ವೈದ್ಯರ ಸೇವೆಗೆ ಬಿಲ್‌ ನಾವು ತುಂಬುತ್ತೇವೆ; ಕೇಂದ್ರ ಸರ್ಕಾರದ ಸೂಚನೆ


Team Udayavani, Dec 30, 2017, 1:11 PM IST

Doctor.jpg

ನವದೆಹಲಿ: ಗ್ರಾಮೀಣ ಪ್ರದೇಶಗಳಲ್ಲಿ ತಜ್ಞ ವೈದ್ಯರ ಸೇವೆಯನ್ನು ಪಡೆಯಿರಿ. ಅವರಿಗೆ ಉತ್ತಮ ವೇತನ ನೀಡಿ. ಅದರ ಬಿಲ್‌ ಅನ್ನು ನಾವು ತುಂಬುತ್ತೇವೆ.’ ಹೀಗೆಂದು ಎಲ್ಲ ರಾಜ್ಯಗಳಿಗೂ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಲೋಕಸಭೆಯಲ್ಲಿ ಶುಕ್ರವಾರ ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ಜೆ.ಪಿ. ನಡ್ಡಾ, “ಸ್ತ್ರೀರೋಗ ತಜ್ಞರು ಸೇರಿದಂತೆ ತಜ್ಞವೈದ್ಯರ ಸೇವೆಯನ್ನು ಗ್ರಾಮೀಣ ಆರೋಗ್ಯ ಕೇಂದ್ರಗಳಲ್ಲಿ ರಾಜ್ಯ ಸರ್ಕಾರಗಳೇ ಪಡೆಯಲಿ. ಅವರ ವೇತನದ ಮೊತ್ತವನ್ನು ನಾವು ಪಾವತಿಸುತ್ತೇವೆ,’ ಎಂದಿದ್ದಾರೆ.

ಇದೇ ವೇಳೆ, ದಿವಾಳಿತನ ತಿದ್ದುಪಡಿ ವಿಧೇಯಕಕ್ಕೆ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದ್ದು, ಸಾಲದ ಸುಸ್ತಿದಾರರಿಗೆ ಕೂಡ ಬಿಡ್ಡಿಂಗ್‌ನಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಸುಸ್ತಿದಾರನು ಬಾಕಿ ಉಳಿದ ಬಡ್ಡಿಯನ್ನು ಪಾವತಿಸಿ, ತನ್ನ ಸಾಲದ ಖಾತೆಯನ್ನು ಮತ್ತೆ ಚಾಲ್ತಿಗೆ ತಂದಲ್ಲಿ ಆತನೂ ಬಿಡ್ಡಿಂಗ್‌ ನಲ್ಲಿ ಪಾಲ್ಗೊಳ್ಳಬಹುದು ಎಂದು ವಿಧೇಯಕ ಹೇಳುತ್ತದೆ. ಭಾರತೀಯ ವೈದ್ಯಕೀಯ ಮಂಡಳಿ(ಐಎಂಸಿ)ಯ ಬದಲಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗವನ್ನು ತರುವ ವಿಧೇಯಕವನ್ನೂ ಶುಕ್ರವಾರ ಮಂಡಿಸಲಾಗಿದೆ.

