Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಕಣಕ್ಕೆ, ಸಿಪಿಎಂಗೆ 1 ಸ್ಥಾನ
Team Udayavani, Sep 13, 2024, 1:53 AM IST
ಹೊಸದಿಲ್ಲಿ: ಹರಿಯಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಗುರುವಾರ ಮತ್ತೆ 8 ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ್ದು, ಸಿಪಿಎಂಗೆ 1 ಸ್ಥಾನವನ್ನು ಬಿಟ್ಟುಕೊಟ್ಟಿದೆ. ಈ ಮೂಲಕ 90 ಕ್ಷೇತ್ರಗಳ ಪೈಕಿ 89ರಲ್ಲಿ ಕಾಂಗ್ರೆಸ್ ಸ್ಪರ್ಧಿಸುತ್ತಿದ್ದು, ಭಿವಾನಿ ಕ್ಷೇತ್ರದಲ್ಲಿ ಸಿಪಿಎಂ ಕಣಕ್ಕಿಳಿಯಲಿದೆ.
ನಾಮಪತ್ರ ಸಲ್ಲಿಕೆಗೆ ಗುರುವಾರ ಕೊನೇ ದಿನವಾದ್ದರಿಂದ ಕಾಂಗ್ರೆಸ್ 4, 5 ಮತ್ತು 6ನೇ ಪಟ್ಟಿಯನ್ನು ತರಾತುರಿಯಲ್ಲಿ ಬಿಡುಗಡೆ ಮಾಡಿತು. ರಣದೀಪ್ ಸುಜೇìವಾಲ ಪುತ್ರ ಆದಿತ್ಯ ಕೈಥಾಲ್ನಿಂದ ಸ್ಪರ್ಧಿಸುತ್ತಿದ್ದಾರೆ. ಇತ್ತೀಚೆಗೆ ಕಾಂಗ್ರೆಸ್ ಸೇರಿದ ಪತ್ರಕರ್ತ ಸರ್ವಮಿತ್ರ ಕಾಂಬೋಜ್ ಸಿಶಾì ಜಿಲ್ಲೆಯ ರಾನಿಯಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇದೇ ವೇಳೆ, ಆಪ್ ಗುರುವಾರ 19 ಅಭ್ಯರ್ಥಿಗಳ 6ನೇ ಪಟ್ಟಿ ಬಿಡುಗಡೆ ಮಾಡಿದೆ. ಈ ಹಿಂದೆಯೇ 70 ಅಭ್ಯರ್ಥಿಗಳನ್ನು ಆಪ್ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.