ಕಣಿವೆ ರಾಜ್ಯದಲ್ಲಿ ಪ್ರವಾಹ
Team Udayavani, Jul 1, 2018, 6:00 AM IST
ಶ್ರೀನಗರ: ಕಾಶ್ಮೀರದಲ್ಲಿ ಕಳೆದ 3 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಝೇಲಂ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ದಕ್ಷಿಣ ಹಾಗೂ ಕೇಂದ್ರ ಕಾಶ್ಮೀರದಲ್ಲಿ ಪ್ರವಾಹ ಉಂಟಾಗಿದೆ. ಇನ್ನೂ ಕೆಲ ದಿನ ಮಳೆ ಮುಂದುವರಿ ಯಲಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ನಾಗರಿಕರಿಗೆ ಸೂಚಿಸಲಾಗಿದೆ.
ದಕ್ಷಿಣ ಕಾಶ್ಮೀರದ ಸಂಗಮ್ನಲ್ಲಿ ಝೇಲಂ ನದಿಯ ನೀರಿನ ಮಟ್ಟ 21 ಅಡಿಗಿಂತ ಹೆಚ್ಚಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗತೊಡಗಿದೆ. ಹೀಗಾಗಿ, ಹಲವು ಗ್ರಾಮಸ್ಥರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ. ಜತೆಗೆ, ಶಾಲೆ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಇದೇ ವೇಳೆ, ಜಮ್ಮುವಿನ ವಿವಿಧ ಜಿಲ್ಲೆಗಳಲ್ಲಿ ಮಳೆ ಸಂಬಂಧಿ ಘಟನೆಗಳಿಗೆ ಒಬ್ಬ ಮಹಿಳೆ ಸೇರಿ ಮೂವರು ಬಲಿಯಾಗಿದ್ದಾರೆ. 12ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ.
ಅಮರನಾಥ ಯಾತ್ರೆ ಸ್ಥಗಿತ: ವರುಣನ ಆರ್ಭಟ ಹಿನ್ನೆಲೆಯಲ್ಲಿ ಎರಡನೇ ಬಾರಿಗೆ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಎಲ್ಲ ಯಾತ್ರಾರ್ಥಿಗಳನ್ನು ಎರಡು ಬೇಸ್ಕ್ಯಾಂಪ್ಗ್ಳಿಗೆ ಕಳುಹಿಸಲಾಗಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
HIGH COURT: ಬಿಎಸ್ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್
BJP: ಅಶಿಸ್ತಿನ ವಿರುದ್ಧ ಹೈಕಮಾಂಡ್ ಕ್ರಮ ಕೈಗೊಳ್ಳಲಿ: ಡಿವಿಎಸ್
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.