ಜಮ್ಮು-ಕಾಶ್ಮೀರ, ಕೇಂದ್ರಾಡಳಿತ ಪ್ರದೇಶದ ಜನತೆಗೆ “ಆಯುಷ್ಮಾನ್ ಭಾರತ್” ಯೋಜನೆ ಜಾರಿ
ಎಲ್ಲಾ ನಾಗರಿಕರ ಪ್ರತೀ ಕುಟುಂಬಕ್ಕೆ 5 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡಲಿದೆ
Team Udayavani, Dec 26, 2020, 2:49 PM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಡಿ.26ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿ ಎಂಜೆಎವೈ)ಯನ್ನು ಉದ್ಘಾಟಿಸಲಿದ್ದು, ಈ ಯೋಜನೆಯ ಪ್ರಯೋಜನ ಜಮ್ಮು-ಕಾಶ್ಮೀರ ಮತ್ತು ಕೇಂದ್ರಾಡಳಿತ ಪ್ರದೇಶದ ಎಲ್ಲಾ ನಿವಾಸಿಗಳಿಗೆ ಲಭ್ಯವಾಗಲಿದೆ ಎಂದು ಹೇಳಿದರು.
ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ (ಎಬಿ-ಪಿ ಎಂಜೆಎವೈ)ಯ ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ನಾ ಕೂಡಾ ಭಾಗವಹಿಸಿದ್ದರು.
ಈ ಸ್ಕೀಮ್ ಎಲ್ಲಾ ವಿಧದ ಆರೋಗ್ಯ ಸಂಬಂಧಿ ಹಾಗೂ ಆರ್ಥಿಕ ರಕ್ಷಣೆ ನೀಡುವುದರ ಜತೆಗೆ ಅಗತ್ಯವಿರುವ ಆರೋಗ್ಯ ಸೇವೆಯನ್ನು ಜನತೆಗೆ ಒದಗಿಸಲಿದೆ. ಜಮ್ಮು-ಕಾಶ್ಮೀರದ ಮತ್ತು ಕೇಂದ್ರಾಡಳಿತ ಪ್ರದೇಶದೆ ಎಲ್ಲಾ ನಾಗರಿಕರ ಪ್ರತೀ ಕುಟುಂಬಕ್ಕೆ 5 ಲಕ್ಷ ರೂಪಾಯಿವರೆಗೆ ಆರ್ಥಿಕ ನೆರವು ನೀಡಲಿದೆ. ಅಲ್ಲದೇ ಇದು ಹೆಚ್ಚುವರಿಯಾಗಿ ಸುಮಾರು 15 ಲಕ್ಷ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಇದನ್ನೂ ಓದಿ:ಬ್ರಿಟನ್ ನಿಂದ ಮೈಸೂರಿಗೆ ಬಂದ ಒಬ್ಬರಲ್ಲಿ ಕೋವಿಡ್ ಸೋಂಕು ಪತ್ತೆ: ರೋಹಿಣಿ ಸಿಂಧೂರಿ
21 ಲಕ್ಷ ಮಂದಿಗೆ ಇದರಿಂದ ಪ್ರಯೋಜನವಾಗಲಿದೆ. ಪ್ರತೀ ಕುಟುಂಬಕ್ಕೆ 5 ಲಕ್ಷ ರೂ.ಮೌಲ್ಯದ ಆರೋಗ್ಯ ವಿಮೆ ಇದರ ವ್ಯಾಪ್ತಿಯಲ್ಲಿ ಸಿಗಲಿದೆ. ವಿಶೇಷ ಸ್ಥಾನಮಾನ ರದ್ದುಗೊಂಡ ಬಳಿಕ ಕೇಂದ್ರಾಡಳಿತ ಪ್ರದೇಶಕ್ಕೂ ಕೇಂದ್ರದ ಯೋಜನೆಗಳು ಈಗ ವಿಸ್ತರಣೆಯಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.