ರಾಜಸ್ಥಾನಕ್ಕೂ ವ್ಯಾಪಿಸಿದ ವಿವಾದ:ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಪ್ರವೇಶ ತಡೆದ ಕಾಲೇಜು
Team Udayavani, Feb 12, 2022, 8:47 AM IST
ಜೈಪುರ: ಕರ್ನಾಟಕದ ಉಡುಪಿಯ ಕಾಲೇಜೊಂದರಲ್ಲಿ ಆರಂಭವದ ಹಿಜಾಬ್ ವಿವಾದ ಇದೀಗ ರಾಜಸ್ಥಾನಕ್ಕೂ ವ್ಯಾಪಿಸಿದೆ. ರಾಜಸ್ಥಾನದ ಜೈಪುರ ಜಿಲ್ಲೆಯ ಚಕ್ಸು ಎಂಬಲ್ಲಿನ ಖಾಸಗಿ ಕಾಲೇಜೊಂದು ಶುಕ್ರವಾರ ಬುರ್ಖಾ ಧರಿಸಿ ಬಂದ ಕೆಲವು ಹುಡುಗಿಯರನ್ನು ಕಾಲೇಜಿಗೆ ಪ್ರವೇಶಿಸದಂತೆ ತಡೆದಿದೆ ಎಂದು ವರದಿ ತಿಳಿಸಿದೆ.
ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಕಾಂಗ್ರೆಸ್ ಶಾಸಕ ವಾಜಿಬ್ ಅಲಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಅವರು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಘಟನೆಯ ಬಗ್ಗೆ ಗಮನಹರಿಸಿ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.
“ದ್ವೇಷದ ವ್ಯಾಪಾರಿಗಳು ಈಗ ರಾಜಸ್ಥಾನವನ್ನು ವಿಷಪೂರಿತಗೊಳಿಸಲು ಬಯಸುತ್ತಾರೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಈ ಘಟನೆಯನ್ನು ಅರಿತುಕೊಂಡು ಕಠಿಣ ಕ್ರಮ ಕೈಗೊಳ್ಳಬೇಕು ” ಎಂದು ವಾಜಿದ್ ಅಲಿ ಬರೆದಿದ್ದಾರೆ.
ಇದನ್ನೂ ಓದಿ:ಹಿಜಾಬ್ ಸಮವಸ್ತ್ರವಲ್ಲ; ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಹೇಳಿಕೆ
ವರದಿಗಳ ಪ್ರಕಾರ, ಕಸ್ತೂರಿ ದೇವಿ ಕಾಲೇಜಿನ ಕೆಲವು ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಕಾಲೇಜು ಆಡಳಿತ ಮಂಡಳಿ ಅವಕಾಶ ನೀಡಿಲ್ಲ. ಇದರಿಂದ ಕೋಪಗೊಂಡ ವಿದ್ಯಾರ್ಥಿನಿಯರು ತಮ್ಮ ಕುಟುಂಬದವರಿಗೆ ಮಾಹಿತಿ ನೀಡಿ, ಅವರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾರೆ.
ಪೊಲೀಸರೂ ಸ್ಥಳಕ್ಕೆ ಆಗಮಿಸಿದ್ದು, ವಿದ್ಯಾರ್ಥಿಗಳ ಪೋಷಕರನ್ನು ಸಮಾಧಾನಪಡಿಸಿದ್ದಾರೆ. “ಕಾಲೇಜಿನಲ್ಲಿ ಸಮವಸ್ತ್ರವನ್ನು ಧರಿಸಲು ಅವರಿಗೆ ಮನವರಿಕೆಯಾಯಿತು. ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಲಾಗಿದೆ” ಎಂದು ಚಕ್ಸು ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಜಿತೇಂದ್ರ ಸಿಂಗ್ ಅವರು ಪಿಟಿಐಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
WhatsApp ನಲ್ಲಿ ಧರ್ಮ ಆಧರಿತ ಗುಂಪು: ಕೇರಳ ಐಎಎಸ್ ಅಧಿಕಾರಿ ದೂರು
Elephants; ಮಧ್ಯಪ್ರದೇಶ ಬಳಿಕ ಒಡಿಶಾದಲ್ಲಿ 7 ತಿಂಗಳಿನಲ್ಲಿ 50 ಆನೆಗಳ ಸಾವು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.