ರಫೇಲ್ ನಿರ್ಮಾಣಕ್ಕೆ ಎಚ್‌ಎಎಲ್? : ಈಗಾಗಲೇ ಪೂರ್ತಿಯಾಗಿವೆ ಹಲವು ಸುತ್ತಿನ ಚರ್ಚೆ
Team Udayavani, Feb 19, 2020, 8:45 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ರಫೇಲ್ ಯುದ್ಧ ವಿಮಾನ ನಿರ್ಮಾಣದಲ್ಲಿ ಬೆಂಗಳೂರಿನಲ್ಲಿರುವ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ಭಾಗಿಯಾಗಲಿದೆಯೇ? ಹೌದು ಎನ್ನುವಂತಿದೆ ಸದ್ಯ ನಡೆಯುತ್ತಿರುವ ಬೆಳವಣಿಗೆ. ಫ್ರಾನ್ಸ್‌ನ ಡಸೋ ಏವಿಯೇಷನ್ ಮತ್ತು ಎಚ್‌ಎಎಲ್ ಈ ಬಗ್ಗೆ ಮತ್ತೆ ಮಾತುಕತೆಯಲ್ಲಿ ತೊಡಗಿವೆ. ಮಿರಾಜ್ 2000 ಯುದ್ಧ ವಿಮಾನವನ್ನು ಮೇಲ್ದರ್ಜೆಗೆ ಏರಿಸುವ ಕೆಲಸದಲ್ಲಿ ಎರಡೂ ಕಂಪನಿಗಳು ಜತೆಗೂಡಿ ಕೆಲಸ ಮಾಡಿದ್ದವು.
ಕೆಲ ದಿನಗಳ ಹಿಂದಷ್ಟೇ ರಕ್ಷಣಾ ಪಡೆಗಳ ಮುಖ್ಯಸ್ಥ ಜ.ಬಿಪಿನ್ ರಾವತ್ ನಾಲ್ಕು ವರ್ಷಗಳ ಅವಧಿಯಲ್ಲಿ 36 ಯುದ್ಧ ವಿಮಾನ ಗಳನ್ನು ಖರೀದಿಸಲಾಗುತ್ತದೆ ಎಂದು ಹೇಳಿದ್ದರು. ಅದಕ್ಕೆ ಬೇಕಾಗಿರುವ ಬಿಡಿಭಾಗಗಳನ್ನು ಬೆಂಗಳೂರಿನ ಎಚ್‌ಎಎಲ್‌ನಲ್ಲಿಯೇ ಸಿದ್ಧಪಡಿಸುವ ಬಗ್ಗೆ ಚರ್ಚೆಗಳು ನಡೆದಿವೆ ಎಂದು “ದ ಇಕನಾಮಿಕ್ ಟೈಮ್ಸ್’ ವರದಿ ಮಾಡಿದೆ.
ಸದ್ಯದ ಒಪ್ಪಂದದ ಪ್ರಕಾರ 60 ಸಾವಿರ ಕೋಟಿ ರೂ. ಮೌಲ್ಯದ ರಫೇಲ್ ಯುದ್ಧ ವಿಮಾನಗಳನ್ನು ನಾಗ್ಪುರದಲ್ಲಿರುವ ರಿಲಯನ್ಸ್ ಡಿಫೆನ್ಸ್ ಕಾರ್ಖಾನೆಯಲ್ಲಿ ಜೋಡಿಸಲಾಗುತ್ತದೆ. ಇವೆಲ್ಲದರ ಜತೆಗೆ ದೇಶದ ರಕ್ಷಣೆಗೆ ಹಲವು ಕೊಡುಗೆಗಳನ್ನು ನೀಡಿರುವ ಎಚ್‌ಎಎಲ್ ಅನ್ನು ಸೇರ್ಪಡೆಗೊಳಿಸುವ ಬಗ್ಗೆ ನಿರ್ಧರಿಸಲಾಗುತ್ತಿದೆ. ದೇಶದ ಎರಡು ವಾಯುನೆಲೆಗಳಲ್ಲಿ ರಫೇಲ್ ಯುದ್ಧ ವಿಮಾನಗಳನ್ನು ಇಳಿಸಲು ಮತ್ತು ಐಎಎಫ್ ಸಿಬ್ಬಂದಿಗೆ ಅದರ ಬಗ್ಗೆ ಡಸೋ ಏವಿಯೇಷನ್ ವತಿಯಿಂದಲೇ ತರಬೇತಿ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.