ಭಾರೀ ಮಳೆ, ಪ್ರವಾಹಕ್ಕೆ ಉತ್ತರ ತತ್ತರ
Team Udayavani, Aug 21, 2017, 8:45 AM IST
ಹೊಸದಿಲ್ಲಿ ಮಳೆ ಕೊರತೆ, ಬರಗಾಲದಿಂದ ಇತ್ತ ದಕ್ಷಿಣದ ರಾಜ್ಯಗಳು ಬಸವಳಿದಿದ್ದರೆ, ಉತ್ತರ ಭಾರತದಲ್ಲಿ ವರುಣನ ಆರ್ಭಟಕ್ಕೆ ಜನರು ತತ್ತರಿಸಿಹೋಗು ತ್ತಿದ್ದಾರೆ. ಅಸ್ಸಾಂ, ಬಿಹಾರ, ಉತ್ತರಪ್ರದೇಶ, ಗುಜರಾತ್‌ನಂಥ ರಾಜ್ಯಗಳಲ್ಲಿ ಭಾರೀ ಮಳೆ, ಪ್ರವಾಹವು ಜನಜೀವನವನ್ನು ತತ್ತರಿಸುವಂತೆ ಮಾಡಿದೆ.
ಬಿಹಾರದಲ್ಲಿ ಈಗಾಗಲೇ ವರುಣನ ಅಬ್ಬರವು 250 ಮಂದಿಯನ್ನು ಬಲಿ ಪಡೆದುಕೊಂಡಿದ್ದು, ಸುಮಾರು ಒಂದೂವರೆ ಕೋಟಿಗೂ ಅಧಿಕ ಮಂದಿಯನ್ನು ನಿರ್ವಸಿತರನ್ನಾಗಿಸಿದೆ. ಇನ್ನು ಉತ್ತರಪ್ರದೇಶದಲ್ಲಿ ರವಿವಾರ ಮತ್ತೆ ಪ್ರವಾಹ ಅತಿಯಾದ ಹಿನ್ನೆಲೆಯಲ್ಲಿ ಪ್ರಸಕ್ತ ಮಳೆಗಾಲದಲ್ಲಿ ಮೃತಪಟ್ಟವರ ಸಂಖ್ಯೆ 69ಕ್ಕೇರಿದೆ. ಇಲ್ಲಿನ 24 ಜಿಲ್ಲೆಗಳ 20 ಲಕ್ಷ ಮಂದಿ ಅತಂತ್ರ ಸ್ಥಿತಿಯನ್ನು ಎದುರಿಸುತ್ತಿದ್ದಾರೆ. ನೇಪಾಳದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಕಾರಣ ಉತ್ತರಪ್ರದೇಶದ ನದಿಗಳೆಲ್ಲ ಉಕ್ಕಿ ಹರಿಯುತ್ತಿದ್ದು, 2,523 ಗ್ರಾಮಗಳು ಜಲಾವೃತವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಅಸ್ಸಾಂನಲ್ಲಿ ಭಾನುವಾರ ಮಳೆ ಸಂಬಂಧಿ ಘಟನೆಗಳಿಂದ ಮತ್ತೆ ನಾಲ್ವರು ಮೃತಪಟ್ಟಿದ್ದಾರೆ. ಇಲ್ಲಿ ಪ್ರವಾಹ ಸ್ಥಿತಿ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದರೂ, 15 ಜಿಲ್ಲೆಗಳ 19 ಲಕ್ಷ ಮಂದಿ ಇನ್ನೂ ಸಂಕಷ್ಟದಲ್ಲಿದ್ದಾರೆ. ಇಲ್ಲಿ ಈವರೆಗೆ 67 ಮಂದಿ ಸಾವಿಗೀಡಾಗಿದ್ದಾರೆ.
ವಾಯುಭಾರ ಕುಸಿತ: ಈ ನಡುವೆ ವಾಯುಭಾರ ಕುಸಿತದಿಂದಾಗಿ ಮುಂದಿನ 24 ಗಂಟೆಗಳ ಕಾಲ ಬಿರುಗಾಳಿಯಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
MUST WATCH
ಹೊಸ ಸೇರ್ಪಡೆ
Re-Release: ಈ ವರ್ಷ ರೀ ರಿಲೀಸ್ ಆದ ಬಾಲಿವುಡ್ ಸಿನಿಮಾಗಳ ಬಾಕ್ಸ್ ಆಫೀಸ್ ಗಳಿಕೆ ಎಷ್ಟು?
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
Discipline: ಬದುಕಿನಲ್ಲಿ ಶಿಸ್ತಿರಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.