ಉಪಚುನಾವಣೆ: ಪಂಜಾಬ್,ಕೇರಳದಲ್ಲಿ ಬಿಜೆಪಿಗೆ ಭಾರೀ ಮುಖಭಂಗ
Team Udayavani, Oct 15, 2017, 12:43 PM IST
ಗುರುದಾಸ್‌ಪುರ: ಇಲ್ಲಿನ ಲೋಕಸಭಾ ಕ್ಷೇತ್ರಕ್ಕೆ ನಡೆದಿದ್ದ ಉಪಚುನಾವಣೆ ಫಲಿತಾಂಶ ಭಾನುವಾರ ಪ್ರಕಟಗೊಂಡಿದ್ದು,ಬಿಜೆಪಿ ಸ್ಥಾನ ಕಳೆದುಕೊಂಡು ಮುಖಭಂಗ ಅನುಭವಿಸಿದೆ. ಆಡಳಿತಾರೂಢ ಕಾಂಗ್ರೆಸ್ ಗೆದ್ದು ಸಂಭ್ರಮಿಸಿದೆ.
ಬಿಜೆಪಿ ಸಂಸದ ವಿನೋದ್ ಖನ್ನಾ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು, ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಜಾಖರ್ ಅವರು ಬಿಜೆಪಿ ಅಭ್ಯರ್ಥಿ ಸ್ವರಣ್ ಸಲಾರಿಯಾ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಮಣಿಸಿದ್ದಾರೆ. ಆಪ್ 3 ನೇ ಸ್ಥಾನ ಪಡೆದುಕೊಂಡಿದೆ.
‘ಇದು ಮತದಾರರು ರೆಡ್ ರಿಬ್ಬನ್‌ನನಲ್ಲಿ ಕಟ್ಟಿ ಭವಿಷ್ಯದ ಪಕ್ಷದ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಅವರ ಕೈಗೆ ನೀಡಿದ ದೊಡ್ಡ ದೀಪಾವಳಿ ಗಿಫ್ಟ್’ ಎಂದು ನವ್‌ಜೋತ್ ಸಿಧು ಹರ್ಷ ವ್ಯಕ್ತ ಪಡಿಸಿದ್ದಾರೆ.
ಪಂಜಾಬ್‌ನಾದ್ಯಂತ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಭಾರೀ ಸಂಭ್ರಮಾಚಾರಣೆಯಲ್ಲಿ ತೊಡಗಿದ್ದಾರೆ.
ಕೇರಳದಲ್ಲಿ ಠೇವಣಿ ಕಳೆದುಕೊಂಡ ಬಿಜೆಪಿ
ವೆಂಗರಾ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಡಳಿತಾ ರೂಢ ಎಡಪಕ್ಷ ಮತ್ತು ಬಿಜೆಪಿ ಮುಖಭಂಗ ಅನುಭವಿಸಿದ್ದು ಯುಡಿಎಫ್ ಮೈತ್ರಿಕೂಟ ಬೆಂಬಲಿತ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್‌ನ ಅಭ್ಯರ್ಥಿ ಕೆಎನ್‌ಎ ಖಾದರ್ ಅವರು 23,000 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಎಡಪಕ್ಷ 2 ನೇ ಸ್ಥಾನ ಪಡೆದರೆ, ಎಸ್‌ಡಿಪಿಐ 3 ನೇ ಸ್ಥಾನ ಪಡೆದುಕೊಂಡಿದ್ದು , ನಾಲ್ಕನೇ ಸ್ಥಾನದಲ್ಲಿರುವ ಬಿಜೆಪಿ ಠೇವಣಿ ಕಳೆದುಕೊಂಡಿದೆ.
ಐಎಎಮ್‌ಎಲ್ ನಾಯಕ ಪಿ.ಕೆ.ಕುನ್ಹಕುಟ್ಟಿ ಅವರು ಮಲ್ಲಪ್ಪುರಂ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸುವ ಸಲುವಾಗಿ ರಾಜೀನಾಮೆ ನೀಡಿದ್ದರಿಂದ ಕ್ಷೇತ್ರ ತೆರವಾಗಿ ಉಪಚುನಾವಣೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.