98 ಖಾಸಗಿ ಮಸೂದೆ ಮಂಡನೆ: ಬೀದಿ ಹಸುಗಳ ರಕ್ಷಣೆಗೆ ಪ್ರತ್ಯೇಕ ಮಂಡಳಿ ಸ್ಥಾಪನೆ ಸೇರಿದಂತೆ 98 ವಿವಿಧ ಖಾಸಗಿ ಸದಸ್ಯ ಮಸೂದೆಗಳು ಶುಕ್ರವಾರ ಲೋಕಸಭೆಯಲ್ಲಿ ಮಂಡನೆಯಾಗಿದೆ. ಇದೇ ವೇಳೆ, ಉದ್ಯೋಗವನ್ನು ಮೂಲಭೂತ ಹಕ್ಕು ಎಂದು ಪರಿಗಣಿಸುವಂತೆ ಕೋರಿ ಸಲ್ಲಿಸಲಾಗಿದ್ದ ಖಾಸಗಿ ಸದಸ್ಯ ಮಸೂದೆಯನ್ನು ರಾಜ್ಯಸಭೆ ತಿರಸ್ಕರಿಸಿದೆ. 18ಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಉದ್ಯೋಗ ನೀಡುವ ಭರವಸೆಯನ್ನು ಸರ್ಕಾರ ಕೊಡಬೇಕು ಅಥವಾ ಅವರಿಗೆ ನಿರುದ್ಯೋಗ ಭತ್ಯೆ ನೀಡಬೇಕು ಎಸ್ಪಿ ಸಂಸದರೊಬ್ಬರು ಕೋರಿದ್ದರು. ಈ ವಿಧೇಯಕ ಕೇವಲ 3 ಮತಗಳಿಂದ ಬಿದ್ದುಹೋಯಿತು.

ಜ.1ರಂದು ರಜೆ 2018ರ ಮೊದಲ ದಿನ ಅಂದರೆ ಜ.1ರಂದು ಸಂಸತ್‌ನ ಸದನಗಳಿಗೆ ರಜೆ ಘೋಷಿಸಲಾಗಿದೆ. ಹೀಗಾಗಿ, ಜ.2ರಂದು ಕಲಾಪ ನಡೆಯಲಿದೆ. 5ರಂದು ಚಳಿಗಾಲದ ಅಧಿವೇಶನಕ್ಕೆ ತೆರೆಬೀಳಲಿದೆ.

“ದೇಶಪ್ರೇಮದ ದಿನ’ವೆಂದು ಘೋಷಿಸಿ
ನೇತಾಜಿ ಸುಭಾಷ್‌ಚಂದ್ರ ಬೋಸ್‌ ಅವರ ಜನ್ಮದಿನವಾದ ಜ.23 ಅನ್ನು “ದೇಶಪ್ರೇಮದ ದಿನ’ ಎಂದು ಘೋಷಿಸಿ, ಆ ದಿನ ರಾಷ್ಟ್ರೀಯ ರಜೆಯನ್ನೂ ಘೋಷಿಸಬೇಕು ಎಂಬ ಒತ್ತಾಯ ಕೇ ಳಿಬಂದಿದೆ. ರಾಜ್ಯಸಭೆಯಲ್ಲಿ ಸಿಪಿಎಂ ಮುಖಂಡರಾದ ರಿತಬ್ರತಾ ಬ್ಯಾನರ್ಜಿ ಅವರು ಈ ಪ್ರಸ್ತಾಪ ಮುಂದಿಟ್ಟಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಭಾಧ್ಯಕ್ಷ ವೆಂಕಯ್ಯ ನಾಯ್ಡು, ನಿಮ್ಮ ಸಲಹೆಯನ್ನು ಸರ್ಕಾರ ಪರಿಗಣಿಸಬಹುದು. ಆದರೆ, ಸದಸ್ಯರು ಯಾವತ್ತೂ ರಜೆ ಘೋಷಿಸುವಂತೆ ಕೇಳಬಾರದು ಎಂದು ಕಿವಿಮಾತು ನುಡಿದರು.

ಟಾಪ್ ನ್ಯೂಸ್

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

1-ragaaa

PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ

DKShi

Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Kumble: ಕುಂಬಳೆ ಪೇಟೆಯಲ್ಲಿ ವಿದ್ಯಾರ್ಥಿಗಳ ಹೊಡೆದಾಟ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Road mishap: ರಿಕ್ಷಾಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

1-swami-sm-bg

Udupi; ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆಯ ಅಭ್ಯಾಸ ಇಂದಿನ ಅಗತ್ಯತೆ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.