Himachal Pradesh; ಸಚಿವ ಸ್ಥಾನಕ್ಕೆ ವಿಕ್ರಮಾದಿತ್ಯ ರಾಜೀನಾಮೆ: ಕೈ ಸರಕಾರ ಸಂಕಷ್ಟದಲ್ಲಿ
6 ಬಾರಿ ಮುಖ್ಯಮಂತ್ರಿಯಾಗಿದ್ದ ವೀರಭದ್ರ ಸಿಂಗ್ ಅವರ ಪುತ್ರ...
Team Udayavani, Feb 28, 2024, 2:34 PM IST
ಶಿಮ್ಲಾ: ಹಿಮಾಚಲ ಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನದ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಬಿಜೆಪಿಯ ಹರ್ಷ್ ಮಹಾಜನ್ ವಿರುದ್ಧ ಸೋಲನುಭವಿಸಿದ ನಂತರ ಕಾಂಗ್ರೆಸ್ ಸರಕಾರದಲ್ಲಿ ಭಾರೀ ಬಿಕ್ಕಟ್ಟು ತಲೆದೋರಿರುವ ನಡುವೆ, ಆರು ಬಾರಿ ಮುಖ್ಯಮಂತ್ರಿಯಾಗಿದ್ದ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ , ಬುಧವಾರ ಲೋಕೋಪಯೋಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
34ರ ಹರೆಯದ ವಿಕ್ರಮಾದಿತ್ಯ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರ ಸಂಪುಟದಿಂದ ಹೊರ ಬಂದಿರುವುದು ಕಾಂಗ್ರೆಸ್ ಗೆ ಭಾರೀ ಹೊಡೆತ ನೀಡಿದೆ. ಬಜೆಟ್ ಮಂಡನೆಯಾಗಲಿರುವ ವಿಧಾನಸಭೆ ಅಧಿವೇಶನದ ಕೆಲವೇ ಕ್ಷಣಗಳ ಮೊದಲು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
”ಸದ್ಯದ ಪರಿಸ್ಥಿತಿಯಲ್ಲಿ ಸಚಿವರಾಗಿ ಮುಂದುವರಿಯುವುದು ಒಳ್ಳೆಯದಲ್ಲ. ಮುಂದಿನ ದಿನಗಳಲ್ಲಿ ನನ್ನ ಬೆಂಬಲಿಗರೊಂದಿಗೆ ಸೂಕ್ತ ಸಮಾಲೋಚನೆ ನಡೆಸಿ ನನ್ನ ಮುಂದಿನ ಕ್ರಮವನ್ನು ನಿರ್ಧರಿಸುತ್ತೇನೆ. ಶಿಷ್ಟಾಚಾರದ ಪ್ರಕಾರ ನಾನು ನನ್ನ ರಾಜೀನಾಮೆಯನ್ನು ಮುಖ್ಯಮಂತ್ರಿ, ರಾಜ್ಯಪಾಲರಿಗೆ ಹಸ್ತಾಂತರಿಸುತ್ತಿದ್ದೇನೆ. ನಾನು ಸರಿಯಾದ ವಿಷಯಗಳನ್ನು ಬೆಂಬಲಿಸುತ್ತಾ ಮತ್ತು ತಪ್ಪುಗಳನ್ನು ವಿರೋಧಿಸುತ್ತಾ ಮುಂದುವರಿಯುತ್ತೇನೆ” ಎಂದು ಹೇಳಿದ್ದಾರೆ.
68 ಸದಸ್ಯಬಲದ ಹಿಮಾಚಲ ವಿಧಾನಸಭೆಯಲ್ಲಿ9 ಶಾಸಕರು ಅಡ್ಡಮತದಾನ ಮಾಡಿದ ಪರಿಣಾಮ ಕಾಂಗ್ರೆಸ್ ಬಲ 34ಕ್ಕೆ ಕುಸಿದಿದೆ. ವಿಧಾನಸಭೆಯಲ್ಲಿ ಬಹುಮತಕ್ಕೆ 35 ಸದಸ್ಯರ ಬೆಂಬಲ ಅಗತ್ಯವಾಗಿದ್ದು. ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಅಭಿಷೇಕ್ ಮನು ಸಿಂಘ್ವಿ ವಿರುದ್ಧ ಕಾಂಗ್ರೆಸ್ ನ ಆರು ಶಾಸಕರು ಅಡ್ಡಮತದಾನ ಮಾಡಿದ್ದರಿಂದ ಬಿಜೆಪಿ ಹರ್ಷ ಮಹಾಜನ್ ಜಯಗಳಿಸಿದ್ದಾರೆ.
25ಶಾಸಕರನ್ನು ಹೊಂದಿರುವ ಬಿಜೆಪಿ, ಮೂವರು ಪಕ್ಷೇತರರು, ಆರು ಕಾಂಗ್ರೆಸ್ ಬಂಡಾಯ ಶಾಸಕರೊಂದಿಗೆ ಹೊಸ ಸರಕಾರ ರಚಿಸಲು ಕಸರತ್ತು ನಡೆಸಿದೆ. ಹಿಮಾಚಲ ಪ್ರದೇಶ ಮಾಜಿ ಸಿಎಂ, ಬಿಜೆಪಿ ಮುಖಂಡ ಜೈರಾಮ್ ಠಾಕೂರ್ ಬುಧವಾರ ರಾಜ್ಯಪಾಲ ಶಿವಪ್ರತಾಪ್ ಶುಕ್ಲಾ ಅವರನ್ನು ಭೇಟಿಯಾಗಿ ನೂತನ ಸರಕಾರ ರಚನೆಗೆ ಅವಕಾಶ ನೀಡುವಂತೆ ಮನವಿ ಸಲ್ಲಿಸಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.