ರೇಪ್ ಕೇಸ್; ಬಿಜೆಪಿ ನಾಯಕ ಶಹನವಾಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ
ಬಿಜೆಪಿ ಮನಸ್ಥಿತಿ : ಪ್ರಧಾನಿ ವಿರುದ್ಧ ಕಿಡಿ ಕಾರಿದ ರಾಹುಲ್ ಗಾಂಧಿ
Team Udayavani, Aug 18, 2022, 3:09 PM IST
ನವದೆಹಲಿ: ಮಹಿಳೆಯೊಬ್ಬರು ನೀಡಿದ ಅತ್ಯಾಚಾರ ಆರೋಪದ ದೂರಿನ ಕುರಿತು ಬಿಜೆಪಿ ನಾಯಕ ಶಹನವಾಜ್ ಹುಸೇನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.
2018ರಲ್ಲಿ ಅತ್ಯಾಚಾರ ಆರೋಪದಡಿ ಮಹಿಳೆಯೊಬ್ಬರು ನೀಡಿದ ದೂರಿನ ಕುರಿತು ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಸಂಪೂರ್ಣ ನಿರಾಸಕ್ತಿ ಇದೆ ಎಂಬುದನ್ನು ಗಮನಿಸಿದ ನ್ಯಾಯಮೂರ್ತಿ ಆಶಾ ಮೆನನ್, ಎಫ್‌ಐಆರ್ ದಾಖಲಿಸಲು ನಿರ್ದೇಶಿಸಿರುವ 2018ರ ವಿಚಾರಣಾ ಆದೇಶದಲ್ಲಿ ಯಾವುದೇ ವಿಕೃತಿ ಇಲ್ಲ ಎಂದು ಹೇಳಿ, ಕಾರ್ಯಾಚರಣೆಗೆ ತಡೆ ನೀಡಿದ್ದ ನ್ಯಾಯಾಲಯದ ಮಧ್ಯಂತರ ಆದೇಶವನ್ನು ತೆರವು ಮಾಡಿದರು.
“ ಕೂಡಲೇ ಎಫ್‌ಐಆರ್ ದಾಖಲಿಸಬೇಕು. ತನಿಖೆಗಳನ್ನು ಪೂರ್ಣಗೊಳಿಸಬೇಕು ಮತ್ತು ಸೆಕ್ಷನ್ 173 ಸಿ ಆರ್ ಪಿಸಿ ಅಡಿಯಲ್ಲಿ ವಿವರವಾದ ವರದಿಯನ್ನು ನೀಡಬೇಕು. ಮೂರು ತಿಂಗಳೊಳಗೆ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಸಲ್ಲಿಸಬೇಕು,” ಎಂದು ನ್ಯಾಯಾಲಯ ಬುಧವಾರ ತನ್ನ ಆದೇಶದಲ್ಲಿ ತಿಳಿಸಿದೆ.
ಅತ್ಯಾಚಾರದ ಆರೋಪದ ಮೇಲೆ ಹುಸೇನ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ದೆಹಲಿ ಮೂಲದ ಮಹಿಳೆಯೊಬ್ಬರು ಕೆಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಕಿಡಿ ಕಾರಿದ ರಾಹುಲ್ ಗಾಂಧಿ
ಕ್ರಿಮಿನಲ್‌ಗಳಿಗೆ ಬಿಜೆಪಿಯ ಬೆಂಬಲವು ಮಹಿಳೆಯರ ಬಗ್ಗೆ ಪಕ್ಷದ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಆರೋಪಿಸಿ ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂತಹ ರಾಜಕಾರಣ ಮಾಡಿರುವುದು ನಾಚಿಕೆಯಾಗುವುದಿಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಉತ್ತರ ಪ್ರದೇಶದ ಉನ್ನಾವ್, ಹತ್ರಾಸ್, ಜಮ್ಮು- ಕಾಶ್ಮೀರದ ಕಥುವಾ ಮತ್ತು ಈಗ ಗುಜರಾತ್‌ನಲ್ಲಿ ನಡೆದ ಅತ್ಯಾಚಾರ ಪ್ರಕರಣಗಳ ಉದಾಹರಣೆಗಳನ್ನು ಅವರು ಉಲ್ಲೇಖಿಸಿ, ಅಲ್ಲಿ ಸರಕಾರವು ಈ ವಾರ 2002 ರ ಬಿಲ್ಕಿಸ್ ಬಾನೋ ಪ್ರಕರಣದಲ್ಲಿ ಅತ್ಯಾಚಾರ ಮತ್ತು ಹತ್ಯೆಯ ಅಪರಾಧಿಗಳನ್ನು ಬಿಡುಗಡೆ ಮಾಡಿದೆ. “ಉನ್ನಾವ್ – ಬಿಜೆಪಿ ಶಾಸಕರನ್ನು ಉಳಿಸಲು ಕೆಲಸ ಮಾಡಿದೆ. ಕಥುವಾ – ಅತ್ಯಾಚಾರಿಗಳ ಪರವಾಗಿ ರ‍್ಯಾಲಿ. ಹತ್ರಾಸ್ – ಅತ್ಯಾಚಾರಿಗಳ ಪರವಾಗಿ ಸರಕಾರ. ಗುಜರಾತ್ – ಅತ್ಯಾಚಾರಿಗಳ ಬಿಡುಗಡೆ ಮತ್ತು ಗೌರವ. ಕ್ರಿಮಿನಲ್‌ಗಳಿಗೆ ಬೆಂಬಲ ನೀಡುವುದು ಮಹಿಳೆಯರ ಬಗ್ಗೆ ಬಿಜೆಪಿಯ ಕ್ಷುಲ್ಲಕ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.