ಲವ್‌ ಜೆಹಾದ್‌ ಪ್ರಕರಣ: ಹದಿಯಾ ಮತ್ತೆ ಕಾಲೇಜಿನತ್ತ

Team Udayavani, Nov 28, 2017, 6:00 AM IST

hadiya-1.jpg

ಹೊಸದಿಲ್ಲಿ: ದೇಶದ ಅತ್ಯಂತ ಚರ್ಚಿತ ಲವ್‌ ಜೆಹಾದ್‌ ಪ್ರಕರಣದಲ್ಲಿ ಸೋಮವಾರ ಸುಪ್ರೀಂಕೋರ್ಟ್‌ ಮಹತ್ವದ ಆದೇಶ ನೀಡಿದ್ದು, ಹದಿಯಾಳಿಗೆ ಶಿಕ್ಷಣ ಮುಂದುವರಿಸಲು ಅವಕಾಶ ಕಲ್ಪಿಸಿದೆ. ಜತೆಗೆ ಈಕೆಯ ಸಂಪೂರ್ಣ ಜವಾಬ್ದಾರಿಯನ್ನು ಕಾಲೇಜಿನ ಡೀನ್‌ಗೆ ವಹಿಸಿ ಅದು ಆದೇಶ ಹೊರಡಿಸಿದೆ.

ಅಲ್ಲದೆ ಇದೇ ಮೊದಲ ಬಾರಿಗೆ ಕೋರ್ಟ್‌ಗೆ ಹಾಜರಾದ ಹದಿಯಾ, “ತನಗೆ ಸ್ವಾತಂತ್ರ್ಯ ಬೇಕು. ನಾನು ನನ್ನ ಪತಿಯನ್ನು ಭೇಟಿ ಮಾಡಬೇಕು, ಆತನ ಜತೆಗೆ ಹೋಗಬೇಕು’ ಎಂದು ಮನವಿ ಮಾಡಿಕೊಂಡಳು. ಆದರೆ ಈ ಬಗ್ಗೆ ಯಾವುದೇ ಆದೇಶ ನೀಡದ ಮುಖ್ಯ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ನೇತೃತ್ವದ ಮೂರು ಸದಸ್ಯರ ಪೀಠ ಸದ್ಯಕ್ಕೆ ಆಕೆಗೆ ವಿದ್ಯಾಭ್ಯಾಸ ಮುಂದು ವರಿಸಲು ಅವಕಾಶ ನೀಡಿತು. ಈ ಮೂಲಕ ಆಕೆಗೆ ಗೃಹ ಬಂಧನದಿಂದ ಸ್ವಾತಂತ್ರ್ಯ ನೀಡಿ ಎಂಬ ಮನವಿ ಪುರಸ್ಕರಿಸಿತು.

