ಮಳೆಗೆ ಮುಂಬಯಿ ಕಂಗಾಲು ; ಕೊಲಾಬಾದಲ್ಲಿ 46 ವರ್ಷಗಳಲ್ಲೇ ದಾಖಲೆ; ಜನರಿಗೆ ತೊಂದರೆ


Team Udayavani, Aug 7, 2020, 8:38 AM IST

ಮಳೆಗೆ ಮುಂಬಯಿ ಕಂಗಾಲು ; ಕೊಲಾಬಾದಲ್ಲಿ 46 ವರ್ಷಗಳಲ್ಲೇ ದಾಖಲೆ; ಜನರಿಗೆ ತೊಂದರೆ

ಮುಂಬಯಿ: ಎಡೆಬಿಡದೆ ಸುರಿಯುತ್ತಿರುವ ಮಹಾಮಳೆ ಮಹಾರಾಷ್ಟ್ರದ ನಿದ್ದೆಗೆಡಿಸಿದೆ. ಕಳೆದ ಕೆಲವು ದಿನಗಳಿಂದೀಚೆಗೆ ಮುಂಬಯಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ. ಮಂಗಳವಾರ ಹಾಗೂ ಬುಧವಾರ ವರುಣನ ಅಬ್ಬರಕ್ಕೆ ಇಡೀ ವಾಣಿಜ್ಯ ನಗರಿಯೇ ತತ್ತರಿಸಿಹೋಗಿದೆ.

ಮುಂಬಯಿನ ಕೊಲಾಬಾದಲ್ಲಿ 46 ವರ್ಷಗಳಲ್ಲೇ ದಾಖಲೆಯ ಮಳೆಯಾಗಿದೆ. ಬುಧವಾರದಿಂದ ಗುರುವಾರ ಬೆಳಗ್ಗಿನವರೆಗೆ 24 ಗಂಟೆಗಳ ಅವಧಿಯಲ್ಲಿ 331.8 ಮಿ.ಮೀ. ಮಳೆಯಾಗಿದ್ದು, ಆಗಸ್ಟ್‌ ತಿಂಗಳಲ್ಲಿ ದಕ್ಷಿಣ ಮುಂಬಯಿ ಪ್ರದೇಶದಲ್ಲಿ ಇಷ್ಟೊಂದು ಮಳೆಯಾಗಿರುವುದು 46 ವರ್ಷಗಳಲ್ಲೇ ಮೊದಲು. ಬುಧವಾರ ಮುಂಬಯಿ, ಥಾಣೆ, ಪಾಲ್ಗರ್‌ ಜಿಲ್ಲೆಗಳಲ್ಲಿ ಬಿರುಗಾಳಿಯಿಂದ ಕೂಡಿದ ಭಾರೀ ಮಳೆಯಾಗಿದ್ದು, ರಸ್ತೆ ಹಾಗೂ ರೈಲು ಸಂಚಾರಗಳೆಲ್ಲ ವ್ಯತ್ಯಯವಾಗಿದ್ದವು. ಮುಂಬಯಿ ಮೆಟ್ರೋಪಾಲಿಟನ್‌ ಪ್ರದೇಶದಲ್ಲಿ ಶುಕ್ರವಾರವೂ ಮಧ್ಯಮ ಪ್ರಮಾಣದಿಂದ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಬುಧವಾರಕ್ಕೆ ಹೋಲಿಸಿದರೆ ಗುರುವಾರ ವರುಣನ ಅಬ್ಬರ ಸ್ವಲ್ಪಮಟ್ಟಿಗೆ ತಗ್ಗಿದೆ. ಹೀಗಾಗಿ, ನಿಧಾನ ವಾಗಿ ರೈಲು ಮತ್ತು ರಸ್ತೆ ಸಾರಿಗೆ ಸೇವೆಗಳು ಆರಂಭವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ದಕ್ಷಿಣ ಮುಂಬಯಿನ ಕೆಲವು ಪ್ರದೇಶಗಳು ಜಲಾವೃತವಾಗಿದ್ದು, ಅಲ್ಲಿನ ಪರಿಸ್ಥಿತಿ ಸುಧಾರಣೆಯಾಗಿಲ್ಲ.

