ದುರ್ಗೆ, ಮೇರಿ ಮಾತೆ ಮೂರ್ತಿ ಹಾನಿಗೊಳಿಸಿದ ಮುಸ್ಲಿಂ ಮಹಿಳೆಯರು ವಶಕ್ಕೆ
Team Udayavani, Sep 28, 2022, 7:30 AM IST
ಹೈದರಾಬಾದ್: ತೆಲಂಗಾಣ ರಾಜಧಾನಿ ಹೈದರಾಬಾದ್‌ನ ಖೈರತಾಬಾದ್ ಪ್ರದೇಶದಲ್ಲಿ ದುರ್ಗಾ ಮಾತೆಯ ಮೂರ್ತಿ ಮತ್ತು ವರ್ಜಿನ್ ಮೇರಿ ಮೂರ್ತಿ ಹಾನಿಗೊಳಿಸಿದ ಇಬ್ಬರು ಮುಸ್ಲಿಂ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದೇಶಾದ್ಯಂತ ಪಿಎಫ್ಐ ಮೇಲೆ ದಾಳಿ ಬೆನ್ನಲ್ಲೇ ಈ ಘಟನೆ ಜರುಗಿದೆ. ಆದರೆ ಪಿಎಫ್ಐಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ವಿಚಾರಣೆಗೆ ಮಹಿಳೆಯರು ಸಹಕರಿಸುತ್ತಿಲ್ಲ. ಯಾವುದೇ ಮಾಹಿತಿ ನೀಡುತ್ತಿಲ್ಲ. ಅವರು ಮಾನಸಿಕ ಅಸ್ವಸ್ಥರಂತೆ ಕಾಣುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಪೊಲೀಸ್ ಠಾಣೆಯ ಎದರು ಪ್ರತಿಭಟನೆ ನಡೆಸಿದ್ದಾರೆ.
ಈ ಇಬ್ಬರು ಮಹಿಳೆಯರು ಸಹೋದರಿಯರಾಗಿದ್ದು, 22ರಿಂದ 30 ವರ್ಷದವರಾಗಿದ್ದಾರೆ. ಮೊದಲಿಗೆ ಈ ಇಬ್ಬರು ಚರ್ಚ್ ಹೊರಗೆ ಇದ್ದ ವರ್ಜಿನ್ ಮೇರಿ ಮೂರ್ತಿಯನ್ನು ಹಾನಿಗೊಳಿಸಿದ್ದಾರೆ. ನಂತರ ನವರಾತ್ರಿ ಪೆಂಡಾಲ್‌ಗೆ ನುಗ್ಗಿ ಸುತ್ತಿಗೆಯಿಂದ ದುರ್ಗಾ ಮಾತೆ ಮೂರ್ತಿ ಹಾನಿಗೊಳಿಸಿದ್ದಾರೆ. ತಡೆಯಲು ಬಂದ ಪೆಂಡಾಲ್ ಸಮಿತಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ಅವರನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.