ದೇಶದ ಹಲವೆಡೆ ವರ್ಷಾಘಾತ; ಕಾರ್ಯಾಚರಣೆಗೆ ಐಎಎಫ್ ಸಿದ್ಧ
Team Udayavani, Jul 22, 2020, 8:54 AM IST
ಹರಿದ್ವಾರದಲ್ಲಿ ಮಂಗಳವಾರ ಸಿಡಿಲಿನ ರಭಸಕ್ಕೆ "ಹರಿ ಕಿ ಪೈಡಿ'ಯ ಗೋಡೆ ಕುಸಿದು ಭಾರೀ ಪ್ರಮಾಣದಲ್ಲಿ ಹಾನಿ ಉಂಟಾಗಿದೆ.
ಹೊಸದಿಲ್ಲಿ: ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಪರಿಸ್ಥಿತಿ ವಿಕೋಪಕ್ಕೆ ತೆರಳಿದ್ದು, ಜನ ಭಯಭೀತರಾಗಿದ್ದಾರೆ. ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಲ, ಉತ್ತರ ಬಿಹಾರ ಸೇರಿದಂತೆ ಹಲವು ರಾಜ್ಯ ಗಳಲ್ಲಿ ಬುಧವಾರವೂ ಮಳೆ ಮುಂದುವರಿಯುವುದಾಗಿ ಹೇಳಿರುವ ಹವಾಮಾನ ಇಲಾಖೆ, ರೆಡ್ ಅಲರ್ಟ್ ಘೋಷಿಸಿದೆ. ಈಗಾಗಲೇ ಪ್ರವಾಹಕ್ಕೆ ತುತ್ತಾಗಿರುವ ರಾಜ್ಯ ಗಳಿಗೆ ಇದು ಇನ್ನಷ್ಟು ಆತಂಕ ಮೂಡಿಸಿದೆ. ಇದೇ ವೇಳೆ, ಅಸ್ಸಾಂನಲ್ಲಿ ರಕ್ಷಣೆ ಹಾಗೂ ಪರಿಹಾರ ಕಾರ್ಯಕ್ಕೆ ವಾಯುಪಡೆ ಸಜ್ಜಾಗಿದೆ.
ಪೂರ್ವ ಏರ್ ಕಮಾಂಡ್ ಪ್ರವಾಹ ಸ್ಥಿತಿಯನ್ನು ಗಮನಿಸುತ್ತಿದ್ದು, ಎಂಐ 17, ಸುಧಾರಿತ ಲಘು ಹೆಲಿಕಾಪ್ಟರ್ ಸೇರಿದಂತೆ ರಕ್ಷಣಾ ಕಾರ್ಯಾಚರಣೆಗೆ ಅಗತ್ಯವಾದವು ಗಳನ್ನು ಸನ್ನದ್ಧವಾಗಿ ಇರಿಸಲಾಗಿದೆ ಎಂದು ವಾಯುಪಡೆ ಮಂಗಳವಾರ ತಿಳಿಸಿದೆ. ಈಗಾಗಲೇ ಅಸ್ಸಾಂನ 24 ಜಿಲ್ಲೆಗಳಲ್ಲಿ ಪ್ರವಾಹವು ತಲೆದೋರಿದ್ದು, 24 ಲಕ್ಷ ಮಂದಿ ಅತಂತ್ರರಾಗಿದ್ದಾರೆ. 2,254 ಗ್ರಾಮಗಳು ಜಲಾವೃತಗೊಂಡಿವೆ. ಈ ನಡುವೆ, ಅಸ್ಸಾಂನ ಪರಿಸ್ಥಿತಿಯನ್ನು ಗಮನಿಸಿರುವ ವಿಶ್ವಸಂಸ್ಥೆ, ಅಗತ್ಯವಿದ್ದರೆ ಭಾರತ ಸರಕಾರಕ್ಕೆ ನೆರವು ನೀಡುವುದಾಗಿ ಘೋಷಿಸಿದೆ. ಮೇಘಾಲಯ ದಲ್ಲೂ ಪ್ರವಾಹ ಹೆಚ್ಚಾಗುತ್ತಿದ್ದು, ಸಿಎಂ ಕೊನ್ರಾಡ್ ಸಂಗ್ಮಾ ಅವರೊಂದಿಗೆ ಮಂಗಳ ವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಮೂಲಕ ಮಾತುಕತೆ ನಡೆಸಿ, ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.