4.33 ಮೀ.ಎತ್ತರದ ಅಲೆ: ಗುರುವಾರ ಸಮುದ್ರದಲ್ಲಿ 4.33 ಮೀಟರ್‌ ಎತ್ತರದ ದೈತ್ಯ ಅಲೆಗಳು ತೀರಕ್ಕೆ ಅಪ್ಪಳಿಸಿವೆ. ಮಳೆಯಿಂದಾಗಿ ಗುರುವಾರವೂ ಮುಂಬಯಿ ಹೈಕೋರ್ಟ್‌ ಕಲಾಪವನ್ನು ಮುಂದೂಡಿದೆ. ರಕ್ಷಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ ಭಾಗಗಳಲ್ಲಿ 16 ಎನ್‌ಡಿಆರ್‌ಎಫ್ ತಂಡವನ್ನು ನಿಯೋಜಿಸಲಾಗಿದೆ.

ಪೊಲೀಸರ ಕಾರ್ಯಕ್ಕೆ ಗೃಹ ಸಚಿವರ ಮೆಚ್ಚುಗೆ
ಪಾಲ್ಗರ್‌ ಜಿಲ್ಲೆಯಲ್ಲಿ ಪ್ರವಾಹದಿಂದಾಗಿ ಸುಮಾರು 4 ಗಂಟೆಗಳ ಕಾಲ ಮರದ ಮೇಲೆ ನಿಂತಿದ್ದ 5 ವರ್ಷದ ಬಾಲಕಿ ಸೇರಿದಂತೆ 22 ಮಂದಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಈ ರಕ್ಷಣಾ ಕಾರ್ಯ ಕೈಗೊಂಡ ಪಾಲ್ಗರ್‌ ಪೊಲೀಸ್‌ ಸೂಪರಿಂಟೆಂಡೆಂಟ್‌ ದತ್ತಾತ್ರೇಯ ಶಿಂಧೆ ಹಾಗೂ ತಂಡದ ಕಾರ್ಯಕ್ಕೆ ಮಹಾರಾಷ್ಟ್ರ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಅಪಾಯದ 4ಮಟ್ಟಕ್ಕೆ ಪಂಚಗಂಗಾ
ಪಶ್ಚಿಮ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ಪಂಚ ಗಂಗಾ ನದಿ ಗುರುವಾರ ಅಪಾಯದ ಮಟ್ಟಕ್ಕೆ ತಲು ಪಿದ್ದು, ನದಿ ತಟದ ಗ್ರಾಮಗಳ ಜನರನ್ನು ಸುರಕ್ಷಿತ ಪ್ರದೇಶ  ಗಳಿಗೆ ಸ್ಥಳಾಂತರಿಸಲಾಗಿದೆ. ಭಾರೀ ಮಳೆ ಯಿಂದಾಗಿ ಸಂಜೆ 4 ಗಂಟೆ ವೇಳೆಗೆ ನದಿಯ ನೀರಿನ ಮಟ್ಟ 43 ಅಡಿಗೇರಿದೆ ಎಂದು ವಿಪತ್ತು ನಿರ್ವಹಣಾ ತಂಡ ಹೇಳಿದೆ. ಇದೇ ವೇಳೆ, ರಾಧಾನಗರಿ ಅಣೆಕಟ್ಟು ಶೇ.95ರಷ್ಟು ಭರ್ತಿಯಾಗಿದೆ. ಜಿಲ್ಲೆಯಲ್ಲಿ 9 ರಾಜ್ಯ ಹೆದ್ದಾರಿಗಳು ಮತ್ತು 25 ಇತರೆ ರಸ್ತೆಗಳಿಗೆ ಹಾನಿಯಾಗಿವೆ ಎಂದು ಲೋಕೋ ಪಯೋಗಿ ಇಲಾಖೆ ತಿಳಿಸಿದೆ.

