ನವಜಾತ ಶಿಶುಗಳ ದುರ್ಮರಣ!
ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು, ಭಾರತ ವಿದೇಶಾಂಗ ಖಾತೆ ಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ನರೇಂದ್ರ ಮೋದಿ ಸಂತಾಪ
ಮಾಧವ ಸಿಂಗ್ ಸೋಲಂಕಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಅವರು, “ಗುಜರಾತ್ ರಾಜಕೀಯದಲ್ಲಿ ದಶಕಗಳಿಂದ ಪ್ರಮುಖ ಪಾತ್ರ ವಹಿಸಿದ್ದ ಸೋಲಂಕಿ ಅವರು ಅಸಾಧಾರಣ ನಾಯಕರಾಗಿದ್ದರು. ಅವರು ಸಮಾಜಕ್ಕೆ ಮಾಡಿದ ಸಮೃದ್ಧ ಸೇವೆಗಾಗಿ ಅವರನ್ನು ಸ್ಮರಿಸಲಾಗುವುದು. ಅವರ ಅಗಲಿಕೆ ನೋವು ತಂದಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ರಾಜ್ಯಗಳಿಂದಲೇ ಮಾಲಿನ್ಯ ಹೆಚ್ಚಳ: ದಿಲ್ಲಿ ಸಿಎಂ ಆತಿಶಿ ಆರೋಪ
Maharashtra Elections: ವಿಪಕ್ಷ ನಾಯಕ ರಾಹುಲ್ ಛೋಟಾ ಪೋಪಟ್: ಬಿಜೆಪಿ ವಕ್ತಾರ ಲೇವಡಿ
Rahul Gandhi: ಮೋದಿ, ಅದಾನಿ, ಅಂಬಾನಿ ಒಟ್ಟಾದರೆ ಸುರಕ್ಷಿತ, ಇದೇ ಅರ್ಥ
Nirmala Sitharaman: ಬ್ಯಾಂಕುಗಳು ಬಡ್ಡಿದರ ಕೈಗೆಟಕುವಂತೆ ಕ್ರಮ ಕೈಗೊಳ್ಳಬೇಕು
Akhilesh Yadav: ಉ.ಪ್ರ.ದಲ್ಲಿ ಬಾಬಾ ಸಾಹೇಬ್ ಮತ್ತು ಬಾಬಾ ನಡುವಿನ ಹೋರಾಟ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.