ಕ್ಯಾರ್ ಅಬ್ಬರಕ್ಕೆ ಹಲವು ರಾಜ್ಯ ತತ್ತರ
Team Udayavani, Oct 26, 2019, 6:00 AM IST
ಹೊಸದಿಲ್ಲಿ: “ಕ್ಯಾರ್’ ಚಂಡಮಾರುತದ ಅಬ್ಬರಕ್ಕೆ ಕರ್ನಾಟಕ ಸಹಿತ ದೇಶದ ಹಲವು ರಾಜ್ಯಗಳು ತತ್ತರಿಸಿವೆ. ಮಹಾರಾಷ್ಟ್ರ, ಗೋವಾ, ಒಡಿಶಾ, ಪಶ್ಚಿಮ ಬಂಗಾಲದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಅರಬಿ ಸಮುದ್ರದಲ್ಲಿ ಉಂಟಾ ಗಿರುವ ಕ್ಯಾರ್ ಚಂಡಮಾರುತದಿಂದ ಮಹಾರಾಷ್ಟ್ರದ ಕರಾವಳಿ ಜಿಲ್ಲೆಗಳಾದ ರತ್ನಗಿರಿ ಮತ್ತು ಸಿಂಧುದುರ್ಗದಲ್ಲಿ ಶನಿವಾರವೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಅನಂತರ ಕ್ರಮೇಣ ಚಂಡ ಮಾರುತವು ಒಮನ್ ಕರಾ ವಳಿಯತ್ತ ಸಂಚ ರಿಸ ಲಿದೆ ಎಂದು ನಿರೀಕ್ಷಿಸಲಾಗಿದೆ.
ಗೋವಾಗೆ ಎಚ್ಚರಿಕೆ
ಗೋವಾದಲ್ಲಿ 3 ದಿನಗಳಿಂದ ಒಂದೇ ಸಮನೆ ಮಳೆಯಾಗುತ್ತಿದ್ದು, ಶನಿವಾರ ಇದೇ ತೀವ್ರತೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಾಂಡೋವಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಮುಂಬಯಿ- ಗೋವಾ ರಾಷ್ಟ್ರೀಯ ಹೆದ್ದಾರಿ ಜಲಾವೃತವಾಗಿದೆ.
ಕರ್ನಾಟಕದಲ್ಲಿ 285 ಸಾವು
ಪ್ರಸಕ್ತ ಮುಂಗಾರು ಅವಧಿ ಯಲ್ಲಿ ಮಳೆ, ಪ್ರವಾಹದಿಂದ ದೇಶಾ ದ್ಯಂತ ಒಟ್ಟು 2,155 ಮಂದಿ ಸಾವಿಗೀಡಾ ಗಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ಮಾಹಿತಿ ನೀಡಿದೆ. ಈ ಪೈಕಿ 285 ಸಾವು ಕರ್ನಾಟಕದಲ್ಲಿ ಸಂಭವಿಸಿವೆ.
ಇಂದು ದ.ಕ., ಉಡುಪಿ ಶಾಲೆಗಳಿಗೆ ರಜೆ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಶನಿವಾರ ನೀಡ ಲಾಗಿದೆ. ದ.ಕ. ಜಿಲ್ಲೆ ಯಲ್ಲಿ ಅಂಗನವಾಡಿಯಿಂದ ಪದವಿ ಪೂರ್ವದವರೆಗೆ, ಉಡುಪಿ ಜಿಲ್ಲೆಯಲ್ಲಿ ಅಂಗನವಾಡಿಯಿಂದ ಪದವಿವರೆಗೆ ರಜೆ ಘೋಷಿಸಲಾಗಿದೆ. ಕೆಲವು ಶಾಲೆಗಳಲ್ಲಿ ನಡೆಯುತ್ತಿರುವ ಪಿ.ಯು.ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ
Bantwal: ಸಾಮಾನ್ಯ ಸೈಕಲನ್ನೇ ಎಲೆಕ್ಟ್ರಿಕ್ ಆಗಿ ಪರಿವರ್ತಿಸಿದ ಬಾಲಕ!
ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು
Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ
Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.