Panaji: ಭಾರಿ ಮಳೆಗೆ ಕುಸಿದು ಬಿದ್ದ ಹೆದ್ದಾರಿ ಬದಿ ತಡೆಗೋಡೆ… ತಪ್ಪಿದ ದುರಂತ
Team Udayavani, Jun 22, 2024, 4:41 PM IST
ಪಣಜಿ: ಕಳೆದ 2 ದಿನಗಳಿಂದ ಗೋವಾದಲ್ಲಿ ಮಳೆಯ ಆರ್ಭಟ ಜೋರಾಗಿದೆ. ಭಾರೀ ಮಳೆಯಿಂದಾಗಿ ಗೋವಾದ ಹಲವೆಡೆ ರಸ್ತೆಯಲ್ಲಿ ಹಾಗೂ ಮನೆಗಳ ಮೇಲೆ ಮರಗಳು ಬಿದ್ದಿವೆ. ಪೆಡ್ನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಕ್ಷಣಾ ಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಅಥವಾ ಇತರೆ ಹಾನಿಯಾಗಿಲ್ಲ ಎನ್ನಲಾಗಿದೆ.
ಜೋರು ಮಳೆಯಾದರೆ ಈ ತಡೆಗೋಡೆ ಉಳಿಯುವುದಿಲ್ಲ ಎಂಬ ಮಾತು ಸ್ಥಳೀಯರಲ್ಲಿ ಆಗಲೇ ಇತ್ತು. ಬರುವ ಮಳೆಗಾಲದ ಒಳಗಾಗಿ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ಎಂವಿಆರ್ ಇನ್‍ಫ್ರಾ ಒಟ್ಟಾರೆ ಕಾರ್ಯನಿರ್ವಹಣೆಯ ಬಗ್ಗೆ ಅನುಮಾನದ ಮಾತುಗಳು ಕೇಳಿಬರುತ್ತಿದೆ. ರಸ್ತೆಯ ತಡೆಗೋಡೆ ಕುಸಿತದ ಸಂದರ್ಭದಲ್ಲಿ ಅದೃಷ್ಟವಶಾತ್ ಈ ಸ್ಥಳಕ್ಕೆ ಬಂದ ನಾಲ್ಕು ಚಕ್ರದ ವಾಹನಕ್ಕೆ ಯಾವುದೇ ಅಪಘಾತ ಸಂಭವಿಸಿಲ್ಲ. ಆದರೆ ಒಟ್ಟಾರೆ ಪರಿಸ್ಥಿತಿ ನೋಡಿದರೆ ಮುಂದಿನ ದಿನಗಳಲ್ಲಿ ಇಂತಹ ಹಲವು ಘಟನೆಗಳು ಸಂಭವಿಸಿ ಪ್ರಯಾಣಿಕರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ.
ಕಳೆದ ಎರಡು ದಿನಗಳಲ್ಲಿ, ಉತ್ತರ ಗೋವಾ ಮತ್ತು ಅದರಂತೆ ಗ್ರಾಮೀಣ ಭಾಗದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವು ಸ್ಥಳಗಳಲ್ಲಿ ಮರಗಳು ನೆಲಕ್ಕುರುಳಿದೆ. ಇದರಿಂದ ಕೆಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಮರಗಳು ಬಿದ್ದು ಹಲವು ಮನೆಗಳಿಗೂ ಹಾನಿಯಾಗಿದೆ. ಪೆಡ್ನೆ ಅಗ್ನಿಶಾಮಕ ದಳದ ಸಿಬ್ಬಂದಿ ಈ ಎಲ್ಲ ಮರಗಳನ್ನು ಕಡಿದು ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಇದನ್ನೂ ಓದಿ: RenukaSwamy Case: ದರ್ಶನ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.