ಕತ್ತಲಾದ ಮೇಲೂ ಐತಿಹಾಸಿಕ ಸ್ಥಳಗಳು ಓಪನ್
Team Udayavani, Nov 26, 2018, 6:00 AM IST
ನವದೆಹಲಿ: ಎಲ್ಲವೂ ಅಂದುಕೊಂಡಂತಾದರೆ ಪುರಾತತ್ವ ಇಲಾಖೆಯಡಿ ಬರುವ ಸುಮಾರು 4000 ಐತಿಹಾಸಿಕ ಸ್ಥಳಗಳು ಸೂರ್ಯಾಸ್ತದ ನಂತರವೂ ತೆರೆದಿರಲಿವೆ…!
ಕೇಂದ್ರ ಸಂಸ್ಕೃತಿ ಸಚಿವಾಲಯ ಈ ಬಗ್ಗೆ ಯೋಜನೆಯೊಂದನ್ನು ರೂಪಿಸಿದ್ದು, ಈ ಐತಿಹಾಸಿಕ ಸ್ಥಳಗಳಿಗೆ ಇನ್ನಷ್ಟು ವಿದೇಶಿ ಮತ್ತು ದೇಶೀಯ ಪ್ರವಾಸಿಗರನ್ನು ಸೆಳೆಯಲು ಪ್ರಯತ್ನಿಸುತ್ತಿದೆ. ಇದರ ಅಂಗವಾಗಿಯೇ ಈ ಐತಿಹಾಸಿಕ ಸ್ಥಳಗಳಿಗೆ ರಾತ್ರಿ 9ರವರೆಗೂ ಪ್ರವೇಶ ನೀಡುವ ಬಗ್ಗೆ ರೂಪುರೇಷೆ ತಯಾರಿಸಲಾಗುತ್ತಿದೆ ಎಂದು ಇಲಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಏನು ಯೋಜನೆ?
ದೇಶದ ಬಹುತೇಕ ಪ್ರವಾಸಿ ಸ್ಥಳಗಳಲ್ಲಿ ಸಂಜೆಯಾಗುತ್ತಲೇ ಪ್ರವೇಶ ನಿಷೇಧಿಸಲಾಗುತ್ತದೆ. ಹೀಗಾಗಿ ಸಂಜೆ ಕಳೆದ ಬಳಿಕ ಪ್ರವಾಸಿಗರು ವೃಥಾ ಕಾಲಹರಣ ಮಾಡುತ್ತಾರೆ. ಇದರಿಂದ ಎಷ್ಟೋ ಪ್ರವಾಸಿಗರು ಹಲವಾರು ಕ್ಷೇತ್ರಗಳನ್ನು ಸಂದರ್ಶಿಸುವುದೇ ಇಲ್ಲ. ಐತಿಹಾಸಿಕ ಸ್ಥಳಗಳಲ್ಲಿ ಹೆಚ್ಚಿನ ವಿದ್ಯುತ್ ವ್ಯವಸ್ಥೆ, ಧ್ವನಿ-ಬೆಳಕು ಪ್ರದರ್ಶನ, ವಸ್ತು ಪ್ರದರ್ಶನಗಳಂಥ ಆಕರ್ಷಣೆಗಳನ್ನು ಆರಂಭಿಸುವುದರಿಂದ ಐತಿಹಾಸಿಕ ಸ್ಥಳಗಳಿಗೆ ಜನರ ಆಗಮನವೂ ಹೆಚ್ಚುತ್ತದೆ. ಜೊತೆಗೆ ಉದ್ಯಮ ಪ್ರವಾಸ, ಮತ್ತಿತರ ಉದ್ದೇಶಗಳಿಗಾಗಿ ಭಾರತಕ್ಕೆ ಬಂದವರು ಸಂಜೆ ವೇಳೆ ಇಂಥ ಐತಿಹಾಸಿಕ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಬೆಳಕು ಕೊಡಿ
ಸದ್ಯ ಈ ಐತಿಹಾಸಿಕ ಸ್ಥಳಗಳಿಗೆ ಇರುವ ಒಂದೇ ಒಂದು ಸಮಸ್ಯೆ ಬೆಳಕು ಮತ್ತು ಭದ್ರತಾ ವ್ಯವಸ್ಥೆ. ಹೇಗಾದರೂ ಮಾಡಿ ಭದ್ರತಾ ವ್ಯವಸ್ಥೆಯನ್ನು ನೀಡಬಹುದು, ಆದರೆ ಎಷ್ಟೋ ಸ್ಥಳಗಳಲ್ಲಿ ಸರಿಯಾದ ಬೆಳಕಿನ ವ್ಯವಸ್ಥೆಯೇ ಇರುವುದಿಲ್ಲ. ಹೀಗಾಗಿ ಮೊದಲು ಈ ಭಾರತೀಯ ಪುರಾತತ್ವ ಇಲಾಖೆಗೆ ಸೇರಿದ ಸ್ಥಳಗಳಿಗೆ ಬೆಳಕಿನ ವ್ಯವಸ್ಥೆ ಮಾಡಬೇಕಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಜತೆಗೆ ಶೌಚಾಲಯ ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನೂ ನೀಡಬೇಕಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.