ಬಾಲಕಿಯ ಅಪಹರಣ: ಹೆಡ್ ಕಾನ್ಸ್ಟೆಬಲ್ ಕಸ್ಟಡಿಗೆ, ರೇಪ್ ಕೃತ್ಯ ?
Team Udayavani, Mar 10, 2017, 11:58 AM IST
ಹೈದರಾಬಾದ್ : 15 ವರ್ಷ ಪ್ರಾಯದ ಹುಡುಗಿಯನ್ನು ಕಿಡ್ ನ್ಯಾಪ್ ಮಾಡಿದ ಆರೋಪದ ಮೇಲೆ ಇಲ್ಲಿನ ಹೆಡ್ ಕಾನ್ಸ್ಟೆಬಲ್ ಓರ್ವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿಯ ಮೇಲೆ ಆರೋಪಿ ಹೆಡ್ ಕಾನ್ಸ್ಟೆಬಲ್ ಅತ್ಯಾಚಾರ ನಡೆಸಿರುವ ಆರೋಪವೂ ಕೇಳಿಬಂದಿದೆ.
ಇಲ್ಲಿನ ಕಾಮಾಟಿಪುರ ಪೊಲೀಸ್ ಸ್ಟೇಶನ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ಸ್ಟೆಬಲ್ ವಿರುದ್ಧ ಅಪಹೃತ ಹುಡುಗಿಯ ಸಹೋದರಿಯು ದೂರು ದಾಖಲಿಸಿದ್ದಳು. ತನ್ನ ತಂಗಿಯನ್ನು ಆರೋಪಿ ಹೆಡ್ ಕಾನ್ಸ್ಟೆಬಲ್ ಕಾರಿನಲ್ಲಿ ಅಪಹರಿಸಿ ಒಯ್ದಿರುವಾಗಿ ದೂರಿನಲ್ಲಿ ಹೇಳಲಾಗಿದೆ ಎಂದು ಕಾಮಾಟಿಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್ ಸುದರ್ಶನ್ ತಿಳಿಸಿದ್ದಾರೆ.
ಅಪಹೃತ ಬಾಲಕಿಯು ಕಾಮಾಟಿಪುರ ಪೊಲೀಸ್ ಠಾಣೆ ಸಮೀಪದ ಮನೆಯೊಂದರಲ್ಲಿ ಕುಟುಂಬದವರೊಂದಿಗೆ ವಾಸವಾಗಿದ್ದಳು. ದೂರನ್ನು ಆಧರಿಸಿಕೊಂಡು ಪೊಲೀಸರು ಆರೋಪಿ ಹೆಡ್ ಕಾನ್ಸ್ಟೆಬಲ್ ನನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಆತನಿಂದ ವಶಕ್ಕೆ ತೆಗೆದುಕೊಳ್ಳಲಾಗಿರು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸುದರ್ಶನ್ ತಿಳಿಸಿದ್ದಾರೆ.
ಮಾಧ್ಯಮಗಳಲ್ಲಿ ವರದಿಯಾಗಿರುವ ಪ್ರಕಾರ ಆರೋಪಿ ಹೆಡ್ ಕಾನ್ಸ್ಟೆಬಲ್ ವಿರುದ್ಧ ಅತ್ಯಾಚಾರದ ಆರೋಪ ಇದೆಯೇ ಎಂದು ಕೇಳಿದಾಗ, ಸುದರ್ಶನ್ ಅವರು, ಬಾಲಕಿಯ ಮನೆಯವರು ಕೊಟ್ಟಿರುವ ದೂರಿನಲ್ಲಿ ಅಂತಹ ಆರೋಪ ಇಲ್ಲ ಎಂದು ಉತ್ತರಿಸಿದರು. ಹಾಗಿದ್ದರೂ ಬಾಲಕಿಯ ವೈದ್ಯಕೀಯ ಪರೀಕ್ಷೆಯ ವರದಿಯನ್ನು ನೋಡಿಕೊಂಡು ಮುಂದಿನ ಕ್ರಮ ಜರುಗಿಸಲಾಗುವುದು ಎಂದವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.