Nasrallah ಹ*ತ್ಯೆ ಖಂಡಿಸಿ ಕಾಶ್ಮೀರದಲ್ಲಿ ಬೃಹತ್ ಪ್ರತಿಭಟನೆ; ಮಾಜಿ ಸಿಎಂ ಮುಫ್ತಿ ಬೆಂಬಲ !
ಕೊನೆಯ ಹಂತದ ಚುನಾವಣ ಪ್ರಚಾರದ ವೇಳೆ ಭಾವನಾತ್ಮಕವಾಗಿ ವಿಚಾರ ಬಳಕೆ!
Team Udayavani, Sep 29, 2024, 5:00 PM IST
ಶ್ರೀನಗರ: ದಕ್ಷಿಣ ಲೆಬನಾನ್‌ನ ಉಗ್ರ ಸಂಘಟನೆಯ ಪ್ರಧಾನ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾ (64)ನನ್ನು ಹತ್ಯೆಗೈದಿರುವುದನ್ನು ಖಂಡಿಸಿ ಶನಿವಾರ(ಸೆ28 ) ಮಧ್ಯಾಹ್ನದ ಬಳಿಕ ನೂರಾರು ಜನರು ಪ್ರತಿಭಟನೆ ನಡೆಸಿ ಇಸ್ರೇಲ್ ಮತ್ತು ಅಮೆರಿಕ ವಿರುದ್ಧ ಘೋಷಣೆ ಕೂಗಿದ್ದಾರೆ. ಪ್ರತಿಭಟನೆಗೆ ಮಾಜಿ ಸಿಎಂ ಮತ್ತು ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಬೆಂಬಲ ಸೂಚಿಸಿದ್ದಾರೆ.
ಹಸನ್ ನಸ್ರಲ್ಲಾ ಹತ್ಯೆಗೆ ಹಿರಿಯ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಅಗಾ ಸೈಯದ್ ರುಹುಲ್ಲಾ ಮೆಹದಿ ಕೂಡ ಸಂತಾಪ ಸೂಚಿಸಿ ತಮ್ಮ ಚುನಾವಣ ಪ್ರಚಾರವನ್ನು ರದ್ದುಗೊಳಿಸಿದ್ದಾರೆ.
ಶ್ರೀನಗರ ಮತ್ತು ನೆರೆಯ ಬುದ್ಗಾಮ್ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಾವಿರಾರು ಜನರು ಬೀದಿಗಿಳಿದು ನಸ್ರಲ್ಲಾ ಹತ್ಯೆಯನ್ನು ವಿರೋಧಿಸಿದ್ದಾರೆ. ಇಸ್ರೇಲ್ ವಿರೋಧಿ ಮತ್ತು ಅಮೆರಿಕ ವಿರೋಧಿ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು ನಸ್ರಲ್ಲಾ ಭಾವ ಚಿತ್ರಗಳನ್ನು ಹಿಡಿದು ಬೀದಿಗಳಲ್ಲಿ ಮೆರವಣಿಗೆ ನಡೆಸಿದ್ದಾರೆ.
ಮೆಹಬೂಬಾ ಮುಫ್ತಿ ಚುನಾವಣ ಪ್ರಚಾರವನ್ನು ಕೊನೆಗೊಳಿಸುವುದಾಗಿ ಘೋಷಿಸಿದರು. ಅಕ್ಟೋಬರ್ 1 ರಂದು ಮೂರನೇ ಮತ್ತು ಕೊನೆಯ ಹಂತದಲ್ಲಿ ಉತ್ತರ ಕಾಶ್ಮೀರದ 16 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಭಾನುವಾರ ಚುನಾವಣ ಪ್ರಚಾರದ ಕೊನೆಯ ದಿನವಾಗಿದೆ. ಕಾಶ್ಮೀರದ ಶಿಯಾ ಸಮುದಾಯ ನಸ್ರಲ್ಲಾನ್ನು “ಪ್ರತಿರೋಧದ ಸಂಕೇತ” ಎಂದು ಪರಿಗಣಿಸಿದ್ದು ಪ್ರತಿಭಟನೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.