ಸಾವಿನ ಸಂಖ್ಯೆ 5ಕ್ಕೇರಿಕೆ: ಉತ್ತರಾಖಂಡದ ಪಿತ್ತೋರ್‌ಗಢ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ಮೇಘಸ್ಫೋಟದಲ್ಲಿ ಮೃತಪಟ್ಟ ವರ ಸಂಖ್ಯೆ ಮಂಗಳವಾರ 5ಕ್ಕೇರಿದೆ. ಮನೆ ಗಳ ಅವಶೇಷಗಳಡಿ ಸಿಲುಕಿದ್ದ ಇಬ್ಬರ ಮೃತ ದೇಹಗಳು ಪತ್ತೆಯಾಗಿವೆ. ಇನ್ನೂ 9 ಮಂದಿ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಧಾರಾಕಾರ ಮಳೆ: ರಾಷ್ಟ್ರ ರಾಜಧಾನಿ ದಿಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಂಗಳವಾರವೂ ಧಾರಾಕಾರ ಮಳೆಯಾಗಿದ್ದು, ತಗ್ಗುಪ್ರದೇಶಗಳೆಲ್ಲ ಜಲಾವೃತವಾಗಿವೆ. ರಸ್ತೆಗಳು ಮುಳುಗಡೆಯಾದ ಕಾರಣ ಸಂಚಾರಕ್ಕೆ ಅಡ್ಡಿಯಾಗಿ, ವಾಹನ ಸವಾರರು ಪರದಾಡಿದ್ದಾರೆ. ಬುಧವಾರವೂ ಇಲ್ಲಿ ಭಾರೀ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಗ್ರಾಮ ಜಲಾವೃತ: ಕೇರಳದ ಎರ್ನಾಕುಳಂ ಜಿಲ್ಲೆಯ ಕುಟ್ಟಂಪುಳ ಗ್ರಾಮವು ಮಳೆಯಿಂದಾಗಿ ಜಲಾವೃತಗೊಂಡಿದೆ. ಸಣ್ಣಪುಟ್ಟ ತೊರೆ, ಕಾಲುವೆಗಳು ತುಂಬಿ ಹರಿದು, ಅಕ್ಕಪಕ್ಕದ ಮನೆಗಳಿಗೆ ನೀರು ನುಗ್ಗಿವೆ. ಇಲ್ಲಿ ಸಿಲುಕಿದ್ದ ಅನೇಕರನ್ನು ಅನಂತರ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಯಿತು.
ಗೋಡೆ ಕುಸಿತ: ಉತ್ತರಾಖಂಡದ ಹರಿದ್ವಾರ ದಲ್ಲಿ ಭಾರೀ ಸಿಡಿಲು ಬಡಿದ ಪರಿಣಾಮ, ಹರಿ ಕಿ ಪೌರಿಯಲ್ಲಿ ಗೋಡೆ ಕುಸಿದು ಬಿದ್ದಿದೆ. ಬ್ರಹ್ಮಕುಂಡ್‌ನಲ್ಲಿ ಸಿಡಿಲು ಬಡಿದಾಗ ಅಲ್ಲೇ ಇದ್ದ ಟ್ರಾನ್ಸ್‌ಫಾರ್ಮರ್‌ಗೆ ಬೆಂಕಿ ಹೊತ್ತಿ ಕೊಂಡಿತು ಹಾಗೂ ಗೋಡೆ ಕುಸಿದುಬಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇದೇ ವೇಳೆ, ಜಮ್ಮು ಮತ್ತು ಕಾಶ್ಮೀರದ ಪೂಂಛ… ಜಿಲ್ಲೆಯಲ್ಲೂ ಸಿಡಿಲು ಬಡಿದು ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಗಳವಾರ ನಡೆದಿದೆ.
ಅಸ್ಸಾಂನಲ್ಲಿ 24 ಲಕ್ಷ ಮಂದಿಗೆ ಪ್ರವಾಹದಿಂದ ತೊಂದರೆ
ಮೇಘಾಲಯದಲ್ಲೂ ಮಳೆ; ಕೇಂದ್ರದಿಂದ ನೆರವಿನ ಭರವಸೆ
ಉತ್ತರಾಖಂಡದಲ್ಲಿ ಮಳೆಗೆ ಜೀವ ಕಳೆದುಕೊಂಡವರ ಸಂಖ್ಯೆ ಐದಕ್ಕೆ ಏರಿಕೆ; 9 ಮಂದಿ ನಾಪತ್ತೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.