ಶಬರಿಮಲೆಯಲ್ಲಿ ಕಿಕ್ಕಿರಿದು ಸೇರಿದ ಭಕ್ತರು ; ಮಳೆ ನಡುವೆಯೂ ಮೇರೆ ಮೀರಿದ ಭಕ್ತಿ
Team Udayavani, Nov 18, 2019, 6:21 AM IST
ಶಬರಿಮಲೆ: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಯಾತ್ರೆಯ ಎರಡನೇ ದಿನವಾಗಿರುವ ರವಿವಾರ ದೇಶದ ಎಲ್ಲೆಡೆಯಿಂದ ಆಗಮಿಸಿದ್ದ ಭಕ್ತರು ಕಿಕ್ಕಿರಿದು ಸೇರಿದ್ದರು. ಮುಖ್ಯ ಅರ್ಚಕ ಎ.ಕೆ. ಸುಧೀರ್ ನಂಬೂದಿರಿ ಬೆಳಗ್ಗೆ 3 ಗಂಟೆಗೆ ದೇಗುಲದ ಬಾಗಿಲು ತೆರೆದು ದರ್ಶನಕ್ಕೆ ಅವಕಾಶ ಮಾಡಿಕೊಟ್ಟರು. ಈ ಸಂದರ್ಭ ದಲ್ಲಿ ತುಪ್ಪದ ಅಭಿಷೇಕ (ನೈಯ್ಯಭಿಷೇಕಂ), ಮಹಾ ಗಣಪತಿ ಹೋಮ ನಡೆಸಲಾಯಿತು. ಕೇರಳ ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್, ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಅಧ್ಯಕ್ಷ ಎನ್.ವಾಸು ಸೇರಿದಂತೆ ಪ್ರಮುಖರಿದ್ದರು.
ತಡೆಯಾಜ್ಞೆ ರೀತಿಯ ವ್ಯವಸ್ಥೆ ಇದೆ
ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ತಡೆಯಾಜ್ಞೆ ರೀತಿಯ ವ್ಯವಸ್ಥೆ ಇದೆ ಎಂದು ಕೇರಳ ಕಾನೂನು ಸಚಿವ ಎ.ಕೆ. ಬಾಲನ್ ಅವರು ತಿರುವನಂತಪುರದಲ್ಲಿ ತಿಳಿಸಿದ್ದಾರೆ. ಸದ್ಯ ಈ ಪ್ರಕರಣದಲ್ಲಿ ಕೋರ್ಟ್ ಆದೇಶ ಏನಿದೆಯೋ ಅದನ್ನು ಪಾಲನೆ ಮಾಡು ವುದು ಮಾತ್ರ ಸರಕಾರದ ಕರ್ತವ್ಯವಾಗಿದೆ.
ನ. 14ರಂದು ಸುಪ್ರೀಂಕೋರ್ಟ್ ನೀಡಿದ ತೀರ್ಪಿನಲ್ಲಿ ಹಿಂದಿನ ಆದೇಶಕ್ಕೆ ತಡೆಯಾಜ್ಞೆ ನೀಡಿದೆಯೋ ಇಲ್ಲವೋ ಎನ್ನುವುದು ಪ್ರಶ್ನೆ. ನಿಜವಾಗಿ ಹೇಳುವುದಿದ್ದರೆ ತಡೆಯಾಜ್ಞೆ ಇಲ್ಲ. ಆದರೆ ತಡೆಯಾಜ್ಞೆ ಇರುವಂಥ ಸ್ಥಿತಿ ಇದೆ’ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ದೇಗುಲ ಪ್ರವೇಶಕ್ಕೆ ಅವಕಾಶ ಸಿಗದೆ ಇದ್ದುದಕ್ಕೆ ಆಂಧ್ರಪ್ರದೇಶದ ಮಹಿಳೆ ನಿರಾಸೆ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway; 2 ವರ್ಷದಲ್ಲಿ 50 ಅಮೃತ್ ಭಾರತ ರೈಲು ಉತ್ಪಾದನೆ: ಅಶ್ವಿನಿ ವೈಷ್ಣವ್
Cardiac arrest: ಗುಜರಾತ್ ಶಾಲೆಯಲ್ಲಿ 3ನೇ ತರಗತಿ ವಿದ್ಯಾರ್ಥಿನಿ ಸಾ*ವು
Chhattisgarh: ನಕ್ಸಲರು ಇಟ್ಟಿದ್ದ ಐಇಡಿ ಸ್ಫೋ*ಟ, ವ್ಯಕ್ತಿ ಸಾ*ವು
Industrial production ಕಳೆದ ನವೆಂಬರ್‌ನಲ್ಲಿ ಹೆಚ್ಚು: ಕೇಂದ್ರ ಸರ್ಕಾರ
Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!
MUST WATCH
ಹೊಸ ಸೇರ್ಪಡೆ
Elon Musk ಮಾನಸಿಕ ಸ್ಥಿತಿ ಸರಿಯಿಲ್ಲ: ಲೇಖಕ ಅಬ್ರಾಮ್‌ಸನ್
Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್ ಸ್ಥಾವರಗಳಿಗೆ ನೈಸರ್ಗಿಕ ಅನಿಲ
Bantwal: ಬೋಳಂತೂರಿನ ದರೋಡೆ ಪ್ರಕರಣ: ವಾರ ಕಳೆದರೂ ಸಿಗದ ಮಹತ್ವದ ಸುಳಿವು
National Highway ಕಾಮಗಾರಿ ಪರಿಶೀಲನೆ: ಮಾರ್ಚ್ ಅಂತ್ಯಕ್ಕೆ ಶೇ. 95 ಕಾಮಗಾರಿ ಪೂರ್ಣ: ಡಿಸಿ
Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.