ತ.ನಾಡಿನಲ್ಲಿ ವರುಣನ ಅಬ್ಬರ: ಐವರ ಸಾವು
Team Udayavani, Nov 1, 2017, 6:45 AM IST
ಚೆನ್ನೈ: ತಮಿಳುನಾಡಿನ ಹಲವೆಡೆ ಸೋಮವಾರ ಆರಂಭವಾದ ಧಾರಾಕಾರ ಮಳೆ ಮಂಗಳವಾರವೂ ಮುಂದು ವರೆದಿದ್ದು, ಒಂದೇ ದಿನ ಐವರು ಮೃತಪಟ್ಟಿದ್ದಾರೆ.
ಕರಾವಳಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುತ್ತಿದ್ದು, ಇನ್ನೂ 2ರಿಂದ 3 ದಿನಗಳ ಕಾಲ ಚೆನ್ನೈ ಮತ್ತು ಕರಾವಳಿ ಪ್ರದೇಶಗಳಲ್ಲಿ ಮಳೆಯ ಅಬ್ಬರ ಜೋರಾಗಿಯೇ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಈ ಪ್ರದೇಶದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಚೆನ್ನೈನ ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. 2 ವರ್ಷಗಳ ಕೆಳಗೆ ತಮಿಳುನಾಡಿನಲ್ಲಿ ಸಂಭವಿಸಿದ್ದ ಪ್ರವಾಹ ಮರುಕಳಿಸುವ ಭೀತಿ ಜನರಲ್ಲಿ ಮನೆಮಾಡಿದೆ. ಅದರೆ ಈ ಕುರಿತು ಪ್ರತಿಕ್ರಿಯೆ ನೀಡಿರುವ ಮೀನುಗಾರಿಕೆ ಸಚಿವ ಡಿ.ಜಯಕುಮಾರ್, 2015ರ ಪರಿಸ್ಥಿತಿ ಮರುಕಳಿಸುವ ಆತಂಕ ಇಲ್ಲ. ಸರಕಾರ ಎಲ್ಲಾ ರೀತಿ ಪರಿಸ್ಥಿತಿ ನಿಭಾಯಿಸಲು ಸಿದ್ಧವಾಗಿದೆ. ಪ್ರವಾಹದ ನೀರು ಸರಾಗವಾಗಿ ಹರಿಯು ವಂತೆಯೂ ವ್ಯವಸ್ಥೆ ಮಾಡಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.