ಅಕ್ರಮ ಆಸ್ತಿ ಕೇಸು ವಜಾಕ್ಕೆ ಕೋರ್ಟ್ ನಕಾರ:ಸಿಎಂ ವೀರಭದ್ರಗೆ ಹಿನ್ನಡೆ
Team Udayavani, Mar 31, 2017, 12:28 PM IST
ಹೊಸದಿಲ್ಲಿ : ಸಿಬಿಐ ತಮ್ಮ ವಿರುದ್ಧ ದಾಖಲಿಸಿರುವ ಆದಾಯ ಮೀರಿದ ಆಸ್ತಿ ಕೇಸನ್ನು ರದ್ದು ಮಾಡಬೇಕೆಂದು ಕೋರಿ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಮತ್ತು ಅವರ ಪತ್ನಿ ಸಲ್ಲಿಸಿದ್ದ ಮನವಿಯನ್ನು ದಿಲ್ಲಿ ಹೈಕೋರ್ಟ್ ವಜಾ ಮಾಡಿದೆ.
2015ರ ಅಕ್ಟೋಬರ್ 1ರಂದು ಹಿಮಾಚಲ ಪ್ರದೇಶ ಹೈಕೋರ್ಟ್ ಹೊರಡಿಸಿದ್ದ, “ನ್ಯಾಯಾಲಯದ ಅನುಮತಿ ಇಲ್ಲದೆ ಬಂಧಿಸುವ, ಪ್ರಶ್ನಿಸುವ ಅಥವಾ ಚಾರ್ಜ್ ಶೀಟ್ ಸಲ್ಲಿಸುವಲ್ಲಿ ಸಿಬಿಐ ಅನ್ನು ನಿರ್ಬಂಧಿಸುವ’ ತಾತ್ಕಾಲಿಕ ಆದೇಶವನ್ನು ಕೂಡ ಜಸ್ಟಿಸ್ ವಿಪಿನ್ ಸಾಂಘಿ ಅವರು ತೆರವುಗೊಳಿಸಿ, ಸಿಬಿಐ ನ ಮಾರ್ಗವನ್ನು ಸುಗಮಗೊಳಿಸಿದರು.
“ರಿಟ್ ಪಿಟಿಷನ್ ಅನ್ನು ವಜಾ ಮಾಡಲಾಗಿದೆ; ಸ್ಟೇ ತೆರವುಗೊಳಿಸಲಾಗಿದೆ’ ಎಂದು ನ್ಯಾಯಾಲಯ ಹೇಳಿತು.
ಸಿಂಗ್ ಅವರು ತಮ್ಮ ಹಾಗೂ ಪತ್ನಿಯ ವಿರುದ್ಧ ದಾಖಲಿಸಲಾಗಿದ್ದ ಎಫ್ಐಆರ್ ಅನ್ನು ವಜಾ ಮಾಡುವಂತೆ ಕೋರಿದ್ದರು. ತಮ್ಮ ಮನೆಗೆ ದಾಳಿ ನಡೆಸುವ ಮೂಲಕ ಸಿಬಿಐ ತನ್ನ ಅಧಿಕಾರ ವ್ಯಾಪ್ತಿಯನ್ನು ಮೀರಿತ್ತು ಮಾತ್ರವಲ್ಲದೆ ತನ್ನ ವಿರುದ್ದದ ಸಿಬಿಐ ಕ್ರಮವು ರಾಜಕೀಯ ವೈಷಮ್ಯ ಹಾಗೂ ಸೇಡಿನ ಕ್ರಮವಾಗಿತ್ತು ಎಂದು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.