ಮೊನ್ನೆಯಷ್ಟೇ ಕೇರಳದಿಂದ ದಿಲ್ಲಿಗೆ ಬಂದಿದ್ದ ಹದಿಯಾ, ಸೋಮವಾರ ಸುಪ್ರೀಂ ಕೋರ್ಟ್‌ನ ಮುಂದೆ ಹಾಜರಾದಳು. ಈ ಸಂದರ್ಭದಲ್ಲಿ ಅದು ಸುಮಾರು 30 ನಿಮಿಷಗಳವರೆಗೆ ಹದಿಯಾ ಅಹವಾಲು ಕೇಳಲು ಅವಕಾಶ ನೀಡಿತು. ಇದೇ ವೇಳೆ ಅದು ನಿನ್ನ ಭವಿಷ್ಯದ ಬಗ್ಗೆ ಯಾವ ಕನಸನ್ನು ಹೊಂದಿರುವೆ ಎಂದು ಪ್ರಶ್ನಿಸಿತು. ಇದಕ್ಕೆ ಆಕೆ ನನಗೆ ಸ್ವಾತಂತ್ರ್ಯ ಬೇಕು ಎಂದಷ್ಟೇ ಹೇಳಿದಳು. ಅನಂತರ ಆಕೆ ಹಿಂದೆ ವ್ಯಾಸಂಗ ಮಾಡುತ್ತಿದ್ದ ತಮಿಳುನಾಡಿನ ಸೇಲಂನಲ್ಲಿ ಹೋಮಿಯೋಪತಿ ವೈದ್ಯಕೀಯ ಕೋರ್ಸ್‌ ಮುಂದುವರಿಸುವಂತೆ ಸೂಚಿ ಸಿದೆ. ಅಲ್ಲದೆ, ಆಕೆಯನ್ನು ಪುನಃ ಅಡ್ಮಿಶನ್‌ ಮಾಡಿಸಿ ಕೊಳ್ಳಬೇಕು ಹಾಗೂ ಆಕೆಗೆ ಹಾಸ್ಟೆಲ್‌ ಸೌಲಭ್ಯ ಒದಗಿಸಬೇಕು ಎಂದು ಹೋಮಿಯೋಪತಿ ಕಾಲೇಜಿಗೆ ಕೋರ್ಟ್‌ ಆದೇಶಿಸಿದ್ದಲ್ಲದೆ, ಕಾಲೇಜಿನ ಡೀನ್‌ರನ್ನು ಆಕೆಯ ಪೋಷಕರನ್ನಾಗಿ ನೇಮಿಸಬೇಕೆಂದು ಸೂಚಿಸಿದೆ. ಕೇರಳ ಪೊಲೀಸರು ಹದಿಯಾಗೆ ಭದ್ರತೆ ಒದಗಿಸಿ, ಆಕೆಯನ್ನು ಕಾಲೇಜಿಗೆ ಕಳುಹಿಸುವ ವ್ಯವಸ್ಥೆಯನ್ನು ಶೀಘ್ರ ಮಾಡಬೇಕೆಂದೂ ಹೇಳಿದೆ.

ಪುತ್ರಿಯನ್ನು ಬಲವಂತವಾಗಿ ಮತಾಂತರ ಮಾಡ ಲಾಗಿದೆ ಎಂದು ಹದಿಯಾ ತಂದೆ ಅಶೋಕನ್‌ ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದರು. ಶಫೀನ್‌ ಜತೆಗಿನ ವಿವಾಹವನ್ನು ರದ್ದುಗೊಳಿಸಿದ ಕೇರಳ ಹೈಕೋರ್ಟ್‌, ಹದಿಯಾಳನ್ನು ಪಾಲಕರ ವಶಕ್ಕೊಪ್ಪಿಸಿತ್ತು. ಆದರೆ ಅನಂತರ ಶಫೀನ್‌ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದರು. ಅಲ್ಲದೆ ಪ್ರಕರಣವನ್ನು ರಾಷ್ಟ್ರೀಯ 
ತನಿಖಾದಳ ವಹಿಸಿಕೊಂಡಿದ್ದು, ಮತಾಂತರ ಬಗ್ಗೆ ಸಮಗ್ರ ತನಿಖೆ ನಡೆಸುತ್ತಿದೆ.

5 ಗಂಟೆ ಅನಂತರವೂ ನಡೆಯಿತು ವಿಚಾರಣೆ: ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ನ್ಯಾಯಾಲಯದಲ್ಲಿ ಸುಮಾರು ಎರಡು ಗಂಟೆ ವಾದ ನಡೆಸಿತು. ಕೇರಳದಲ್ಲಿ ನಡೆದಿರುವ ಮತಾಂತರದ ವರದಿಗಳನ್ನು ಎನ್‌ಐಎ ನೀಡಿತು. ಈ ಮಧ್ಯೆ ಪ್ರಕರಣದ ವಿಚಾರಣೆಯನ್ನು ಗೌಪ್ಯವಾಗಿ ನಡೆಸಬೇಕೆಂದು ಹದಿಯಾಳ ತಂದೆ ಅಶೋಕನ್‌ ಆಗ್ರಹಿಸಿದರಾದರೂ, ಶಫೀನ್‌ ಪರ ವಕೀಲರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಕೋರ್ಟ್‌ ಕಲಾಪ 5 ಗಂಟೆಯ ಅನಂತರವೂ ಮುಂದು ವರಿದಿತ್ತು. ಅನಂತರ ವಿಚಾರಣೆಯನ್ನು ಜನವರಿಗೆ ಮುಂದೂಡಲಾಗಿದೆ.

ಟಾಪ್ ನ್ಯೂಸ್

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.