Haryana;ಬಿಜೆಪಿ ಗೆದ್ದರೆ ನಾನು ಸಿಎಂ ಸ್ಥಾನದ ಆಕಾಂಕ್ಷಿ!: ಅನಿಲ್ ವಿಜ್
Team Udayavani, Sep 16, 2024, 6:30 AM IST
ಅಂಬಾಲಾ: ಹರಿಯಾಣದ ಬಿಜೆಪಿಯಲ್ಲಿ ಗೊಂದಲ ಆರಂಭವಾಗಿದ್ದು, ಪಕ್ಷದ ಹಿರಿಯ ನಾಯಕ, ಅನಿಲ್ ವಿಜ್ “ನಾನು ಸಿಎಂ ಸ್ಥಾನದ ಆಕಾಂಕ್ಷಿ ಎಂದು ಹೇಳಿದ್ದಾರೆ. ನಯಾಬ್ ಸಿಂಗ್ ಸೈನಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಜೆಪಿ ಪಕ್ಷ ಘೋಷಣೆ ಮಾಡಿದ ಬೆನ್ನಲ್ಲೇ ಹರಿಯಾಣದಲ್ಲಿ 6 ಬಾರಿ ಶಾಸಕರಾಗಿರುವ ಅನಿಲ್ ಹೇಳಿದ್ದಾರೆ.
“ನಾನು ಈವರೆಗೂ ಪಕ್ಷದಿಂದ ಏನನ್ನೂ ಬಯಸಿಲ್ಲ. ನನ್ನನ್ನು ಭೇಟಿ ಮಾಡಲು ಬರುವ ಜನರು ನಾನು ಪಕ್ಷದಲ್ಲಿ ಹಿರಿಯ ಎಂದು ಹೇಳುತ್ತಾರೆ. ಅಲ್ಲದೇ ನಾನು ಮುಖ್ಯಮಂತ್ರಿ ಏಕಾಗುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ. ಹಿರಿಯ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕೊಡುವುದು ಒಂದು ರೀತಿಯ ಸರಿಯಾದ ಕ್ರಮ ಎನಿಸಿಕೊಳ್ಳುತ್ತದೆ. ಹೀಗಾಗಿ ನಾನು ಸ್ಪರ್ಧಿಸುತ್ತಿರುವ ಕ್ಷೇತ್ರದ ಜನರ ಬಯಕೆ ಹಾಗೂ ಪಕ್ಷದಲ್ಲಿ ನನ್ನ ಹಿರಿತನವನ್ನು ಆಧಾರವಾಗಿಟ್ಟುಕೊಂಡು ಈ ಬಾರಿ ನಾನು ಸಿಎಂ ಸ್ಥಾನದ ಆಕಾಂಕ್ಷಿ’ ಎಂದು ಅನಿಲ್ ಹೇಳಿದ್ದಾರೆ.
ಸೈನಿಯೇ ಸಿಎಂ ಅಭ್ಯರ್ಥಿ: ಪ್ರಧಾನ್
ಹರಿಯಾಣ ದಲ್ಲಿ ಬಿಜೆಪಿಯ ಮುಖ್ಯ ಮಂತ್ರಿ ಅಭ್ಯರ್ಥಿ ನಯಾಬ್ ಸಿಂಗ್ ಸೈನಿ ಅವರೇ ಆಗಿರುತ್ತಾರೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಹೇಳಿದ್ದಾರೆ. ಅನಿಲ್ ವಿಜ್ ತಾನೂ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡ ಬೆನ್ನಲ್ಲೇ ಪ್ರಧಾನ್ ಈ ವಿಷಯ ಸ್ಪಷ್ಟಪಡಿಸಿದ್ದಾರೆ. 90 ಸದಸ್ಯ ಬಲದ ಹರಿಯಾಣ ವಿಧಾನಸಭೆ ಚುನಾವಣೆಗೆ ಅ.5ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಅ.8ಕ್ಕೆ ಫಲಿತಾಂಶ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ
Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್ ಡೆಲಿವರಿ ಯುವಕ ಆತ್ಮಹತ್ಯೆ
Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ
Chennai: ರಸ್ತೆ ಬದಿ ಪತ್ತೆಯಾದ ಸೂಟ್ಕೇಸ್ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…
Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.