![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 11, 2022, 7:25 AM IST
ನವದೆಹಲಿ: ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಈ ವಾರವೇ ತೀರ್ಪು ಪ್ರಕಟಿಸುವ ಸಾಧ್ಯತೆಗಳು ಇವೆ.
ನ್ಯಾ.ಹೇಮಂತ್ ಗುಪ್ತಾ ಮತ್ತು ನ್ಯಾ.ಸುಧಾಂಶು ಧುಲಿಯಾ ಅವರನ್ನೊಳಗೊಂಡ ನ್ಯಾಯಪೀಠ ಸತತ ಹತ್ತು ದಿನಗಳ ವರೆಗೆ ವಿಚಾರಣೆ ನಡೆಸಿ ಸೆ.22ರಂದು ತೀರ್ಪು ಕಾಯ್ದಿರಿಸಿತ್ತು.
ನ್ಯಾ.ಹೇಮಂತ್ ಗುಪ್ತಾ ಅವರು ಅ.16ರಂದು ನಿವೃತ್ತಿಯಾಗಲಿದ್ದಾರೆ. ಹೀಗಾಗಿ, ಈ ವಾರವೇ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಸಲ್ಲಿಸಲಾಗಿದ್ದ ಮೇಲ್ಮನವಿ ಅರ್ಜಿಗಳ ಬಗ್ಗೆ ತೀರ್ಪು ಪ್ರಕಟವಾಗಲಿದೆ.
ಕರ್ನಾಟಕದ ಉಡುಪಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೆಲವು ವಿದ್ಯಾರ್ಥಿನಿಯರು ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದ್ದರು.
ಈ ವಿಚಾರ ಕರ್ನಾಟಕ ಹೈಕೋರ್ಟ್‌ನಲ್ಲಿಯೂ ವಿಚಾರಣೆ ನಡೆದು ಮಾ.15ರಂದು ವಿದ್ಯಾರ್ಥಿನಿಯವರ ಕೋರಿಕೆ ತಿರಸ್ಕರಿಸಿ, ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಇಲ್ಲ ಎಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.