![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 18, 2019, 11:09 AM IST
ಪಟನಾ : ಬಿಹಾರದಲ್ಲಿ ಕಳೆದ ಮೂರು ದಿನಗಳಲ್ಲಿ ಬಿಸಿ ಗಾಳಿಗೆ 130 ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಹಲವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾಪಮಾನ ಅಪಾಯಕಾರಿಯಾಗಿ ಪರಿಣಮಿಸಿರುವ ಹಿನ್ನಲೆಯಲ್ಲಿ ಜೂನ್ 22 ರ ವರೆಗೆ ಶಾಲಾ ,ಕಾಲೇಜುಗಳಿಗೆ ರಜೆ ಸಾರಲಾಗಿದೆ.
ಔರಂಗಾಬಾದ್‌ನಲ್ಲಿ 60 ಮಂದಿ, ಗಯಾದಲ್ಲಿ 35 ಹಾಗೂ
ನಾವಡಾ ಮತ್ತು ನಳಂದಾದಲ್ಲಿ ತಲಾ 12 ಮಂದಿ ಸಾವನ್ನಪ್ಪಿದ್ದಾರೆ.
ಮುಂಗೇರ್‌ನಲ್ಲಿ 5 , ಕೈಮೂರ್ ಮತ್ತು ವೈಶಾಲಿಯಲ್ಲಿ ತಲಾ ಇಬ್ಬರು ಅರಾ ಮತ್ತು ಸಮಸ್ಠೀಪುರದಲ್ಲಿತಲಾ ಓರ್ವರು ಸಾವನ್ನಪ್ಪಿದ್ದಾರೆ.
ಬೆಳಗ್ಗೆ 11 ಗಂಟಿಯಿಂದ ಸಂಜೆ 4 ಗಂಟೆಯ ಒಳಗೆಜನರು ಮನೆಯೊಳಗೆ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. 11 ಗಂಟೆಯಿಂದ 4 ಗಂಟೆಯ ವರೆಗೆ ಯಾವುದೇ ನಿರ್ಮಾಣ ಕಾಮಗಾರಿ ಮಾಡದಂತೆ ನಿಷೇಧ ಹೇರಲಾಗಿದೆ.
ಗಯಾದಲ್ಲಿ ಸಾರ್ವಜನಿಕರು ಮನೆಗಳಿಂದ ಹೊರಗೆ ಬರದಂತೆ ಮುನ್ನೆಚ್ಚರಿಕೆಯಾಗಿ ಜಿಲ್ಲಾಡಳಿತ ಸೆಕ್ಷನ್ 144 ಜಾರಿ ಮಾಡಿದೆ.
ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ರೂಪಾಯಿ ಪರಿಹಾರಧನ ಘೋಷಿಸಿದ್ದಾರೆ.
ಗಯಾದಲ್ಲಿ ಗರಿಷ್ಠ 42 ಡಿಗ್ರಿ ಸೆಲ್ಸಿಯಸ್ ಉಷ್ಣತೆ ದಾಖಲಾಗಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.