ಆಸ್ಪತ್ರೆ ವ್ಯವಸ್ಥೆ ಮೇಲ್ದರ್ಜೆಗೆ ಏರಿಸಿ : ಪ್ರಧಾನಿ ನರೇಂದ್ರ ಮೋದಿ
Team Udayavani, May 6, 2022, 6:35 AM IST
ಹೊಸದಿಲ್ಲಿ: ಬಿಸಿ ಹವೆ ಮತ್ತು ಮಳೆಯಿಂದ ಜೀವ ಹಾನಿ ತಪ್ಪಿಸುವ ನಿಟ್ಟಿನಲ್ಲಿ ಅಗತ್ಯ ಮುಂಜಾಗರೂಕತೆಯ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ.
ಗುರುವಾರ ಹೊಸದಿಲ್ಲಿಯಲ್ಲಿ ಬಿಸಿಗಾಳಿ ಮತ್ತು ಮಳೆಗಾಲದಲ್ಲಿ ಉಂಟಾಗಬಹುದಾದ ಸವಾಲುಗಳನ್ನು ಎದುರಿಸಲು ಕೈಗೊಳ್ಳಬೇಕಾದ ಮುಂಜಾಗರೂಕತಾ ಕ್ರಮ ಗಳ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಮಾರ್ಚ್‌ನಿಂದ ಇದುವರೆಗೆ ದಾಖಲಾಗಿರುವ ತಾಪಮಾನದ ವಿವರಗಳನ್ನು ಪ್ರಧಾನಿಯವರಿಗೆ ಹವಾಮಾನ ಇಲಾಖೆ ಅಧಿಕಾರಿಗಳು ವಿವರಿಸಿದರು.
ತಾಪಮಾನ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೇಶದ ಆಸ್ಪತ್ರೆಗಳಲ್ಲಿ ಇರುವ ಅಗ್ನಿಶಾಮಕ ವ್ಯವಸ್ಥೆಯನ್ನು ಮೇಲ್ದರ್ಜೆಗೆ ಏರಿಸುವ ಹಾಗೂ ಅವುಗಳು ಸುವ್ಯವಸ್ಥೆಯಲ್ಲಿ ಇರುವ ಬಗ್ಗೆ ಪರಿಶೀಲನೆ ನಡೆಸಬೇಕು ಎಂದೂ ಪ್ರಧಾನಿ ಮೋದಿ ಹೇಳಿದ್ದಾರೆ. ಅರಣ್ಯ ಪ್ರದೇಶಗಳಲ್ಲಿ ಉಂಟಾಗುವ ಬೆಂಕಿಯನ್ನೂ ತಡೆಯಬೇಕು. ಜತೆಗೆ ನೀರಿ ನಿಂದ ಹರಡುವ ರೋಗಗಳನ್ನು ತಡೆಯಲೂ ಕ್ರಮ ಕೈಗೊಳ್ಳ ಬೇಕು ಎಂದು ಸೂಚಿಸಿದ್ದಾರೆ ಪ್ರಧಾನಿ.
1,100 ರೈಲು ರದ್ದು: ದೇಶದ ವಿದ್ಯುತ್ ಉತ್ಪಾದನ ಘಟಕಗಳಿಗೆ ಕಲ್ಲಿದ್ದಲು ನಿರಂತರವಾಗಿ ಪೂರೈಕೆ ಮಾಡುವ ನಿಟ್ಟಿನಲ್ಲಿ ಮೇ 24ರ ವರೆಗೆ ವಿವಿಧ ರೀತಿಯ 1,100 ರೈಲುಗಳನ್ನು ರದ್ದುಗೊಳಿಸಲಾಗಿದೆ. ಅವುಗಳು ಚಲಿಸುವ ಸಮಯ ಮತ್ತು ಮಾರ್ಗದಲ್ಲಿಯೇ ಕಲ್ಲಿ ದ್ದಲು ರೈಲುಗಳು ಸಂಚರಿಸಲಿವೆ. ಇದೇ ವೇಳೆ, ದಿಲ್ಲಿಯಲ್ಲಿ ಗುರುವಾರದ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದೇ ವೇಳೆ, ಟೊರೆಂಟ್ ಪವರ್ ಲಿಮಿಟೆಡ್ ಮತ್ತು ಭಾರತೀಯ ಅನಿಲ ನಿಗಮ ನಿಯಮಿತ ವಿದೇಶಗಳಿಂದ ದುಬಾರಿ ವೆಚ್ಚದಲ್ಲಿ ವಿದ್ಯುತ್ ಉತ್ಪಾದನೆಗೆ ಅನಿಲ ಖರೀದಿ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics; ಮತಕ್ಕಾಗಿ ಮುಸ್ಲಿಮರನ್ನು ಒಡೆವ ಕೆಲಸ ಕಾಂಗ್ರೆಸ್ ಮಾಡುತ್ತಿದೆ: ಬಿಜೆಪಿ
Maha Election; ಚು.ಆಯೋಗದಿಂದ ಉದ್ಧವ್ ಠಾಕ್ರೆ ಬ್ಯಾಗ್ ಪರಿಶೀಲನೆ, ವಿವಾದ
Manipura: ಇಬ್ಬರು ಶವ ಪತ್ತೆ, ಮಕ್ಕಳು ಸೇರಿ 6 ಮಂದೆ ಕಾಣೆ
ದಾವೂದ್, ನಟ ಸಲ್ಮಾನ್ ಸಂಪರ್ಕ ಇದ್ದಿದ್ದಕ್ಕೆ ಸಿದ್ಧಿಕಿ ಹತ್ಯೆ: ಶೂಟರ್
Ranchi: ವಕ್ಫ್ ಮಂಡಳಿಯು ಕರ್ನಾಟಕದಲ್ಲಿ ದೇಗುಲ, ರೈತರ ಭೂಮಿಯ ಕಸಿದಿದೆ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.