ಇಡುಕ್ಕಿ, ವಯನಾಡ್‌ಜಿಲ್ಲೆಗಳಿಗೆ ರೆಡ್‌ ಅಲರ್ಟ್‌
ಕೇರಳದಲ್ಲೂ ಭಾರೀ ಮಳೆಯಾಗುತ್ತಿದ್ದು, ಇಡುಕ್ಕಿ ಹಾಗೂ ವಯನಾಡ್‌ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಚಲಿಯಾರ್‌ ನದಿಯು ಅಪಾಯದ ಮಟ್ಟ ಮೀರಿ ಹರಿಯಲಾರಂಭಿಸಿದ್ದು, ನೀಲಂಬೂರ್‌ ಪಟ್ಟಣವು ಭಾಗಶಃ ಮುಳುಗಡೆಯಾಗಿದೆ. ಶುಕ್ರವಾರ ಮಲಪ್ಪುರಂ ಜಿಲ್ಲೆಗೆ ರೆಡ್‌ ಅಲರ್ಟ್‌, ಎರ್ನಾಕುಳಂ, ಇಡುಕ್ಕಿ, ತ್ರಿಶೂರ್‌, ಪಾಲಕ್ಕಾಡ್‌, ಕಾಸರಗೋಡು ಸೇರಿದಂತೆ 9 ಜಿಲ್ಲೆಗಳಿಗೆ ಆರೆಂಟ್‌ ಅಲರ್ಟ್‌ ಘೋಷಿಸ ಲಾಗಿದೆ. ಗಾಳಿ ಸಹಿತ ಮಳೆಯಿಂದಾಗಿ ಕಲ್ಲಿಕೋಟೆ, ಕಣ್ಣೂರು, ಕಾಸರಗೋಡು ಜಿಲ್ಲೆಗಳಲ್ಲಿ ಭಾರೀ ಹಾನಿ ಯಾಗಿದೆ. ಈ ವರ್ಷದ ಮುಂಗಾರಲ್ಲಿ ಮಳೆ, ಭೂಕುಸಿತ, ಮರಗಳು ಧರೆಗುರುಳಿದ ಘಟನೆಗಳಿಂದ ಈವರೆಗೆ ಕೇರಳದಲ್ಲಿ 31 ಮಂದಿ ಸಾವಿಗೀಡಾಗಿದ್ದಾರೆ.

ಮ್ಯಾಂಗ್ರೋವ್‌ಗಳ ನಾಶವೇ ಪ್ರವಾಹಕ್ಕೆ ಕಾರಣ
ಪ್ರತಿ ವರ್ಷ ಮಳೆಗಾಲದಲ್ಲೂ ಮುಂಬಯಿನಲ್ಲಿ ಪ್ರವಾಹ ತಲೆದೋರಲು ಮ್ಯಾಂಗ್ರೋವ್‌ಗಳ ನಾಶ ಹಾಗೂ ಅವ್ಯವಸ್ಥಿತ ನಿರ್ಮಾಣಗಳೇ ಕಾರಣ ಎಂದು ಪರಿಸರ ಹೋರಾಟಗಾರರು ಹಾಗೂ ನಗರ ಯೋಜನಾಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. ಮ್ಯಾಂಗ್ರೋವ್‌ಗಳು ಹೆಚ್ಚುವರಿ ನೀರನ್ನು ಹೀರಿಕೊಳ್ಳುತ್ತವೆ. ಆದರೆ, ಮುಂಬಯಿನಲ್ಲಿ ಮೂಲಸೌಕರ್ಯ ಅಭಿವೃದ್ಧಿ ಹೆಸರಲ್ಲಿ ಅವು ಗಳನ್ನು ನಾಶ ಮಾಡಲಾಗಿದೆ. ಮ್ಯಾಂಗ್ರೋವ್‌ಗಳಿದ್ದ ಪ್ರದೇಶಗಳನ್ನು ಅತಿಕ್ರಮಿಸಿಕೊಳ್ಳಲಾಗಿದ್ದು, ಈಗ ಮಳೆ ನೀರು ಸಮುದ್ರಕ್ಕೆ ಹರಿದು ಹೋಗಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ಮ್ಯಾಂಗ್ರೋವ್‌ಗಳಿಗೆ ಪ್ರವಾಹದ ನೀರನ್ನು ಹೀರಿಕೊಳ್ಳುವ ಸಾಮರ್ಥ್ಯವೂ ತಗ್ಗಿದೆ. ಈ ಎಲ್ಲ ಕಾರಣಗಳಿಂದಾಗಿ ಪ್ರವಾಹದ ಸಮಸ್ಯೆ ಹೆಚ್ಚಳವಾಗಿದೆ ಎಂದು ಪರಿಸರ ಹೋರಾಟಗಾರರು ಹೇಳಿದ್ದಾರೆ.

