Heavy Rain: ಮುಂಬೈನಲ್ಲಿ ದಾಖಲೆಯ ಮಳೆ… ತಗ್ಗು ಪ್ರದೇಶಗಳು ಜಲಾವೃತ, ಜನಜೀವನ ಅಸ್ತವ್ಯಸ್ತ
Team Udayavani, Jul 8, 2024, 9:36 AM IST
ಮುಂಬೈ: ವಾಣಿಜ್ಯ ನಗರಿ ಮುಂಬೈ ಯಲ್ಲಿ ದಾಖಲೆಯ ಮಳೆಯಾಗುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ.
ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ರೈಲು ಹಳಿಗಳು ಜಲಾವೃತಗೊಂಡಿದ್ದು ಪರಿಣಾಮ ಹಲವಾರು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಅಲ್ಲದೆ ಪ್ರಮುಖ ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತಾಗಿದೆ.
ರೈಲು ಸಂಚಾರಕ್ಕೆ ಎಲ್ಲೆಲ್ಲಿ ಪರಿಣಾಮ ಬೀರಿದೆ:
– ಭಾಂಡೂಪ್ ನಿಲ್ದಾಣದಲ್ಲಿ ರೈಲು ಹಳಿ ಜಲಾವೃತವಾಗಿದೆ. ಇದರಿಂದ ಸೆಂಟ್ರಲ್ ರೈಲ್ವೇ ಸಂಚಾರಕ್ಕೆ ತೊಂದರೆಯಾಗಿದೆ.
– ಕುರ್ಲಾ-ಮಾನ್‌ಖುರ್ದ್ ನಿಲ್ದಾಣದ ರೈಲ್ವೆ ಹಳಿ ಜಲಾವೃತಗೊಂಡಿದ್ದು ಪರಿಣಾಮ ಹಾರ್ಬರ್ ಮಾರ್ಗದಲ್ಲಿ ಸಂಚರಿಸುವ ಸ್ಥಳೀಯ ರೈಲುಗಳನ್ನು ರದ್ದುಗೊಳಿಸಲಾಗಿದೆ.
– ವಡಾಲಾದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನೀರು ನಿಂತ ನಿಟ್ಟಿನಲ್ಲಿ ಗೋರೆಗಾಂವ್ – ಸಿಎಸ್‌ಎಂಟಿ ಲೋಕಲ್ ರೈಲನ್ನು ಮುಂದಿನ ಸೂಚನೆ ಬರುವವರೆಗೆ ಸಂಪೂರ್ಣವಾಗಿ ಮುಚ್ಚಲಾಗಿದೆ.
ಅಂಧೇರಿ, ಕುರ್ಲಾ, ಭಾಂಡೂಪ್, ಕಿಂಗ್ಸ್ ಸರ್ಕಲ್, ವಿಲೆ ಪಾರ್ಲೆ ಮತ್ತು ದಾದರ್ ಸೇರಿದಂತೆ ಹಲವಾರು ಪ್ರದೇಶಗಲು ಮಳೆಯ ಹೊಡೆತಕ್ಕೆ ಸಿಲುಕಿದೆ, ಅಲ್ಲದೆ ಪ್ರಮುಖ ರಸ್ತೆಗಳು ನೀರಿನಿಂದ ಆವೃತಗೊಂಡಿದ್ದರಿಂದ ವಾಹನ ಸವಾರರು ತೊಂದರೆ ಅನುಭವಿಸಿದ್ದಾರೆ,
ಭಾನುವಾರ ಮಧ್ಯರಾತ್ರಿಯಿಂದ ಇಂದು ಬೆಳಗ್ಗೆ 7 ಗಂಟೆಯವರೆಗಿನ ಆರು ಗಂಟೆಗಳ ಅವಧಿಯಲ್ಲಿ ವಿವಿಧೆಡೆ 300 ಮಿಲಿಮೀಟರ್‌ಗೂ ಹೆಚ್ಚು ಮಳೆ ದಾಖಲಾಗಿದೆ. ಭಾರೀ ಮಳೆಯಿಂದಾಗಿ ಕೆಲವು ತಗ್ಗು ಪ್ರದೇಶಗಳಲ್ಲಿ ಜಲಾವೃತವಾಗಿದೆ ಮತ್ತು ಉಪನಗರ ರೈಲು ಸೇವೆಗಳು ಸಹ ಅಸ್ತವ್ಯಸ್ತವಾಗಿವೆ” ಎಂದು ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ತಿಳಿಸಿದೆ.
ಭಾರೀ ಮಳೆಯ ಎಚ್ಚರಿಕೆ:
ಮುಂದಿನ 3-4 ದಿನಗಳಲ್ಲಿ ಮುಂಬೈ ಸೇರಿದಂತೆ ಇಡೀ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ 8 ರಿಂದ ಜುಲೈ 10 ರವರೆಗೆ ಮಧ್ಯ ಮಹಾರಾಷ್ಟ್ರ ಮತ್ತು ಮರಾಠವಾಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು
#WATCH | Maharashtra: Heavy rains in Mumbai led to waterlogging in the railway tracks of Vidyavihar Railway Station. pic.twitter.com/tRVQa9cwgn
— ANI (@ANI) July 8, 2024
Half Mumbai is water logged by only one night of rain. @mybmc please take some serious action in this matter, at least start the pumps. The issue is very serious, water logging in vile Parle West, from SV Road to Mithibai.@mybmcwardKW @richapintoi @AmeetSatam #mumbairains pic.twitter.com/rG0VzkQMXE
— Anurag Ghosh (@AnuragG36973328) July 8, 2024
Kandivali East dattani park Mahindra highway Mein Barish Se Bhara Pani@mybmc#barish #rain #kandivali #rainyday #mumbai #kurla #mumbairain #MumbaiRains pic.twitter.com/e8n7bbRHfi
— MUMBAI TV (@tv_mumbai) July 8, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್‌ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.