ಜಾರ್ಖಂಡ್ ನಲ್ಲಿ ಜೆಎಂಎಂ, ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ; ಹೇಮಂತ್ ಗೆ ಸಿಎಂ ಪಟ್ಟ
ಕಾಂಗ್ರೆಸ್ ಮತ್ತು ಆರ್ ಜೆಡಿ 46 ಕ್ಷೇತ್ರಗಳಲ್ಲಿ ವಿಜಯ ಗಳಿಸಿದೆ. ಬಿಜೆಪಿಗೆ ಈ ಬಾರಿ 12 ಸ್ಥಾನ ನಷ್ಟ
Team Udayavani, Dec 23, 2019, 6:48 PM IST
ರಾಂಚಿ:ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜಾರ್ಖಂಡ್ ಮುಕ್ತಿ ಮೋರ್ಚಾ, ಕಾಂಗ್ರೆಸ್ ಹಾಗೂ ಆರ್ ಜೆಡಿ ಮೈತ್ರಿಕೂಟ ಭರ್ಜರಿ ಬಹುಮತದೊಂದಿಗೆ ಸರ್ಕಾರ ರಚಿಸಲಿದ್ದು, ಆಡಳಿತಾರೂಢ ಬಿಜೆಪಿಯ ಎರಡನೇ ಬಾರಿ ಗದ್ದುಗೆ ಏರುವ ಕನಸು ಭಗ್ನಗೊಂಡಂತಾಗಿದೆ.
ಈ ಬಾರಿಯೂ ಜಾರ್ಖಂಡ್ ನಲ್ಲಿ ಮತ್ತೆ ಸರ್ಕಾರ ರಚಿಸುವುದಾಗಿ ಬಿಜೆಪಿ ವಿಶ್ವಾಸವ್ಯಕ್ತಪಡಿಸಿತ್ತು. ಅಲ್ಲದೇ ಈ ಫಲಿತಾಂಶ ತನಗೆ ಆಘಾತಕಾರಿ ಎಂದು ನಿರ್ಗಮಿತ ಮುಖ್ಯಮಂತ್ರಿ ರಘಬರ್ ದಾಸ್ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಜೆಎಂಎಂ ಕಾರ್ಯಕಾರಿ ಅಧ್ಯಕ್ಷ ಹೇಮಂತ್ ಸೋರೆನ್ (44ವರ್ಷ), ಜಾರ್ಖಂಡ್ ನ ನೂತನ ಮುಖ್ಯಮಂತ್ರಿಯಾಗಿ ಶೀಘ್ರವೇ ಪ್ರಮಾಣವಚನ ಸ್ವೀಕರಿಸುವುದಾಗಿ ತಿಳಿಸಿದ್ದು, ಜಾರ್ಖಂಡ್ ನಲ್ಲಿ ಹೊಸ ಶಖೆ ಆರಂವಾಗಲಿದೆ. ಅಲ್ಲದೇ ಜನರ ಭರವಸೆ, ನಿರೀಕ್ಷೆ ಈಡೇರಿಸುವುದಾಗಿ ತಿಳಿಸಿದರು.
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಜೆಎಂಎಂ ಮೈತ್ರಿಕೂಟಕ್ಕೆ ಮತದಾರರು ಭರ್ಜರಿ ಬಹುಮತ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿ ಕುರಿತು ಮೈತ್ರಿಪಕ್ಷಗಳ ಜತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ 81 ಸ್ಥಾನಗಳ ಜಾರ್ಖಂಡ್ ವಿಧಾನಸಭೆಯಲ್ಲಿ ಬಿಜೆಪಿ 37 ಸ್ಥಾನ, ಎಜೆಎಸ್ ಯು 5 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅಧಿಕಾರದ ಗದ್ದುಗೆ ಏರಿತ್ತು. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಎಜೆಎಸ್ ಯು ಪ್ರತ್ಯೇಕವಾಗಿ ಸ್ಪರ್ಧಿಸಿದ್ದವು.
ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ 25 ಸ್ಥಾನಗಳಲ್ಲಿ ಜಯ ಸಾಧಿಸಿದ್ದು, ಜೆಎಂಎಂ, ಕಾಂಗ್ರೆಸ್ ಮತ್ತು ಆರ್ ಜೆಡಿ 46 ಕ್ಷೇತ್ರಗಳಲ್ಲಿ ವಿಜಯ ಗಳಿಸಿದೆ. ಬಿಜೆಪಿಗೆ ಈ ಬಾರಿ 12 ಸ್ಥಾನ ನಷ್ಟವಾಗಿದ್ದು, ಜೆಎಂಎಂ ಹಾಗೂ ಕಾಂಗ್ರೆಸ್ ಮೈತ್ರಿಗೆ 21 ಸ್ಥಾನಗಳು ಲಾಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.