ವೈರಲ್‌ ಆದ ತೆಂಗಿನ ಮರದ ಓಲಾಟ!
ಮುಂಬಯಿನಲ್ಲಿ ಗಂಟೆಗೆ 107 ಕಿ.ಮೀ. ವೇಗದಲ್ಲಿ ಬೀಸಿದ ಗಾಳಿ, ಧಾರಾಕಾರ ಮಳೆ, ಸಿಡಿಲಿನ ಅಬ್ಬರವು ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆಯ ವಿಷಯವಾಗಿತ್ತು. ಗಾಳಿಯ ರಭಸಕ್ಕೆ ತೆಂಗಿನ ಮರ ಅತ್ತಿಂದಿತ್ತ ಓಲಾಡುತ್ತಿದ್ದ ವಿಡಿಯೋ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ಉದ್ಯಮಿ ಆನಂದ್‌ ಮಹೀಂದ್ರಾ ಅವರೂ ಟ್ವಿಟರ್‌ನಲ್ಲಿ ಈ ವಿಡಿಯೋ ಅಪ್‌ಲೋಡ್‌ ಮಾಡಿದ್ದು, ಮುಂಬಯಿ ಮಳೆಯ ಎಲ್ಲ ವೀಡಿಯೋಗಳ ಪೈಕಿ ಇದು ಕೌತುಕ ಮೂಡಿಸಿದ ದೃಶ್ಯ ಎಂದು ಬರೆದುಕೊಂಡಿದ್ದಾರೆ. ಇದಲ್ಲದೆ, ತಾತ್ಕಾಲಿಕ ತೆಪ್ಪವೊಂದರಲ್ಲಿ ಇಬ್ಬರು ಮಲಗಿಕೊಂಡು ತೆರಳುತ್ತಿದ್ದ ವಿಡಿಯೋ, ಪ್ರವಾಹದಲ್ಲಿ ಅತಂತ್ರವಾಗಿದ್ದ ಬೆಕ್ಕನ್ನು ತನ್ನ ಬೈಕಿನಲ್ಲಿ ಕರೆದೊಯ್ಯುತ್ತಿದ್ದ ವ್ಯಕ್ತಿಯ ವಿಡಿಯೋ ಸೇರಿದಂತೆ ಅನೇಕ ದೃಶ್ಯಗಳು ವೈರಲ್‌ ಆಗಿವೆ.

ಟಾಪ್ ನ್ಯೂಸ್

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

1-wewqe

Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

mumbai1

ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬಂದಿ

iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Wadi-Pro

Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ವಾಡಿ ಬಂದ್ ನಡೆಸಿ ಪ್ರತಿಭಟನೆ

1-bharat

Bharatanatyam; ರಾಜ್ಯ ಮಟ್ಟದ ಶಿಷ್ಯವೇತನಕ್ಕೆ ಅದಿತಿ ಜಿ.ಮಂಡೀಚ,ಸ್ವಾತಿ ಆಯ್ಕೆ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.