ಮಹಾರಾಷ್ಟ್ರ, ಉತ್ತರಾಖಂಡ ಸೇರಿ 7 ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ… ಇಲಾಖೆ ಎಚ್ಚರಿಕೆ
Team Udayavani, Jul 21, 2023, 10:12 AM IST
ನವದೆಹಲಿ: ಮಹಾರಾಷ್ಟ್ರ, ಉತ್ತರಾಖಂಡ, ಹಿಮಾಚಲ, ಗುಜರಾತ್, ಛತ್ತೀಸ್‌ಗಢ, ತೆಲಂಗಾಣ ಮತ್ತು ಒಡಿಶಾ ಸೇರಿದಂತೆ ದೇಶದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಶುಕ್ರವಾರ ಉತ್ತರಾಖಂಡಕ್ಕೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ನಡುವೆ ಹಿಮಾಚಲ ಪ್ರದೇಶದಲ್ಲಿ ಜುಲೈ 22 ರವರೆಗೆ ‘ಯೆಲ್ಲೋ’ ಅಲರ್ಟ್ ಘೋಷಿಸಿದ್ದು ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆಯ ಪ್ರಕಾರ ಜುಲೈ 22 ರವರೆಗೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.
ಅದರಂತೆ ಮುಂದಿನ ಐದು ದಿನಗಳಲ್ಲಿ ಮಹಾರಾಷ್ಟ್ರ ಮತ್ತು ಮುಂದಿನ ಮೂರು ದಿನಗಳಲ್ಲಿ ಗುಜರಾತ್‌ನಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪುಣೆ, ರಾಯಗಡ, ಪಾಲ್ಘರ್ ಮತ್ತು ಥಾಣೆ ಸೇರಿದಂತೆ ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಲ್ಲಿ ಶುಕ್ರವಾರ ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿದೆ.
ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದ ಪರಿಣಾಮ ತಗ್ಗು ಪ್ರದೇಶಗಳು ಜಲಾವೃತಗೊಂಡಿತ್ತು, ಬಾರಿ ಮಳೆಯಿಂದ ಜನಜೀವನದ ಮೇಲೆ ಪರಿಣಾಮ ಬೀರಿದೆ. ಮುಂದಿನ ಎರಡು ದಿನಗಳ ಕಾಲ ಥಾಣೆ ಮತ್ತು ಪಾಲ್ಘರ್‌ನಲ್ಲಿರುವ ಎಲ್ಲಾ ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಇದನ್ನೂ ಓದಿ: ಮಣಿಪುರ: ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ… ಗ್ರಾಮಸ್ಥರಿಂದ ಆರೋಪಿಯ ಮನೆಗೆ ಬೆಂಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ
Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ
Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.