Panaji: ಪೊಂಡಾ ತಾಲೂಕಿನಾದ್ಯಂತ ಧಾರಾಕಾರ ಮಳೆ, ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
Team Udayavani, Jun 24, 2023, 4:45 PM IST
ಪಣಜಿ: ಮುಂಗಾರು ಆರಂಭವಾದ ಕೆಲವೇ ದಿನಗಳಲ್ಲಿ ನಾಗರಿಕರು ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ಸರ್ಕಾರ ಮಳೆಗಾಲ ಪೂರ್ವ ಸಿದ್ಧತಾ ಕಾರ್ಯ ಕೈಗೊಳ್ಳದಿರುವ ದೋಷಗಳೂ ಬೆಳಕಿಗೆ ಬರುತ್ತಿವೆ. ಕಳೆದ ಎರಡು ದಿನಗಳಿಂದ ಪೊಂಡಾ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಗೆ ಪೊಂಡಾ ತಾಲೂಕಿನಲ್ಲಿ ಕೊಳಚೆ ನೀರು ಮನೆ, ಅಂಗಡಿಗಳಿಗೆ ನುಗ್ಗಿದೆ. ಸ್ಥಳೀಯ ನಾಗರಿಕರು ಭಾರೀ ನಷ್ಟ ಅನುಭವಿಸಿದ್ದಾರೆ.
ಪೊಂಡಾ ಪೋಲೀಸ್ ಠಾಣೆ ಮುಂಭಾಗದ ನಾಲೆ ತುಂಬಿದ್ದರಿಂದ ಕಾಲುವೆಯಿಂದ ಜಿ.ಡಿ.ಖಾಸ್ನೀಸ್ ಅವರ ಮನೆಗೆ ಮೊಣಕಾಲಿನವರೆಗೂ ನೀರು ನುಗ್ಗಿದೆ. ಜತೆಗೆ ಇವರ ಮನೆ ಎದುರಿನ ಅಂಗಳದಲ್ಲಿರುವ ತುಳಸಿ ಮರಗಳು ವೃಂದಾವನ ಕಾಲುವೆಯ ನೀರಿನಲ್ಲಿ ಮುಳುಗಿವೆ. ಈ ಭಾಗದಲ್ಲಿರುವ ಅಂಗಡಿ, ಬೇಕರಿಗಳಿಗೂ ನೀರು ನುಗ್ಗಿದೆ. ಕೊಳಚೆ ನೀರು ಹರಿದುಹೋಗಲು ಆಡಳಿತ ಕೂಡಲೇ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಪೊಲೀಸ್ ಠಾಣೆ ಬಳಿ ರಸ್ತೆಯಲ್ಲೇ ನೀರು ತುಂಬಿ ಹರಿಯುತ್ತಿದ್ದು, ರಸ್ತೆಯೇ ರಾಜಕಾಲುವೆಯಾಗಿದೆ.
ಇದು ಸಾರಿಗೆಯ ಸಂಚಾರದ ಮೇಲೆ ಒಟ್ಟಾರೆ ಪರಿಣಾಮ ಬೀರಿದೆ. ಕೊಳಚೆ ನೀರು ಮನೆಗಳಿಗೆ ನುಗ್ಗಿದ್ದರಿಂದ ನಾಗರಿಕರು ಮನೆಗಳಲ್ಲಿ ವಾಸ ಮಾಡಲು ಪರದಾಡುವಂತಾಗಿದೆ. ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮುಂಗಾರು ಮಳೆಯಲ್ಲೇ ಇಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಳೆಗೂ ಮುನ್ನ ನಡೆದ ಸ್ವಚ್ಛತಾ ಕಾರ್ಯಗಳ ಬಗ್ಗೆ ಪ್ರಶ್ನೆ ಮೂಡಿದೆ. ನಾಗರಿಕರೂ ಆಡಳಿತದ ಕೆಲಸಗಳತ್ತ ಬೊಟ್ಟು ಮಾಡುತ್ತಿದ್ದಾರೆ. ಕೆಲ ಸ್ಥಳೀಯರು ಕಾಲುವೆಗಳಲ್ಲಿ ಕಸ ಸುರಿಯುವುದಕ್ಕೆ ನಾಗರಿಕರನ್ನೇ ಹೊಣೆಗಾರರನ್ನಾಗಿ ಮಾಡಿದ್ದಾರೆ.
ಇದನ್ನೂ ಓದಿ: Manipur Violence: ಮಣಿಪುರ ಪರಿಸ್ಥಿತಿ ಕುರಿತು ಅಮಿತ್ ಶಾ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.