ಹರಿಯಾಣ; ಸಮೀಕ್ಷೆ ಲೆಕ್ಕಾಚಾರ ತಪ್ಪಾಗಿದ್ದು ಹೇಗೆ? ಮಹಾರಾಷ್ಟ್ರದಲ್ಲೂ BJPಗೆ 22 ಸ್ಥಾನ ನಷ್ಟ

Team Udayavani, Oct 24, 2019, 4:32 PM IST

Wrong-Poll-predict

ಹರಿಯಾಣ:ಹರಿಯಾಣ ವಿಧಾನಸಭಾ ಮತಎಣಿಕೆಯ ಅಂತಿಮ ಘಟ್ಟ ತಲುಪುತ್ತಿದ್ದಂತೆಯೇ ಫಲಿತಾಂಶ ಎಲ್ಲರಿಗೂ ಅಚ್ಚರಿ ತಂದಿದೆ. 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹತ್ತೂ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿತ್ತು. ಅಲ್ಲದೇ ಇಂಡಿಯಾ ಟುಡೇ, ಆ್ಯಕ್ಸಿಸ್ ಹೊರತು ಪಡಿಸಿ ಇತರ ಎಲ್ಲಾ ಚುನಾವಣೋತ್ತರ, ಮತದಾನೋತ್ತರ ಸಮೀಕ್ಷೆಗಳೆಲ್ಲ 90 ಸದಸ್ಯಬಲದ ಹರಿಯಾಣದಲ್ಲಿ ಬಿಜೆಪಿ 70 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದವು.

ಆದರೆ ಇದೀಗ ಹರಿಯಾಣ ಅತಂತ್ರ ವಿಧಾನಸಭೆಯಾಗಿದೆ. ಬಿಜೆಪಿ 38 ಸ್ಥಾನಗಳಲ್ಲಿ, ಕಾಂಗ್ರೆಸ್ 33 ಹಾಗೂ ಜೆಜೆಪಿ 12 ಸ್ಥಾನಗಳಲ್ಲಿ ಜಯ ಸಾಧಿಸುವತ್ತ ಹೆಜ್ಜೆ ಇಟ್ಟಿವೆ. ಶೇ.40ರಷ್ಟು ಮತಎಣಿಕೆ ಮುಕ್ತಾಯಗೊಂಡಾಗ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಗೆ ಸಾಕ್ಷಿಯಾಗಿತ್ತು.

ಈ ಹಿನ್ನೆಲೆಯಲ್ಲಿ ಎಲ್ಲಾ ಸಮೀಕ್ಷೆಗಳ ಲೆಕ್ಕಚಾರ ತಲೆಕೆಳಗಾಗಿದ್ದು ಹೇಗೆ ಎಂಬ ಪ್ರಶ್ನೆ ಉದ್ಭವಿಸಿದೆ. ಅದಕ್ಕೆ ಮುಖ್ಯ ಕಾರಣ ಬಹುತೇಕ ಸಮೀಕ್ಷೆಗಳು 2019ರ ಲೋಕಸಭಾ ಚುನಾವಣೆಯ ಫಲಿತಾಂಶವನ್ನೇ ನೂತನ ಮಾನದಂಡವಾಗಿ ಪರಿಗಣಿಸಿದ್ದರು.

2019ರ ಲೋಕಸಭಾ ಚುನಾವಣೆಯಲ್ಲಿ ಹರಿಯಾಣದಲ್ಲಿ ಬಿಜೆಪಿ ಶೇ.58ರಷ್ಟು ಮತ ಪಡೆದಿತ್ತು. ಇದೀಗ ವಿಧಾನಸಭಾ ಚುನಾವಣೆಯಲ್ಲಿ ಶೇ.36ಕ್ಕೆ ಕುಸಿತ ಕಂಡಿದೆ. 2014ರ ಚುನಾವಣೆಗೆ ಹೋಲಿಸಿದರೆ ಬಿಜೆಪಿ ಕೇವಲ ಶೇ.2-3ರಷ್ಟು ಮತಗಳನ್ನಷ್ಟೇ ಹೆಚ್ಚು ಪಡೆದಿದೆ. ಆದರೆ 2019ರ ಲೋಕಸಭಾ ಚುನಾವಣೆಗೆ ಹೋಲಿಸಿದರೆ ಶೇ.20ರಷ್ಟು ಭಾರೀ ನಷ್ಟ ಅನುಭವಿಸಿದೆ.

ಮಹಾರಾಷ್ಟ್ರದ ಪ್ರವಾಹಪೀಡಿತ ಪ್ರದೇಶಗಳಲ್ಲಿ ಬಿಜೆಪಿಗೆ ಸೋಲು:

ಮಹಾರಾಷ್ಟ್ರದ ಕೊಲ್ಹಾಪುರದ ಹತ್ತು ಕ್ಷೇತ್ರಗಳಲ್ಲಿ ಬಿಜೆಪಿಗೆ ಹೀನಾಯ ಸೋಲು ಅನುಭವಿಸಿದೆ. ಅಲ್ಲದೇ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರವಾಹ ಪೀಡಿತ ಕ್ಷೇತ್ರಗಳಲ್ಲಿ ಬಿಜೆಪಿ ಪರಾಜಯಗೊಂಡಿದೆ. ಈ ನಿಟ್ಟಿನಲ್ಲಿ 2014ರ ಚುನಾವಣೆಯಲ್ಲಿ ಬಿಜೆಪಿ 122 ಸ್ಥಾನಗಳಲ್ಲಿ ಜಯ ಸಾಧಿಸಿತ್ತು. ಆದರೆ ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ನೂರು ಸ್ಥಾನಗಳಲ್ಲಷ್ಟೇ ಗೆಲುವು ಪಡೆಯಲು ಯಶಸ್ವಿಯಾಗಿದೆ. ಚುನಾವಣೋತ್ತರ ಮತ್ತು ಮತದಾನೋತ್ತರ ಸಮೀಕ್ಷೆಗಳೆಲ್ಲವೂ ಮಹಾರಾಷ್ಟ್ರದಲ್ಲಿ ಬಿಜೆಪಿಯೇ 150ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿದ್ದವು.

ಆದರೆ ಈ ಬಾರಿ ಬಿಜೆಪಿ 100 ಸ್ಥಾನಗಳಲ್ಲಿ ಶಿವಸೇನಾ 58, ಕಾಂಗ್ರೆಸ್ 45, ಎನ್ ಸಿಪಿ 51 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲಿದೆ ಎಂಬ ಭವಿಷ್ಯ ಹುಸಿಯಾಗಿದೆ.

ಟಾಪ್ ನ್ಯೂಸ್

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Kochi: ಲೈಂಗಿಕ ಕಿರುಕುಳ ಕೇಸು ವಾಪಸ್‌ ಪಡೆಯಲ್ಲ ಎಂದ ಮಲಯಾಳಿ ನಟಿ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.