Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

Team Udayavani, Jan 10, 2025, 2:58 PM IST

Henley Passport Index: Singapore tops: How strong is India’s passport?

ಮುಂಬೈ: ಹೆನ್ಲಿ ಪಾಸ್‌ಪೋರ್ಟ್ ಇಂಡೆಕ್ಸ್‌ (Henley Passport Index) ಇದೀಗ ವಿಶ್ವದ ಎಲ್ಲಾ ಪಾಸ್‌ಪೋರ್ಟ್‌ ಗಳ ಸದೃಢತೆಯ ಬಗ್ಗೆ ವರದಿ ಮಾಡಿದೆ. ಇದರ ಪ್ರಕಾರ ಭಾರತವು ಈ ಪಟ್ಟಿಯಲ್ಲಿ ಐದು ಸ್ಥಾನ ಕೆಳಕ್ಕೆ ಜಾರಿದ್ದು, ಸದ್ಯ 85ನೇ ಸ್ಥಾನದಲ್ಲಿದೆ.

ಒಂದು ದೇಶದ ಪಾಸ್‌ಪೋರ್ಟ್‌ನ ಬಲವು ಆ ದೇಶದ ಪಾಸ್‌ಪೋರ್ಟ್ ಹೊಂದಿರುವವರಿಗೆ ಎಷ್ಟು ದೇಶಗಳು ವೀಸಾ-ಮುಕ್ತ ಪ್ರವೇಶವನ್ನು ಅನುಮತಿಸುತ್ತವೆ ಎನ್ನುವುದರ ಮೇಲೆ ನಿರ್ಧಾರವಾಗುತ್ತದೆ.

ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕದಲ್ಲಿ ಭಾರತವು ಈಕ್ವಟೋರಿಯಲ್ ಜಿನಿಯಾ ಮತ್ತು ನೈಜೀರಿಯಾದೊಂದಿಗೆ 85 ನೇ ಸ್ಥಾನವನ್ನು ಹಂಚಿಕೊಂಡಿದೆ. ಇತರ ಎರಡು ದೇಶಗಳಂತೆ ಭಾರತೀಯ ಪಾಸ್‌ಪೋರ್ಟ್ ಹೊಂದಿರುವವರು 57 ದೇಶಗಳಿಗೆ ವೀಸಾ-ಮುಕ್ತ ಪ್ರವೇಶವನ್ನು ಪಡೆಯುತ್ತಾರೆ.

ಸಿಂಗಾಪುರದ ಪಾಸ್‌ಪೋರ್ಟ್ ಸೂಚ್ಯಂಕದಲ್ಲಿ ಅಗ್ರಸ್ಥಾನದಲ್ಲಿ ಹೊರಹೊಮ್ಮಿದ್ದು, ಸಿಂಗಾಪುರದವರು 195 ಸ್ಥಳಗಳಿಗೆ ವೀಸಾ-ಮುಕ್ತ ಪ್ರವೇಶವನ್ನು ಪಡೆದಿದ್ದಾರೆ.

ಎರಡನೇ ಸ್ಥಾನದಲ್ಲಿ ಜಪಾನ್‌ ಪಾಸ್‌ಪೋರ್ಟ್ ಇದ್ದು, ಜಪಾನ್‌ ಪಾಸ್‌ಪೋರ್ಟ್ ಹೊಂದಿರುವವರು 193 ದೇಶಗಳಿಗೆ ವೀಸಾ ಇಲ್ಲದೆ ಪ್ರವೇಶ ಪಡೆಯುತ್ತಾರೆ.

ಮೂರನೇ ಸ್ಥಾನದಲ್ಲಿ ಆರು ದೇಶಗಳಿವೆ. ಫಿನ್‌ ಲ್ಯಾಂಡ್‌, ಫ್ರಾನ್ಸ್‌, ಜರ್ಮನಿ, ಇಟಲಿ, ದ.ಕೊರಿಯಾ ಮತ್ತು ಇಟಲಿ ದೇಶಗಳು ಮೂರನೇ ಸ್ಥಾನದಲ್ಲಿದೆ. ಈ ದೇಶಗಳ ಪಾಸ್‌ಪೋರ್ಟ್ ಹೊಂದಿರುವವರು 192 ದೇಶಗಳಿಗೆ ವೀಸಾಮುಕ್ತ ಪ್ರವೇಶ ಪಡೆಯುತ್ತಾರೆ.

ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕವು 199 ದೇಶಗಳ ಪಟ್ಟಿ ಮಾಡುತ್ತದೆ. ಇದು ಅಂತಾರಾಷ್ಟ್ರೀಯ ವಾಯು ಸಾರಿಗೆ ಸಂಘದಿಂದ (IATA) ವಿಶೇಷ ಡೇಟಾವನ್ನು ಬಳಸುತ್ತದೆ, ಐಎಟಿಎ ಅತಿದೊಡ್ಡ, ಅತ್ಯಂತ ನಿಖರವಾದ ಪ್ರಯಾಣ ಮಾಹಿತಿ ಡೇಟಾಬೇಸ್ ಆಗಿದೆ.

ಹೆನ್ಲಿ ಪಾಸ್‌ಪೋರ್ಟ್ ಸೂಚ್ಯಂಕದಲ್ಲಿ, 2023 ರಲ್ಲಿ 84 ನೇ ಸ್ಥಾನದಲ್ಲಿದ್ದ ಭಾರತದ ಶ್ರೇಯಾಂಕವು 2024 ರಲ್ಲಿ 80 ನೇ ಸ್ಥಾನಕ್ಕೆ ಏರಿತು, ಆದರೆ 2025 ರಲ್ಲಿ ಅದು 85 ನೇ ಸ್ಥಾನಕ್ಕೆ ಕುಸಿದಿದೆ.

ಟಾಪ್ ಐದರಲ್ಲಿ ಇರದ ಅತ್ಯಂತ ಗಮನಾರ್ಹವಾಗಿ ಪಾಸ್‌ಪೋರ್ಟ್‌ಗಳಲ್ಲಿ ಒಂದು ಅಮೆರಿಕನ್ ಪಾಸ್‌ಪೋರ್ಟ್. ಅಮೆರಿಕನ್ನರು 186 ವೀಸಾ-ಮುಕ್ತ ತಾಣಗಳಿಗೆ ಪ್ರವೇಶವನ್ನು ಪಡೆಯುವ ಮೂಲಕ ಅಮೆರಿಕದ ಪಾಸ್‌ಪೋರ್ಟ್ ಒಂಬತ್ತನೇ ಸ್ಥಾನದಲ್ಲಿದೆ. ಇದು 2014 ರಲ್ಲಿ ನಂ 1 ಸ್ಥಾನದಲ್ಲಿತ್ತು.

ಟಾಪ್ ನ್ಯೂಸ್

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

12(1

Gudibande: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.