ಹಾಶೀಮ್‌ಪುರ ನರಮೇಧ ಪ್ರಕರಣ: ನಾಲ್ವರು ಜವಾನರು ದಿಲ್ಲಿ ಕೋರ್ಟಿಗೆ ಶರಣು
Team Udayavani, Nov 22, 2018, 5:15 PM IST
ಹೊಸದಿಲ್ಲಿ : 1987ರ ಹಾಶೀಮ್‌ಪುರ ನರಮೇಧ ಕೇಸಿನಲ್ಲಿ ದೋಷಿಗಳೆಂದು ಘೋಷಿಸಲ್ಪಟ್ಟಿದ್ದ ಉತ್ತರ ಪ್ರದೇಶ ಪ್ರಾಂತೀಯ ಸಶಸ್ತ್ರ ಕಾನ್‌ಸ್ಟಾಬುಲರಿ ಪಡೆಯ (ಯುಪಿಪಿಎಸಿ) 15 ಮಂದಿ ಜವಾನರ ಪೈಕಿ ನಾಲ್ಕು ಮಂದಿ ಇಂದು ಗುರುವಾರ ದಿಲ್ಲಿಯ ತೀಸ್ ಹಜಾರಿ ನ್ಯಾಯಾಲಯಕ್ಕೆ ಶರಣಾದರು.
ಎಎನ್‌ಐ ಮಾಡಿರುವ ವರದಿಯ ಪ್ರಕಾರ ಈ ನಾಲ್ವರು ಯುಪಿ ಪಿಎಸಿ ಜವಾನರನ್ನು ತಿಹಾರ್ ಜೈಲಿಗೆ ಕಳುಹಿಸಲಾಗುವುದು.
ತೀಸ್ ಹಜಾರಿ ನ್ಯಾಯಾಲಯವು ಉಳಿದ ಜವಾನರ ವಿರುದ್ದ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.
1987ರ ಹಾಶೀಮ್‌ಪುರ ನರಹತ್ಯೆ ಕೇಸ್ ಎಂದು ಅನಂತರದಲ್ಲಿ ತಿಳಿಯಲ್ಪಟ್ಟಿರುವ, ಉತ್ತರ ಪ್ರದೇಶದ ಅಲ್ಪಸಂಖ್ಯಾಕ ಸಮುದಾಯದ 42 ಮಂದಿಯನ್ನು ಕೊಂದ ಪ್ರಕರಣದ ಅಪರಾಧಕ್ಕಾಗಿ ದಿಲ್ಲಿ ಹೈಕೋರ್ಟ್ ಕಳೆದ ಅ.31ರಂದು 16 ಪೊಲೀಸರಿಗೆ ಜೀವಾವಧಿ ಜೈಲು ಶಿಕ್ಷೆ ಪ್ರಕಟಿಸಿತ್ತು. ನಿರಸ್ತ್ರ ಮತ್ತು ತಮ್ಮ ಆತ್ಮರಕ್ಷಣೆ ಮಾಡಿಕೊಳ್ಳಲಾಗದ ಜನರನ್ನು ಗುರಿ ಇರಿಸಿ ನಡೆಸಲಾದ ನರಮೇಧ ಇದು ಹೈಕೋರ್ಟ್ ಹೇಳಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.